ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರ ಐದನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾ ಸಂವಾದ ಕಾರ್ಯಕ್ರಮಕ್ಕೆ ಬೆಳಗಾವಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಪಿಎಂ ಮೋದಿ ಅವರ ಜೊತೆ ಮಾತನಾಡಲಿದ್ದಾರೆ.
ಈ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. 10 ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಮಾರ್ಗಿನಗೊಪ್ಪ ಹಾಗೂ ಕುಮಾರಿ ಜಾನ್ವಿ ದ್ವಿವೇದಿ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ವಿದ್ಯಾರ್ಥಿಗಳು.
ಏಪ್ರಿಲ್ 1 ರಂದು ನಡೆಯುವ ಪರೀಕ್ಷಾ ಪೇ ಚರ್ಚಾದ 5 ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಮತ್ತು ಪೋಷಕರ ಜತೆ ಪ್ರಧಾನಿ ನರೇಂದ್ರ ಮೋದಿ ಜಗತ್ತಿನಾದ್ಯಂತ ಆನ್ ಲೈನ್ ನಲ್ಲಿ ಸಂವಾದ ನಡೆಸಲಿದ್ದಾರೆ.
ಪರೀಕ್ಷಾ ಒತ್ತಡಕ್ಕೆ ಸಂಬಂಧಿಸಿದ ಮತ್ತು ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಎದುರಿಸುವ ಪ್ರಶ್ನೆಗಳಿಗೆ ತಮ್ಮ ವಿಶಿಷ್ಟ ರೀತಿಯಲ್ಲಿ, ನೇರ ಪ್ರಸಾರ ಮೂಲಕ ಪಿಎಂ ಉತ್ತರಿಸಲಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾಹಿತಿ ನೀಡಿದ್ದಾರೆ