ಕೊಪ್ಪಳ ಜುಲೈ ೨೨ : ನಿರಂತರ ಮಳೆಯ ಕಾರಣ ತೇವಾಂಶದ ಪ್ರಮಾಣದಲ್ಲಿ ಏರು ಪೇರಾಗಲಿದ್ದು ಬಿತ್ತನೆ ಮಾಡಿದ ವಿವಿಧ ಬೆಳೆಗಳ ಪಾಲನೆ-ಪೋಷಣೆಗೆ ಸಂಬಂಧಿಸಿದಂತೆ ಸಮರ್ಪಕ ಬೆಳೆ ನಿರ್ವಹಣೆಗೆ ರೈತರಿಗೆ ಸಲಹೆ ಸೂಚನೆ ಕೊಡಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಕೃಷಿ ಹಾಗೂ ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಹಾಲನಲ್ಲಿ ಜುಲೈ ೨೧ರಂದು ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
೨೦೨೩-೨೪ನೇ ಸಾಲಿನಲ್ಲಿ ರೈತರ ಬೆಳೆ ಸಮೀಕ್ಷೆ ಆ್ಯಪ್ ಬಳಸಿ ತಾವೇ ಸ್ವತಃ ಸಮೀಕ್ಷೆ ಮಾಡಲು ರೈತರಿಗೆ ವ್ಯಾಪಕ ಮಾಹಿತಿ ನೀಡಬೇಕು. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಕಂತಿನ ಸಹಾಯಧನ ಸೇರಿದಂತೆ ಯಾವುದೇ ಸೌಕರ್ಯ ಪಡೆದುಕೊಳ್ಳಲು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರೈತರು ಇ-ಕೆವೈಸಿ ಮಾಡಿಸಲು ಕ್ರಮ ವಹಿಸಬೇಕು. ಇದಕ್ಕಾಗಿ ಕೃಷಿ, ಕಂದಾಯ, ಗ್ರಾಮ ಆಡಳಿತ ಅಧಿಕಾರಿಗಳು ಒಗ್ಗೂಡಿ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಕೊಪ್ಪಳ ಜಿಲ್ಲೆಯಲ್ಲಿ ಇದುವರೆಗೆ ಶೇ.೧,೨೧,೩೮೬ ರೈತರು ಇ-ಕೆವೈಸಿ ಮಾಡಿಸಿದ್ದು, ಬಾಕಿ ಇರುವ ೩೭,೨೩೧ ರೈತರು ಸಹ ಇ-ಕೆವೈಸಿ ಮಾಡಿಸಿಕೊಳ್ಳಲು ಹಾಗೂ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ೨೦೨೩-೨೪ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆವಿಮೆ ಅಧಿಸೂಚನೆ ಹೊರಡಿಸಿದಂತೆ ಬೆಳೆ ವಿಮೆ ನೋಂದಾಯಿಸಲು ಜುಲೈ ೩೧ರವರೆಗೆ ಅವಕಾಶವಿರುತ್ತದೆ ಎಂಬುದರ ಬಗ್ಗೆ ರೈತರಿಗೆ ತಿಳಿಸಲಾಗುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.
