This is the title of the web page
This is the title of the web page

Please assign a menu to the primary menu location under menu

State

ತುಂಗಭದ್ರಾ ಯೋಜನೆ: ೧೧೯ನೇ ನೀರಾವರಿ ಸಲಹಾ ಸಮಿತಿ ಸಭೆ ಆ.೧೬ಕ್ಕೆ


ಕೊಪ್ಪಳ ಆಗಸ್ಟ್ ೧೧ : ತುಂಗಭದ್ರಾ ಜಲಾಶಯದ ಮುಂಗಾರು ಹಂಗಾಮಿಗೆ ಲಭ್ಯವಾಗುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲು ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳ ೧೧೯ನೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ಆಗಸ್ಟ್ ೧೬ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಮುನಿರಾಬಾದ್‌ನ ಟಿ.ಬಿ.ಪಿ ಕಾಡಾ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಸಭೆಯ ಅಧ್ಯಕ್ಷತೆ ವಹಿಸುವರು.
ಕೊಪ್ಪಳ, ವಿಜಯನಗರ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಸಚಿವರುಗಳು, ಲೋಕಸಭಾ, ವಿಧಾನಸಭಾ, ವಿಧಾನ ಪರಿಷತ್ ಮತ್ತು ರಾಜ್ಯಸಭಾ ಸದಸ್ಯರುಗಳು ಹಾಗೂ ನೀರಾವರಿ ಸಲಹಾ ಸಮಿತಿಯ ಸದಸ್ಯರುಗಳು ಈ ಸಭೆಗೆ ಆಗಮಿಸಿ ತಮ್ಮ ಸಲಹೆ, ಸೂಚನೆಗಳನ್ನು ನೀಡಬೇಕು ಎಂದು ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್‌ನ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply