This is the title of the web page
This is the title of the web page

Please assign a menu to the primary menu location under menu

Local News

ಯುವಕಾಂಗ್ರೆಸ್ ನಿಂದ ಸುವರ್ಣ ವಿಧಾನಸೌಧ ಮುತ್ತಿಗೆ ಯತ್ನ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು


ಬೆಳಗಾವಿ: ರಾಜ್ಯ ಸರಕಾರದ ಭ್ರಷ್ಟಾಚಾರ ಸೇರಿದಂತೆ ವಿವಿಧ ಧೋರಣೆಗಳನ್ನು ವಿರೋಧಿಸಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಯುವಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಯುವಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹ್ಮದ್ ನಲ್ಪಾಡ್ ಸೇರಿದಂತೆ ನೂರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಲ್ಲಿಯ ಯಡಿಯೂರಪ್ಪ ಮಾರ್ಗದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಅಲಾರವಾಡ ಕ್ರಾಸ್ ಬಳಿ ತಲುಪುತ್ತಿದ್ದಂತೆ ಪೊಲೀಸರು ತಡೆದು ವಶಕ್ಕೆ ಪಡೆದರು. ಈ ವೇಳೆ ನಲಪಾಡ್ ಮತ್ತು ಪೊಲೀಸರ ಮಧ್ಯೆ ವಾಗ್ವಾದ ನಡೆಯಿತು. ಶಾಸಕಿ ಲಕ್ಷಿ÷್ಮÃ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಕಾಂಗ್ರೆಸ್ ಮುಖಂಡರಾದ ಮೃಣಾಲ್ ಹೆಬ್ಬಾಳಕರ, ರಾಹುಲ್ ಜಾರಕಿಹೊಳಿ ಮೊದಲಾದವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತ ಮೆರವಣಿಗೆ ಆರಂಭವಾಯಿತು. ೪೦ ಪರ್ಸೆಂಟ್ ಕಮೀಷನ್ ವಿಚಾರ, ಪಿಎಸ್ ಐ ಹಗರಣ, ನಿರುದ್ಯೋಗ ಸಮಸ್ಯೆ, ಗುತ್ತಿಗೆದಾರ ಕೆಂಪಣ್ಣ ಬಂಧನ ವಿರೋಧ ಸೇರಿದಂತೆ ಹಲವು ವಿಚಾರಗಳನ್ನ ಮುಂದಿಟ್ಟುಕೊಂಡ ಪ್ರತಿಭಟನೆ ನಡೆಯಿತು. ಕೈಯಲ್ಲಿ ಫಲಕಗಳನ್ನು ಹಿಡಿದು ಸರಕಾರದ ವಿರುದ್ಧ ದಿಕ್ಕಾರ ಕೂಗಿದರು.
