ಬೆಳಗಾವಿ: ಶ್ರೀರಾಮಸೇನೆ ಕಾರ್ಯಕರ್ತ ಸೇರಿ ಇಬ್ಬರಿಗೆ ಚಾಕು ಇರಿದು, ಓರ್ವನ ಮೇಲೆ ಹಲ್ಲೆ ಮಾಡಿರುವ ಘಟನೆ ರಾಮದುರ್ಗ ಪಟ್ಟಣದ ಗಾಂಧಿ ನಗರದಲ್ಲಿ ನಡೆದಿದೆ.
ಬೈಕ್ ಪಕ್ಕಕ್ಕೆ ತೆಗೆದುಕೊಳ್ಳುವ ವಿಚಾರದಲ್ಲಿ ಗಲಾಟೆ ನಡೆದಿದೆ ಎನ್ನಲಾಗಿದೆ. ಈ ವೇಳೆ ಒಂದು ಕೋಮಿನ ಐದಕ್ಕೂ ಅಧಿಕ ಯುವಕರು ಚಾಕು, ರಾಡ್, ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ. ಶ್ರೀರಾಮಸೇನೆ ಕಾರ್ಯಕರ್ತ ಗೋಪಾಲ್ ಬಂಡಿವಡ್ಡರ್ಗೆ ಚಾಕು ಇರಿಯಲಾಗಿದೆ. ರವಿ ಬಂಡಿವಡ್ಡರ್ ಎಂಬ ಯುವಕನ ತಲೆಗೆ ರಾಡ್ನಿಂದ ಹಲ್ಲೆ ಮಾಡಲಾಗಿದೆ.
ಜಗಳ ಬಿಡಿಸಲು ಹೋದ ನಂಜುಡಿ ಸಾಬಣ್ಣ ಬಂಡಿವಡ್ಡರ್ ಎಂಬುವರ ಮೇಲೆಯೂ ಹಲ್ಲೆ ಮಾಡಲಾಗಿದೆ. ಗಾಯಾಳುಗಳಿಗೆ ರಾಮದುರ್ಗ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಮಹಾದೇವಪ್ಪ ಯಾದವಾಡ ಅವರು ಯಾವುದೇ ಮುಲಾಜಿಲ್ಲದೇ ತಪ್ಪಿತಸ್ಥರ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ತಿಳಿಸಲಾಗಿದೆ ಎಂದರು.