This is the title of the web page
This is the title of the web page

Please assign a menu to the primary menu location under menu

State

ಇಂದು ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ : ಹಲವು ಜನಪ್ರಿಯ ಯೋಜನೆಗಳ ಘೋಷಣೆ..?


ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಚೊಚ್ಚಲ ಬಜೆಟ್ ಮಂಡಿಸಲಿದ್ದು, ಅವರು ತಮ್ಮ ಮೊದಲ ಬಜೆಟ್ ನಲ್ಲಿ ಹಲವು ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.

ಇಂದು ಮಧ್ಯಾಹ್ನ 12.30ಕ್ಕೆ ಕರ್ನಾಟಕ ಬಜೆಟ್ 2022-23 ವಿಧಾನಮಂಡಲದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಲಿದ್ದಾರೆ.ಈ ಬಜೆಟ್‌ ನಲ್ಲಿ ಹಾಲಿನ ಪ್ರೋತ್ಸಾಹಧನ ಹೆಚ್ಚಳ, ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಸೇರಿದಂತೆ ಮಹತ್ವದ ಯೋಜನೆಗಳನ್ನು ಘೋಷಿಸುವ ನಿರೀಕ್ಷೆ ಇದೆ.

ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯ ಹೊಸ್ತಿಲಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಲಿರುವ ಚೊಚ್ಚಲ ಬಜೆಟ್ ರಾಜ್ಯದ ಜನತೆಯಲ್ಲಿ ಕುತೂಹಲ ಮೂಡಿಸಿದೆ.

ಇಂದಿನ ಬಜೆಟ್ ನಲ್ಲಿ ಬಡತನ ರೇಖೆಗಿಂತ ಕೆಳಗಿರುವ ಪಡಿತರ ಕಾರ್ಡುದಾರರಿಗೆ ಹೆಚ್ಚುವರಿ 1 ಕೆ.ಜಿ. ಅಕ್ಕಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ನೀಡುವ ಗೌರವಧನ ಹೆಚ್ಚಳ, ಕಾರ್ಮಿಕರಿಗೆ ವಸತಿ ಸೌಲಭ್ಯ, ರಾಜ್ಯಾದ್ಯಂತ ನೋಂದಾಯಿತ ಕಟ್ಟಡ ಮತ್ತು ಗಾರ್ಮೆಂಟ್ ನಲ್ಲಿ ಕೆಲಸ ಮಾಡುವ ಮಹಿಳಾ ಕಾರ್ಮಿಕರಿಗೆ ಬಸ್ ನಲ್ಲಿ ಉಚಿತ ಸಂಚರಿಸುವ ಸೌಲಭ್ಯ, ಏಳನೇ ವೇತನ ಆಯೋಗ ರಚನೆ ಸೇರಿದಂತೆ ಹಲವು ಜನಪ್ರಿಯ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ.

ರಾಜ್ಯದ ಬಜೆಟ್ ಗಾತ್ರ ಈ ಬಾರಿ 2.60 ಲಕ್ಷ ಕೋಟಿ ರೂ. ದಾಟಬಹುದು ಎಂದು ಅಂದಾಜಿಸಲಾಗಿದೆ. ಕಳೆದ ಬಾರಿ ಬಜೆಟ್ 2.46 ಲಕ್ಷ ಕೋಟಿ ರೂ. ಇತ್ತು. ಈ ಬಾರಿ ಕನಿಷ್ಠ 15 ಸಾವಿರ ಕೋಟಿ ರೂ.ಹೆಚ್ಚಾಗಬಹುದು ಎನ್ನಲಾಗಿದೆ.

ಕಳೆದ ಬಾರಿ ಕೋವಿಡ್ ಸಂಕಷ್ಟವಿದ್ದರೂ ಬಜೆಟ್ ಗಾತ್ರ ಕಡಿಮೆ ಆಗಿರಲಿಲ್ಲ. ಈಗ ಕೋವಿಡ್ ಸೋಂಕಿನ ಹಾವಳಿ ಕಡಿಮೆಯಾಗಿದ್ದರಿಂದ ಎಲ್ಲ ಕ್ಷೇತ್ರಗಳ ವ್ಯಾಪಾರ ವಹಿವಾಟು ಸಹಜ ಸ್ಥಿತಿಗೆ ಬಂದಿದೆ. ಇದರಿಂದ ರಾಜ್ಯದ ಆದಾಯವೂ ಹೆಚ್ಚಳವಾಗುತ್ತಿದೆ. ಆದ್ದರಿಂದ ಬಜೆಟ್ ಗಾತ್ರ ಹೆಚ್ಚಾಗಲಿದೆ ಎಂದು ಹೇಳಲಾಗುತ್ತಿದೆ


Gadi Kannadiga

Leave a Reply