This is the title of the web page
This is the title of the web page

Please assign a menu to the primary menu location under menu

State

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ


ಗದಗ ಜುಲೈ ೧೪: ರಾಜ್ಯದ ಕಾನೂನು,ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಜುಲೈ ೧೫ ಹಾಗೂ ೧೬ ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ಪ್ರವಾಸದ ವಿವರ ಇಂತಿದೆ:
ಜುಲೈ ೧೫ ರಂದು ಸಂಜೆ ೬.೩೦ ಗಂಟೆಗೆ ಚನ್ನಗಿರಿಯಿಂದ ರಸ್ತೆ ಮೂಲಕ ಗದುಗಿಗೆ ಆಗಮಿಸುವರು. ಸಂಜೆ ೭.೩೦ ಗಂಟೆಗೆ ಗದಗನ ಗಾಂಧಿ ನಗರದಲ್ಲಿನ ಹಾಲಕೆರೆಮಠ ಆನಂದಾಶ್ರಮದ ೧೯೨ ನೇ ಶಿವಾನುಭವ ಸಂಪದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಸ್ತವ್ಯ ಮಾಡುವರು. ಜುಲೈ ೧೬ ರಂದು ಬೆ ೧೧ ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಮಧ್ಯಾಹ್ನ ೧೨.೩೦ ಗಂಟೆಗೆ ನಗರದ ಶ್ರೀನಿವಾಸ ಭವನದಲ್ಲಿ ಪತ್ರಿಕಾ ದಿನಾಚರಣೆ ಪ್ರಶಸ್ತಿ ಪ್ರಧಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮ.೧.೩೦ ಗಂಟೆಗೆ ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಇವರ ವತಿಯಿಂದ ಪಜಾ/ ಪಪಂ.ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ ೨ ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅಖಿಲ ಭಾರತ ೬ನೇ ಸಾಂಸ್ಕೃತಿಕ ಸಮ್ಮೇಳನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ ೫ ರಿಂದ ೭ ರವರೆಗೆ ಗದಗ ಕಾಟನ್ ಸೇಲ ಸೊಸೈಟಿ ಕಾರ್ಯಾಲಯದಲ್ಲಿ ಸಾರ್ವಜನಿಕರೊಂದಿಗೆ ಭೇಟಿ ನಡೆಸುವರು. ರಾತ್ರಿ ೯.೪೦ ಗಂಟೆಗೆ ಹುಬ್ಬಳ್ಳಿ ಮೂಲಕ ಬೆಂಗಳೂರಿಗೆ ಪ್ರಯಾಣ ಮಾಡುವರು ಎಂದು ಸಚಿವರ ಕಾರ್ಯಾಲಯದ ಮೂಲಗಳು ತಿಳಿಸಿವೆ.


Leave a Reply