This is the title of the web page
This is the title of the web page

Please assign a menu to the primary menu location under menu

Local News

ಉದ್ಯಮಿಯಾಗು ಉದ್ಯೋಗ ನೀಡು ಶಿರ್ಷಿಕೆಯಡಿ ನಾಳೆ ಕೈಗಾರಿಕಾ ಅದಾಲತ್ ಕಾರ್ಯಕ್ರಮ


ಬೆಳಗಾವಿ:ಉದ್ಯಮಿಗಳ ಸಮಸ್ಯೆಗಳನ್ನು ಬಗೆಹರಿಸಲು ಮತ್ತು ಪ್ರೊತ್ಸಾಯಿಸಿಲು ಕೈಗಾರಿಕೆ ಇಲಾಖೆ ವತಿಯಿಂದ ಕೈಗಾರಿಕಾ ಅದಾಲತ್ ಕಾರ್ಯಕ್ರಮವನ್ನು ಏಪ್ರಿಲ್ 8ರಂದು ವಿಟಿಯು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಹೇಳಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಸರ್ಕಾರವು ಉದ್ಯಮಿಗಳ ಮನೆ ಬಾಗಿಲಿಗೆ ಹೋಗಿ ಉದ್ಯಮದಾರರ ಸಮಸ್ಯೆ ಆಲಿಸಿ ಇತ್ಯರ್ಥ ಪಡಿಸುವ ಪ್ರತ್ನಕ್ಕೆ ಮುಂದಾಗಿದ್ದು ಅದರ ಬಾಗವಾಗಿ ಕೈಗಾರಿಕಾ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಬೆಳಿಗ್ಗೆ 9.30ಕ್ಕೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು ಒಂದು ದಿನದ ಕಾರ್ಯಾಗಾರ ಇದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಉಮೇಶ ಕತ್ತಿ ಘನ ಉಪಸ್ಥಿತರಿರುವರು ಮತ್ತು ಕೈಗಾರಿಕಾ ಸಚಿವ ಡಾ.ಮುರಗೇಶ ನಿರಾಣಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಇನ್ನು ಸಚಿವೆ ಶಶಿಕಲಾ ಜೊಲ್ಲೆ ಮತ್ತು ಸಚಿವ ಎನ್. ನಾಗರಾಜು ಅವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಶಾಸಕ ಅಭಯ ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಮಹೇಶ ಮಾಶಾಲ್ ಅವರು ಮೋಟಿವೇಶನ್ ಸ್ಪೀಚ್ ನೀಡಲಿದ್ದು ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಮತ್ತು ಇಲಾಖೆಯ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ಉದ್ಯೋಗಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.


Leave a Reply