೨೦೨೩-೨೪ನೇ ಸಾಲಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಕೊಪ್ಪಳ ಜಿಲ್ಲೆಯ ರೈತರು ಪಪ್ಪಾಯ ಮಾವು ದ್ರಾಕ್ಷಿ ದಾಳಿಂಬೆ ಮತ್ತು ಹಸಿ ಮೆಣಸಿನಕಾಯಿ ಬೆಳೆಗಳನ್ನು ವಿಮೆಗೆ ಒಳಪಡಿಸುವ ಬಗ್ಗೆ ರೈತರ ಪಾಲಿನ ವಿಮಾ ವಂತಿಗೆಯನ್ನು ಪಾವತಿಸಲು ಜುಲೈ ೩೧ರವರೆಗೆ ಪಾವತಿಸಲು ಅವಕಾಶವಿದೆ. ಯೋಜನೆಯ ರೂಪರೇಷಗಳು ಮತ್ತು ವಿವರಗಳ ಬಗ್ಗೆ ರೈತರಿಗೆ ವ್ಯಾಪಕ ಮಾಹಿತಿ ನೀಡಲಾಗುತ್ತಿದೆ ಎಂದು ಇದೆ ವೇಳೆ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯ ಕೊಪ್ಪಳ, ಕುಷ್ಟಗಿ, ಯಲಬುರ್ಗಾ, ಕುಕನೂರ, ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಾಲೂಕುಗಳು ಸೇರಿ ಒಟ್ಟು ೩,೦೮,೦೦೦ ಹೆಕ್ಟೇರ್ ಪ್ರದೇಶದಲ್ಲಿನ ಬಿತ್ತನೆ ಗುರಿಯ ಪೈಕಿ ಇದುವರೆಗೆ ೧,೯೬,೪೧೮ ಹೆಕ್ಟೇರ್ ಪ್ರದೇಶದಲ್ಲಿ ಮುಂಗಾರು ಹಂಗಾಮಿನ ಸಂದರ್ಭದಲ್ಲಿ ಭತ್ತ, ಶಕ್ತಿಮಾನ್ ಜೋಳ, ಮೆಕ್ಕೆಜೋಳ, ಸಜ್ಜೆ, ನವಣೆ ಸೇರಿದಂತೆ ೧,೪೪,೯೫೦ ಹೆಕ್ಟೇರ್ ಪ್ರದೇಶದಲ್ಲಿ ಏಕದಳ ದಾನ್ಯಗಳನ್ನು ಬೆಳೆಯಲಾಗಿದೆ. ತೊಗರಿ, ಹುರುಳಿ, ಹೆಸರು, ಅಲಸಂದಿ, ಅವರೆ, ಮಡಿಕೆ ಸೇರಿ ೨೭,೧೦೧ ಹೆಕ್ಟೇರ್ ಪ್ರದೇಶದಲ್ಲಿ ದ್ವಿದಳ ದಾನ್ಯಗಳು. ಶೆಂಗಾ, ಸೂರ್ಯಕಾಂತಿ, ಎಳ್ಳು, ಗುರೆಳ್ಳು, ಔಡಲು ಸೇರಿ ೧೦,೪೩೧ ಹೆಕ್ಟೇರ್ ಪ್ರದೇಶದಲ್ಲಿ ಎಣ್ಣೆಕಾಳುಗಳು. ಹತ್ತಿ, ಕಬ್ಬು ಸೇರಿದಂತೆ ೧೩,೯೩೬ ಹೆಕ್ಟೇರ್ ಪ್ರದೇಶದಲ್ಲಿ ವಾಣಿಜ್ಯ ಬೆಳೆಗಳನ್ನು ಬಿತ್ತನೆ ಮಾಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.
ಕೊಪ್ಪಳ, ಕುಷ್ಟಗಿ, ಯಲಬುರ್ಗಾ ಮತ್ತು ಗಂಗಾವತಿ ತಾಲೂಕುಗಳಲ್ಲಿ ಜುಲೈ ೨೦ರವರೆಗೆ ೨೩,೪೩೮ ಮೆ.ಟನ್ ಯೂರಿಯಾ, ೧೨,೬೫೯ ಮೆ.ಟನ್ ಡಿಎಪಿ, ೧೪೮೨ ಮೆ.ಟನ್ ಎಂಓಪಿ, ೩೨,೭೭೬ ಮೆ.ಟನ್ ಎನ್‌ಕೆಪಿಎಸ್ ಮತ್ತು ೪೦೪ ಮೆ.ಟನ್ ಎಸ್‌ಎಸ್‌ಪಿ ಸೇರಿದಂತೆ ಒಟ್ಟು ೭೦,೭೫೯ ಮೆ.ಟನ್ ರಸಗೊಬ್ಬರ ದಾಸ್ತಾನು ಇದೆ. ಅದೇ ರೀತಿ ೭೨೫೫.