ಗದಗ ಜನೆವರಿ ೨೦ : ಸರ್ಕಾರದ ಅಧಿಸೂಚನೆಯನ್ವಯ ಏಕಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳಾದ ಕ್ಯಾರಿ ಬ್ಯಾಗ್ , ಪ್ಲಾಸ್ಟಿಕ್ ಬ್ಯಾನರ್‌ಗಳು , ಪ್ಲಾಸ್ಟಿಕ್ ಬಂಟಿಂಗ್ಸ್ ಪ್ಲಾಸ್ಟಿಕ್ ಫ್ಲೆಕ್ಸ್ , ಪ್ಲಾಸ್ಟಿಕ್ ಪ್ಲೇಟ್ , ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕಪ್ ಗಳು , ಪ್ಲಾಸ್ಟಿಕ್ ಸ್ಪೂನಗಳು , ಅಂಟಿಕೊಳ್ಳುವ ಫಿಲ್ಮಗಳು, ಎಲ್ಲ ದಪ್ಪದ ಡೈನಿಂಗ್ ಟೇಬಲ್ ನಲ್ಲಿ ಹರಡಲು ಬಳಸುವ ಪ್ಲಾಸ್ಟಿಕ್ ಹಾಳೆಗಳು , ಸ್ಟ್ರಾಗಳು, ಥರ್ಮಾಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳನ್ನು ಈಗಾಗಲೇ ನಿಷೇಧಿಸಲಾಗಿದೆ.
ಪ್ಲಾಸ್ಟಿಕ್ ತ್ಯಾಜ್ಯ ನಿಯಮಗಳ ಪ್ರಕಾರ ಪಾಲಿಸ್ಟರೀನ್ ಮತ್ತು ವಿಸ್ತರಿತ ಪಾಲಿಸ್ಟರೀನ್ ಸೇರಿದಂತೆ ಏಕಬಳಕೆಯ ಪ್ಲಾಸ್ಟಿಕ್ ತಯಾರಿಕೆ , ಆಮದು, ಸಂಗ್ರಹಣೆ , ವಿತರಣೆ , ಮಾರಾಟ ಮತ್ತು ಬಳಕೆಯನ್ನು ಜಾರಿಗೆ ಬರುವಂತೆ ನಿಷೇಧಿಸಲಾಗಿದೆ. ಜನೆವರಿ ೨೬ ರಂದು ದೇಶದಾದ್ಯಂತ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಜಿಲ್ಲೆಯಾದ್ಯಂತ ಪ್ಲಾಸ್ಟಿಕ್ ವಸ್ತುವಿನಿಂದ ತಯಾರಿಸಿದ ರಾಷ್ಟ್ರ ಧ್ವಜಗಳ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಲ್ಲದೇ ಏಕಬಳಕೆ ಪ್ಲಾಸ್ಟಿಕ್ / ಬ್ಯಾನರ್ ನ್ನು ಸಂಪೂರ್ಣ ನಿಷೇಧ ಮಾಡಲು ಹಾಗೂ ನಿಷೇಧಿತ ಏಕಬಳಕೆಯ ಬಳಕೆದಾರರು, ದಾಸ್ತಾನುದಾರರು ಮತ್ತು ಉತ್ಪಾದನಾ ಘಟಕಗಳನ್ನು ಪರಿಶೀಲನೆ ನಡೆಸಲು ಹಾಗೂ ಪರಿಶೀಲನಾ ವೇಳೆ ಸದರಿ ನಿಷೇಧಿತ ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳು ಕಂಡು ಬಂದಲ್ಲಿ ಜಪ್ತಿ ಮಾಡಿ ದಂಡ ವಿಧಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ದಂಡಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಏಕ ಬಳಕೆ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ
ಏಕ ಬಳಕೆ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ
Suresh20/01/2023
posted on