ಕೊಪ್ಪಳ :- ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಡಿಸೆಂಬರ್ 03 ರಂದು ಹಮ್ಮಿಕೊಳ್ಳಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಕಲಚೇತನರ ಒಕ್ಕೂಟ, ಕೊಪ್ಪಳ ಮತ್ತು ಜಿಲ್ಲೆಯ ವಿವಿಧ ವಿಕಲಚೇತನರ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ-2022ರ ಕಾರ್ಯಕ್ರಮವನ್ನು ಶನಿವಾರದಂದು ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಹಾಗೂ ಕೊಪ್ಪಳ ಬಸ್ ನಿಲ್ದಾಣದಿಂದ ಮೆರವಣಿಗೆಯನ್ನು ಆಯೋಜಿಸಲಾಗಿತ್ತು.
*ಮೇರವಣಿಗೆಗೆ ಚಾಲನೆ*: ವಿಶ್ವ ವಿಕಲಚೇತನರ ದಿನಾಚರಣೆ ನಿಮಿತ್ತ ಕೊಪ್ಪಳ ಬಸ್ ನಿಲ್ದಾಣದಿಂದ ತಾಲ್ಲೂಕು ಕ್ರೀಡಾಂಗಣದವರೆಗೆ ಏರ್ಪಡಿಸಲಾಗಿದ್ದ ಪುಟ್ಟರಾಜ ಗವಾಯಿಗಳ ಭಾವಚಿತ್ರದ ಮೆರವಣಿಗೆಗೆ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ ಜಿಲ್ಲಾಧಿಕಾರಿಗಳಾದ ಎಂ.ಸುAದರೇಶ್ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಫೌಜಿಯಾ ತರನ್ನುಮ್ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಪದ್ಮಾ ಜಿ., ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕೃಷ್ಣಸಾ ಎಲ್.ಬಾಕಳೆ ಸೇರಿದಂತೆ ಜಿಲ್ಲೆಯ ವಿವಿಧ ವಿಕಲಚೇತನರ ಸೇವಾ ಸಂಸ್ಥೆಯವರು ಉಪಸ್ಥಿತರಿದ್ದರು.
*ವೇದಿಕೆ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ*: ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಜಿ.ಪಂ ಉಪಕಾರ್ಯದರ್ಶಿಗಳಾದ ಸಮೀರ್ ಮುಲ್ಲಾ ಅವರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಪದ್ಮಾ ಜಿ., ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕೃಷ್ಣಸಾ ಎಲ್.ಬಾಕಳೆ ಸೇರಿದಂತೆ ಜಿಲ್ಲೆಯ ವಿವಿಧ ವಿಕಲಚೇತನರ ಸೇವಾ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ 7 ಜನ ವಿಕಲಚೇತನರಿಗೆ ಮತ್ತು ವಿಶ್ವ ವಿಕಲಚೇತನರ ದಿನಾಚರಣೆ ನಿಮಿತ್ತ ನವೆಂಬರ್ 29 ರಂದು ಏರ್ಪಡಿಸಲಾಗಿದ್ದ ವಿಕಲಚೇತನರ ಕ್ರೀಡಾಕೂಟದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ 188 ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು. ಮುದಕಪ್ಪ ಅವರ ಕಾರ್ಯಕ್ರಮ ನಿರೂಪಿಸಿದರು.