೩೨ ಕ್ವಿಂಟಲ್ ಬಿತ್ತನೆ ಬೀಜಗಳು ಮಾರಾಟವಾಗಿದ್ದು, ೨೩೫೮ ಕ್ವಿಂಟಲ್ ದಾಸ್ತಾನು ಇದೆ. ವಿವಿಧ ಬಿತ್ತನೆ ಬೀಜವಾರು ಭತ್ತದ ಬೀಜ ೬೩೬.೩೦ ಕ್ವಿಂಟಲ್ ಮಾರಾಟವಾಗಿದ್ದು ೨೦೯.೯೫ ಕ್ವಿಂಟಲ್ ದಾಸ್ತಾನು ಇದೆ. ಮೆಕ್ಕೆಜೋಳ ೫೨೬೫.೫೮ ಕ್ವಿಂಟಲ್ ಮಾರಾಟವಾಗಿದ್ದು ೧೫೫೨.೩೪ ಕ್ವಿಂಟಲ್ ದಾಸ್ತಾನು ಇದೆ. ಸಜ್ಜೆ ಬೀಜ ೪೯೧.೬೬ ಕ್ವಿಂಟಲ್ ಮಾರಾಟವಾಗಿದ್ದು ೧೬೩.೯೨ ಕ್ವಿಂಟಲ್ ದಾಸ್ತಾನು ಇದೆ. ನವಣೆ ೫.೮೮ ಕ್ವಿಂಟಲ್ ಮಾರಾಟವಾಗಿದ್ದು ೪.೭೨ ಕ್ವಿಂಟಲ್ ದಾಸ್ತಾನು ಇದೆ. ಹೆಸರು ಬೀಜ ೧೨೩.೧೬ ಕ್ವಿಂಟಲ್ ಮಾರಾಟವಾಗಿದ್ದು ೪೮.೮೪ ಕ್ವಿಂಟಲ್ ದಾಸ್ತಾನು ಇದೆ. ತೊಗರಿ ಬೀಜ ೭೦೬.೬೫ ಕ್ವಿಂಟಲ್ ಮಾರಾಟವಾಗಿದ್ದು ೨೫೫.೧೫ ಕ್ವಿಂಟಲ್ ದಾಸ್ತಾನು ಇದೆ. ಸೂರ್ಯಕಾಂತಿ ಬೀಜ ೨೫.೮೯ ಕ್ವಿಂಟಲ್ ಮಾರಾಟವಾಗಿದ್ದು ೧೨೩.೩೭ ಕ್ವಿಂಟಲ್ ದಾಸ್ತಾನು ಇದೆ ಎಂದು ಕೃಷಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಪಾಂಡೆಯ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್., ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ಕೃಷ್ಣ ಉಕ್ಕುಂದ, ಪಶುಪಾಲನಾ ಇಲಾಖೆ ಸೇರಿದಂತೆ ಇನ್ನೀತರ ಇಲಾಖೆಗಳ ಅಧಿಕಾರಿಗಳು ಇದ್ದರು.
Gadi Kannadiga > State > ಕೃಷಿ, ತೋಟಗಾರಿಕಾ ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳ ಸೂಚನೆ ಮಳೆ ಹಿನ್ನೆಲೆ; ಸಮರ್ಪಕ ಬೆಳೆ ನಿರ್ವಹಣೆಗೆ ರೈತರಿಗೆ ಸಲಹೆ ನೀಡಿ
ಕೃಷಿ, ತೋಟಗಾರಿಕಾ ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳ ಸೂಚನೆ ಮಳೆ ಹಿನ್ನೆಲೆ; ಸಮರ್ಪಕ ಬೆಳೆ ನಿರ್ವಹಣೆಗೆ ರೈತರಿಗೆ ಸಲಹೆ ನೀಡಿ
Suresh22/07/2023
posted on

More important news
ಆಯುಷ್ಮಾನ್ ಭವ್; ಕಾರ್ಯಕ್ರಮ
25/09/2023
ನೀರು ಪೂರೈಕೆಯಲ್ಲಿ ವ್ಯತ್ಯಯ
25/09/2023
ಶಿಕ್ಷಣ ಅದಾಲತ್
25/09/2023
ಉದ್ಯಮ ಶೀಲತಾ ಪ್ರೇರಣಾ ಕಾರ್ಯಕ್ರಮ
25/09/2023
ಗಣೇಶ ಹಬ್ಬದ ನಿಮಿತ್ಯ ಮದ್ಯ ಮಾರಾಟ ನಿಷೇಧ
22/09/2023
ದನಗಳ ಮಾಲೀಕರ ಗಮನಕ್ಕೆ
22/09/2023