This is the title of the web page
This is the title of the web page

Please assign a menu to the primary menu location under menu

State

ಸಕಾಲ ಪ್ರಗತಿ ಪರಿಶೀಲನಾ ಸಭೆ


ಗದಗ ಡಿಸಂಬರ್ ೨೭: ಸಕಾಲ ಯೋಜನೆಯ ಅನುಷ್ಟಾನದಲ್ಲಿ ಜಿಲ್ಲೆ ಉತ್ತಮ ಪ್ರಗತಿ ಸಾಧಿಸಲು ಎಲ್ಲ ಅಧಿಕಾರಿಗಳು ಸ್ವೀಕರಿಸಿದ ಅರ್ಜಿಗಳನ್ನು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.ಸೂಚಿಸಿದರು.
ಜಿಲ್ಲಾಕಾರಿಗಳ ಸಭಾಂಗಣದಲ್ಲಿ ಮಂಗಳವಾರದಂದು ಜರುಗಿದ ಸಕಾಲ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಕಾಲದಲ್ಲಿ ಅರ್ಜಿ ಸ್ವೀಕರಿಸುವಾಗ ಅರ್ಜಿಯ ಜೊತೆಗೆ ನಿಗದಿಪಡಿಸಿದ ದಾಖಲಾತಿಗಳ ಸಮೇತ ಸ್ವೀಕರಿಸಬೇಕು. ಕಾಲಮಿತಿಯೊಳಗೆ ಅರ್ಜಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು. ಸಕಾಲದಲ್ಲಿ ಸ್ವೀಕರಿಸಿದ ಅರ್ಜಿಗಳನ್ನು ನಿಗದಿಪಡಿಸಿದ ವೇಳೆಯಲ್ಲಿ ವಿಲೇವಾರಿ ಮಾಡದಿದ್ದಲ್ಲಿ ಇಲಾಖೆಯ ಅಧಿಕಾರಿಗಳೇ ಹೊಣೆಗಾರರಾತ್ತಾರೆ ಹಾಗೂ ಶಿಸ್ತು ಕ್ರಮಕ್ಕೆ ಒಳಗಾಗಬೇಕಾಗುತ್ತದೆ. ಅದಕ್ಕೆ ಅವಕಾಶ ನೀಡದೇ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯನಿರ್ವಹಿಸಬೇಕು ಎಂದು ವೈಶಾಲಿ ಎಂ.ಎಲ್. ಅಧಿಕಾರಿಗಳಿಗೆ ಸೂಚಿಸಿದರು.
ಎಸ್‌ಸಿಎಸ್‌ಪಿ/ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆ : ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ ಉಪಹಂಚಿಕೆ ಯೋಜನೆಗೆ ಸಂಬಂಧಿಸಿದಂತೆ ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ನಿಗದಿತ ಕಾಲಾವಧಿಯಲ್ಲಿಯೇ ದೊರಕುವಂತಾಗಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.
ಪ.ಜಾ/ಪ.ಪಂ. ಉಪಹಂಚಿಕೆ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳ ಆಯ್ಕೆ ಮಾಡುವಾಗ ಪಾರದರ್ಶಕತೆಯಿರಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ವಿಳಂಬವಾಗದೇ ಶೀಘ್ರಗತಿಯಲ್ಲಿ ತಲುಪುವಂತಾಗಬೇಕು. ಯೋಜನೆಯ ಅನುಷ್ಟಾನದಲ್ಲಿ ಆರ್ಥಿಕ ಮತ್ತು ಭೌತಿಕ ಪ್ರಗತಿ ಸಾಧನೆ ಅತಿ ಮುಖ್ಯವಾಗಿದ್ದು, ನಿಗದಿತ ಕಾಲಮಿತಿಯಲ್ಲಿಯೇ ಕಾಮಗಾರಿ ಪೂರ್ಣಗೊಳ್ಳುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಸದರಿ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು ಹಾಗೂ ಇಲಾಖಾವಾರು ಸಾಧಿಸಿದ ಪ್ರಗತಿ ವಿವರವನ್ನು ಇಲಾಖೆ ಅಂತರ್ಜಾಲದಲ್ಲಿ ತಪ್ಪದೇ ಅಪ್‌ಡೇಟ್ ಮಾಡುವುದು ಕೂಡ ತುಂಬಾ ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸುಶೀಲಾ ಬಿ ಅವರು ಮಾತನಾಡಿ ಸದರಿ ಯೋಜನೆಯಡಿ ಎಸ್.