This is the title of the web page
This is the title of the web page

Please assign a menu to the primary menu location under menu

Local News

ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ : ಮೂವರು ಸಾವು


ಹುಬ್ಬಳ್ಳಿ :  ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಪುನಾ-ಬೆಂಗಳೂರು ರಸ್ತೆಯ ವರೂರು ಬಳಿಯ ಗಣೇಶ್ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.

ದಾವಣಗೆರೆ ಮೂಲದ ಚಾಲಕ ಶಾರೂಖ್ (27), ಸೋಹೆಲ್​(26) ಮತ್ತು ಎಚ್.ಕೆ. ಸುಶೀಲಾ (38) ಮೃತರು.

ದಾವಣಗೆರೆಯಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿ ಕಡೆಗೆ ಕಾರಿನಲ್ಲಿ ಬರುತ್ತಿದ್ದರು. ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ನಾಲ್ಕು ಬಾರಿ ಪಲ್ಟಿ ಹೊಡೆದಿದೆ.

ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಫಾರುಕ್ ಎಂಬುವರನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯ ಗ್ರಾಮೀಣ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

 


Gadi Kannadiga

Leave a Reply