This is the title of the web page
This is the title of the web page

Please assign a menu to the primary menu location under menu

Local News

೧೦ ರಂದು ತ್ಯಾಗವೀರ ಲಿಂಗರಾಜ ಜಯಂತಿ ಉತ್ಸವ


ಬೆಳಗಾವಿ: `ತ್ಯಾಗವೀರ ಸಿರಸಂಗಿ ಲಿಂಗರಾಜರ ೧೬೨ನೇ ಜಯಂತಿ ಉತ್ಸವ’ವು ಕೆಎಲ್‌ಇ ಸಂಸ್ಥೆಯ ಲಿಂಗರಾಜ ಕಾಲೇಜಿನಲ್ಲಿ ೧೦ ಜನವರಿ ೨೦೨೩ ರಂದು ಮುಂಜಾನೆ ೧೧.೦೦ ಗಂಟೆಗೆ ಕೇಂದ್ರ ಸಭಾಗೃಹದಲ್ಲಿ ಜರುಗಲಿದೆ.
ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ನಾಗನೂರು ರುದ್ರಾಕ್ಷಿಮಠದ ಪರಮಪೂಜ್ಯ ಶ್ರೀ ಅಲ್ಲಮಪ್ರಭು ಮಹಾಸ್ವಾಮಿಗಳು ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಡಾ.ಪ್ರಭಾಕರ ಕೋರೆಯವರಿಗೆ ಜಯಂತಿ ಸಮಿತಿಯು ಅವರ ಅಮೃತ ಮಹೋತ್ಸವ ನಿಮಿತ್ತ ಗೌರವ ಸನ್ಮಾನವನ್ನು ಆಯೋಜಿಸಿದೆ.
ಮುಖ್ಯ ಅತಿಥಿಗಳಾಗಿ ಕಿತ್ತೂರು ಪ್ರಥಮದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ.ಪ್ರಜ್ಞಾ ಮತ್ತಿಹಳ್ಳಿಯವರು ಆಗಮಿಸಲಿದ್ದು, ಅಧ್ಯಕ್ಷತೆಯನ್ನು ಬೈಲಹೊಂಗಲ ಮತಕ್ಷೇತ್ರದ ಶಾಸಕರು ಹಾಗೂ ಕೆಎಲ್‌ಇ ಅಧ್ಯಕ್ಷರಾದ ಮಹಾಂತೇಶ ಕೌಜಲಗಿಯವರು ವಹಿಸಲಿದ್ದಾರೆ ಎಂದು ಸಮಿತಿಯ ಅಧ್ಯಕ್ಷರಾದ ಶ್ರೀ ಬಸವರಾಜ ತಟವಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply