This is the title of the web page
This is the title of the web page

Please assign a menu to the primary menu location under menu

State

ಇÀಂದು ಕೊಪ್ಪಳದಲ್ಲಿ ೭೫ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ


ಕೊಪ್ಪಳ, ಸೆ. ೧೬: ಕೊಪ್ಪಳ ಜಿಲ್ಲಾಡಳಿತ ವತಿಯಿಂದ ೭೫ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ಸೆ. ೧೭ ರಂದು ಬೆಳಿಗ್ಗೆ ೦೯ ಗಂಟೆಗೆ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
ರಾಜ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು. ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಆಚಾರ ಅವರು ಘನ ಉಪಸ್ಥಿತಿ ವಹಿಸುವರು. ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ ಹಾಗೂ ಬಸವರಾಜ ದಢೇಸೂಗೂರು, ವಿಧಾನಪರಿಷತ್ ಸದಸ್ಯರುಗಳಾದ ಶಶೀಲ್ ಜಿ. ನಮೋಶಿ, ಡಾ. ಚಂದ್ರಶೇಖರ್ ಬಿ.ಪಾಟೀಲ್, ಶರಣ ಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಕೊಪ್ಪಳ ನಗರಸಭೆ ಅಧ್ಯಕ್ಷೆ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಎಸ್. ಪಾಟೀಲ್ ಪಾಲ್ಗೊಳ್ಳುವರು. ವಿಶೇಷ ಆಹ್ವಾನಿತರಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ ಅನಿಲ್ ಕುಮಾರ್ ಭಾಗವಹಿಸುವರು.
೭೫ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಬೆಳಿಗ್ಗೆ ೦೯ ಗಂಟೆಗೆ ರಾಷ್ಟ್ರ ಧ್ವಜಾರೋಹಣ, ಪಥಸಂಚಲನ, ಸಚಿವ ರಿಂದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಸಂದೇಶ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ. ಸಮಾರಂಭದಲ್ಲಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಅವರು ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.


Gadi Kannadiga

Leave a Reply