This is the title of the web page
This is the title of the web page

Please assign a menu to the primary menu location under menu

State

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ


ಕೊಪ್ಪಳ ಜುಲೈ 22: ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಜುಲೈ 24ರಿಂದ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಜುಲೈ 23ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಿAದ ನಿರ್ಗಮಿಸಿ ಬಾಗಲಕೋಟೆ ಜಿಲ್ಲೆಯ ಇಳಕಲ್‌ಗೆ ತೆರಳಿ ವಾಸ್ತವ್ಯ ಮಾಡುವರು. ಜುಲೈ 24ರ ಬೆಳಗ್ಗೆ 9 ಗಂಟೆಗೆ ಇಳಕಲ್‌ನಿಂದ ನಿರ್ಗಮಿಸಿ ಕುಷ್ಟಗಿ ತಾವರಗೇರಾ ಹುಲಿಹೈದರ ಮಾರ್ಗವಾಗಿ ಕನಕಗಿರಿ ತಾಲೂಕಿಗೆ ಆಗಮಿಸಿ ಬೆಳಗ್ಗೆ 10.30ಕ್ಕೆ ಕನಕಗಿರಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಿವಿಧ ವಾರ್ಡಗಳಿಗೆ ಭೇಟಿ ನೀಡುವರು. ಸಂಜೆ 7 ಗಂಟೆಗೆ ಕನಕಗಿರಿ ಪಟ್ಟಣದಿಂದ ನಿರ್ಗಮಿಸಿ 7.30ಕ್ಕೆ ಕಾರಟಗಿಗೆ ತೆರಳಿ ಸಾರ್ವಜನಿಕ ಭೇಟಿ ಹಾಗೂ ಕುಂದುಕೊರತೆಗಳ ವಿಚಾರಣೆ ನಡೆಸುವರು.
ಜುಲೈ 25ರ ಬೆಳಗ್ಗೆ 10 ಗಂಟೆಯಿAದ ಕಾರಟಗಿ ಪುರಸಭೆ ವ್ಯಾಪ್ತಿಯ ವಿವಿಧ ವಾರ್ಡಗಳಿಗೆ ಭೇಟಿ ನೀಡುವರು. ಸಂಜೆ 5 ಗಂಟೆಗೆ ಕಾರಟಗಿಯಿಂದ ನಿರ್ಗಮಿಸಿ ಗಂಗಾವತಿ, ಹೊಸಪೇಟೆ, ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply