This is the title of the web page
This is the title of the web page

Please assign a menu to the primary menu location under menu

Local News

ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ : ಮತ್ತೆ ಇಬ್ಬರ ಬಂಧನ


ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಮತ್ತೆ ಇಬ್ಬರು ಬಂಧಿಸಿದ್ದಾರೆ.

ಈ ಮೂಲಕ ಬಂಧಿತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಸೋಮವಾರ 20 ಮಂದಿಗೆ ಜಾಮೀನು ಕೂಡ ಸಿಕ್ಕಿದೆ. ಗೋಕಾಕ ತಾಲ್ಲೂಕಿನ ಲೋಳಸೂರ ಗ್ರಾಮದ ಯಲ್ಲಪ್ಪ ಮಹದೇವ ರಕ್ಷಿ (26) ಹಾಗೂ ಚಿಕ್ಕೋಡಿ ತಾಲ್ಲೂಕಿನ ಜಾಗನೂರ ಗ್ರಾಮದ ನಾಗಪ್ಪ ಶಿವಪ್ಪ ದೊಡಮನಿ (27) ಬಂಧಿತರು.

ಪರೀಕ್ಷಾ ಕೇಂದ್ರದೊಳಗೆ ಎಲೆಕ್ಟ್ರಾನಿಕ್ಸ್‌ ಉಪಕರಣ ತೆಗೆದುಕೊಂಡು ಹೋಗಿ ಪರೀಕ್ಷೆ ಬರೆದಿದ್ದರು. ಯಲ್ಲಪ್ಪ ಈ ಆರೋಪಿಗೆ ಉಪಕರಣ ನೀಡಿದ್ದ. ಅಲ್ಲದೇ, ಶಿರಹಟ್ಟಿಯ ತೋಟದ ಮನೆಯೊಂದರಲ್ಲಿ ಕುಳಿತು ಬ್ಲೂಟೂತ್‌ ಮೂಲಕ ಉತ್ತರಗಳನ್ನು ರವಾನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಗೋಕಾಕ ಶಹರ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 96/2022 ಕಲಂ 120(ಬಿ), 411, 417, 420, 426, 406, 511, 116, 201 ಹಾಗೂ ಸಹ ಕಲಂ 34 ಅಡಿ ಪ್ರಕರಣ ದಾಖಲಿಸಲಾಗಿದೆ.


Gadi Kannadiga

Leave a Reply