ಬೆಳಗಾವಿ: ಏಪ್ರಿಲ್ 6 ರಂದು ನಗರದಲ್ಲಿ ದೇವರ ದಾಸಿಮಯ್ಯ ಜಯಂತ್ಯುತ್ಸವ ಆಚರಿಸಲಾಗುತ್ತದೆ. ಏಪ್ರಿಲ್ 6 (ಬುಧವಾರ) ರಂದು ಮುಂಜಾನೆ 9.30 ಗಂಟೆಗೆ ನಗರದ ಖಾಸಭಾಗದಲ್ಲಿರುವ ಬಸವೇಶ್ವರ ವೃತ್ತದಿಂದ ವಡಗಾವಿಯ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದವರೆಗೆ ಮೆರವಣಿಗೆ ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ 10.30 ಗಂಟೆಗೆ ಚಾವಡಿಗಲ್ಲಿಯಲ್ಲಿರುವ ಶ್ರೀ ಮಲ್ಲಿಕಾರ್ಜುನ ದೇವಸ್ತಾನದ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.