ಗದಗ, ೨೧ : ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಿ ಪ್ರತಿಯೊಬ್ಬರಿಗೆ ನ್ಯಾಯ ದೊರಕುವಂತಾಗಬೇಕು. ಈ ನಿಟ್ಟಿನಲ್ಲಿ ಭಾರತೀಯ ಸಂವಿಧಾನದಡಿ ಅನೇಕ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಆದರೆ ಅಸಮಾನತೆಯನ್ನು ಹೋಗಲಾಡಿಸಲು ಮುಖ್ಯವಾಗಿ ಪ್ರತಿಯೊಬ್ಬರ ಮನಸ್ಥಿತಿಗಳು ಬದಲಾಗಬೇಕು ಅಂದಾಗ ಸಮಾನ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು, ಹಿರಿಯ ದಿವಾಣಿ ನ್ಯಾಯಾಧೀಶರಾದ ಕೆ. ಗುರುಪ್ರಸಾದ ಅವರು ನುಡಿದರು.
ಅವರು ಗದಗ ನಗರದಲ್ಲಿರುವ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಾನತೆಯ ಪರಿಕಲ್ಪನೆಯಡಿ ೨೦೦೭ ರಲ್ಲಿ ವಿಶ್ವ ಸಂಸ್ಥೆಯಲ್ಲಿ ಠರಾವು ಪಾಸ್ ಮಾಡಲಾಗಿದ್ದು, ಅದರ ಪ್ರಕಾರ ವಿಶ್ವದಾದ್ಯಂತ ೨೦೦೯ ರಿಂದ ಪ್ರತಿ ವರ್ಷ ಫೆಬ್ರುವರಿ ೨೦ ರಂದು ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆಯನ್ನು ಆಚರಿಸುತ್ತಾ ಬರಲಾಗಿದೆ.
ಸಂವಿಧಾನದ ಪೀಠಿಕೆಯಲ್ಲಿರುವ ಪ್ರಮುಖ ಅಂಶಗಳಲ್ಲಿ ಸಾಮಾಜಿಕ ನ್ಯಾಯವೂ ಒಂದು. ನಮ್ಮ ಸಮಾಜದಲ್ಲಿರುವ ಜನರ ಮದ್ಯೆ ಜಾತಿ-ಧರ್ಮಾಧಾರಿತ, ಲಿಂಗಾಧಾರಿತ ವ್ಯತ್ಯಾಸಗಳಿವೆ. ಅವುಗಳನ್ನು ಹೋಗಲಾಡಿಸಿ ಪ್ರತಿಯೊಬ್ಬರಿಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಮೀಸಲಾತಿ, ಹಿಂದುಳಿದವರಿಗೆ ವಸತಿ ಸೇರಿದಂತೆ ಹತ್ತು ಹಲವಾರು ಕಾನೂನುಗಳನ್ನು ಜಾರಿಗೆ ತರಲಾಗಿದೆ. ದೇಶದ ಪ್ರತಿಯೊಬ್ಬರೂ ಈ ಕಾನೂನುಗಳ ಅರಿವು ಹೊಂದಬೇಕು ಎಂದರು.
ತಾಲೂಕು ಸಮಾಜ ಕಲ್ಯಾಣಾಧಿಕಾರಿ ವಿಜಯಲಕ್ಷ್ಮಿ ಹಂಪಿಮಠ ಮಾತನಾಡಿ, ವಿದ್ಯಾರ್ಥಿನಿಯರಿಗೆ ಭವಿಷ್ಯದಲ್ಲಿ ಕಾನೂನಿನ ಅರಿವು ಬಹಳ ಮುಖ್ಯವಾಗಿದ್ದು, ತಮಗೆ ಕಾನೂನು ನೆರವಿನ ಅವಶ್ಯವಿದ್ದರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಲು ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ದೊರೆಯುವ ಕಾನೂನು ನೆರವುಗಳ ಕುರಿತು ವಿವರಣೆ ನೀಡಿದ ಶಿರಸ್ತೆದಾರರಾದ ಬಸವರಾಜ ಕುಕನೂರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಕಾರ್ಯಕದಲ್ಲಿ ವಸತಿ ನಿಲಯದ ವಾರ್ಡನ್ ವಸಂತಾ ಸೇರಿದಂತೆ ವಿದ್ಯಾರ್ಥಿನಿಯರು ಹಾಜರಿದ್ದರು.
Gadi Kannadiga > State > ಅಸಮಾನತೆ ತೊಲಗಿಸಲು ಪ್ರತಿಯೊಬ್ಬರ ಮನಸ್ಥಿತಿಗಳು ಬದಲಾಗಬೇಕು: ನ್ಯಾ. ಕೆ. ಗುರುಪ್ರಸಾದ
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023
ಸಂತೆ ಕರ ಲಿಲಾವು
16/03/2023