ಈ ಸಂದರ್ಭದಲ್ಲಿ ಶಾಸಕಿ ಲಕ್ಷಿ÷್ಮ ಹೆಬ್ಬಾಳ್ಕರ್ ಮಾತನಾಡಿ, ಯುವಕರಿಗೆ ಎರಡು ಕೋಟಿ ಉದ್ಯೋಗ ಕೊಡ್ತಿವಿ ಎಂದವರು ಪಾಲಾಯನ ಮಾಡಿದ್ದಾರೆ. ಬಿಜೆಪಿ ಸರ್ಕಾರ ಪ್ರತಿ ಹಂತದಲ್ಲೂ ಭ್ರಷ್ಟಾಚಾರ ಮಾಡುತ್ತಿದೆ. ೪೦% ನಿಂದ ಯುವಕರು ಹೆಚ್ಚು ನಿರುದ್ಯೋಗಿರಾಗಿದ್ದಾರೆ. ಬಿಜೆಪಿ ಸರ್ಕಾರದ ದುರಾಡಳಿತ ವಿರುದ್ಧ ಯೂತ್ ಕಾಂಗ್ರೆಸ್ ಧ್ವನಿ ಎತ್ತುತ್ತಿದೆ. ಪ್ರತಿ ಹಂತದಲ್ಲೂ ಯೂತ್ ಕಾಂಗ್ರೆಸ್ ಗೆ ನಮ್ಮ ಬೆಂಬಲ ಇರುತ್ತದೆ ಎಂದು ಹೇಳಿದರು.
ಯೂತ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲ್ಪಾಡ್ ಮಾತನಾಡಿ, ಬಿಜೆಪಿ ಮೊದಲು ನಮ್ಮ ಉದ್ಯೋಗ ಕಸಿದುಕೊಂಡಿದೆ. ಈಗ ಚಿಲುಮೆ ಎಂಬ ಸಂಸ್ಥೆ ಮೂಲಕ ನಮ್ಮ ವೋಟ್ ಕದ್ದಿದೆ. ಪ್ರಜಾಪ್ರಭುತ್ವ ಕಗ್ಗೋಲೆ ಮಾಡುತ್ತಿದೆ. ಸರ್ಕಾರದ ವಿರುದ್ಧ ಮಾತನಾಡಲು ಜನ ಭಯ ಪಡುವಂತಾಗಿದೆ. ಈ ೪೦% ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೆ ಯುತ್ ಕಾಂಗ್ರೆಸ್ ಸುಮ್ಮನಿರುವುದಿಲ್ಲ ಎಂದು ಗುಡುಗಿದರು.
೪೦% ವಿರುದ್ಧ ಧ್ವನಿ ಎತ್ತಿದ ಗುತ್ತಿಗೆದಾರ ಸಂಘದ ಅಧ್ಯಕ್ಷರನ್ನು ಬಂಧಿಸಿದರು. ಈ ಸರ್ಕಾರ ಪ್ರತಿ ಹಂತದಲ್ಲೂ ಸ್ಕಾಮ್ ಮಾಡುತ್ತಿದೆ. ಈ ಅಧಿವೇಶನ ಮಾಡುತ್ತಿರುವುದು ಜನರ ಸಮಸ್ಯೆ ಆಲಿಸಲು ಅಲ್ಲ. ಅವರ ೪೦% ಕಮಿಷನ್ ಬಗ್ಗೆ ಮಾತಾಡಲು. ಹಾಗಾಗಿ ಇದನ್ನು ಪ್ರತಿಭಟಿಸಿ ಸುವರ್ಣ ವಿಧಾನಸೌಧ ಮುತ್ತಿಗೆ ಹಾಕಲಾಗುತ್ತಿದೆ ಎಂದು ನಲ್ಪಾಡ್ ಹೇಳಿದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಬಿಜೆಪಿ ಉದ್ಯೋಗ ನೀಡಲು ವಿಫಲವಾಗಿದೆ. ಭ್ರಷ್ಟಾಚಾರ, ಬೆಲೆ ಏರಿಕೆ, ದುರಾಡಳಿತ ವಿರೋಧಿಸಿ ಯುವಕರು ಧ್ವನಿ ಎತ್ತಬೇಕು. ಕೇಂದ್ರ ಕರ್ನಾಟಕ ಎಂದು ಬಂದಾಗ ದ್ವಂದ್ವ ನೀತಿ ಅನುಸರಿಸುತ್ತಿದೆ. ಬಿಜೆಪಿಯ ದ್ವಂದ್ವ ನೀತಿ ಕುರಿತು ಮುಂದೆ ಬೃಹತ್ ಹೋರಾಟ ಮಾಡೋಣ ಎಂದು ಹೇಳಿದರು.
ಪ್ರತಿಭಟನೆ ಮುಂದೆ ಸಾಗುತ್ತಿದ್ದಂತೆ ಡಿಸಿಪಿ ರವೀಂದ್ರ ಗಡಾದಿ ನೇತೃತ್ವದಲ್ಲಿ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದರು.


Gadi Kannadiga

Leave a Reply