ಸಿ/ ಎಸ್.ಟಿ. ಪ್ರದೇಶದಲ್ಲಿ ಕೈಗೊಂಡ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆ ಸೌಲಭ್ಯ ಶೀಘ್ರಗತಿಯಲ್ಲಿ ದೊರಕಬೇಕು. ಬಿಡುಗಡೆಯಾದ ಅನುದಾನ ಹಿಂದುರುಗಿ ಹೋಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಮೀನುಗಾರಿಕೆ, ಕೈಮಗ್ಗ , ಸಹಕಾರ , ಅರಣ್ಯ, ಕನ್ನಡ ಮತ್ತು ಸಂಸ್ಕೃತಿ, ಪಶುಪಾಲನೆ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ತೋಟಗಾರಿಕೆ, ಹೆಸ್ಕಾಂ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಯೋಜನಾ ಕಾರ್ಯಕ್ರಮಗಳು ನಿಗದಿತ ಗುರಿ ತಲುಪಲು ಅಧಿಕಾರಿಗಳು ಹೆಚ್ಚಿನ ಆಸಕ್ತಿ ವಹಿಸಿ ಕೆಲಸ ನಿರ್ವಹಿಸಬೇಕೆಂದರು. ಕೋವಿಡ್ ಮುಂಜಾಗ್ರತಾ ಸಭೆ : ಬದಲಾಗುತ್ತಿರುವ ಕೋವಿಡ್ ೧೯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸಂಭವನೀಯ ಕೋವಿಡ್ ೪ ನೇ ಅಲೆ ಎದುರಿಸಲು ಸಾರ್ವಜನಿಕರೆಲ್ಲರೂ ಆರೋಗ್ಯದ ಹಿತದೃಷ್ಟಿಯಿಂದ ಮಾಸ್ಕ್ ಧರಿಸಬೇಕು. ಹಾಗೂ ಮುಂಜಾಗ್ರತಾ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ತಿಳಿಸಿದರು. ಕೋವಿಡ್ ಮುಂಜಾಗ್ರತಾ ಕ್ರಮಕ್ಕಾಗಿ ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಸಾಕಷ್ಟು ಗಾಳಿ , ಬೆಳಕು , ಸ್ಥಳಾವಕಾಶ ಇದ್ದಲ್ಲಿ ಹಮ್ಮಿಕೊಳ್ಳಲು ವ್ಯವಸ್ಥೆ ಮಾಡಬೇಕು. ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ಒಳಾಂಗಣ ಕಾರ್ಯಕ್ರಮಗಳಲ್ಲಿ ಹೆಚ್ಚು ಜನರು ಗುಂಪು ಗೂಡುವುದನ್ನು ತಡೆಗಟ್ಟಬೇಕು ಎಂದು ಸಭೆಯಲ್ಲಿ ನಿರ್ದೆಶನ ನೀಡಿದರು. ಸಭೆಯಲ್ಲಿ ಉಪವಿಭಾಗಾಧಿಕಾರಿ ಅನ್ನಪೂರ್ಣ ಎಂ. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಜಂಟಿ ಕೃಷಿ ನಿರ್ದೇಶಕಿ ಶ್ರೀಮತಿ ತಾರಾಮಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ಶೆಟ್ಟೆಪ್ಪನವರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮೆಹಬೂಬ ತುಂಬರಮಟ್ಟಿ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ಕಾರ್ಮಿಕ ಇಲಾಖೆ ಅಧಿಕಾರಿ ಸುಧಾ ಗರಗ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.


Gadi Kannadiga

Leave a Reply