ಗದಗ ಜುಲೈ ೧: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಹಯೋಗದಲ್ಲಿ ಡಾ.ಫ.ಗು.ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಜುಲೈ ೨ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಶ್ರೀ ಜಗದ್ಗುರು ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದ ಜಗದ್ಗುರು ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸುವರು. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದ ಘನಉಪಸ್ಥಿತಿ ವಹಿಸುವರು. ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರುಗಳಾದ ಶಿವಕುಮಾರ ಉದಾಸಿ, ಪಿ.ಸಿ. ಗದ್ದಿಗೌಡರ, ನರಗುಂದ ಶಾಸಕ ಸಿ.ಸಿ.ಪಾಟೀಲ, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್, ರೋಣ ಶಾಸಕ ಜಿ.ಎಸ್.ಪಾಟೀಲ, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಶ್ರೀಮತಿ ಉಷಾ ದಾಸರ, ಉಪಾಧ್ಯಕ್ಷೆ ಶ್ರೀಮತಿ ಸುನಂದಾ ಬಾಕಳೆ ಆಗಮಿಸುವರು.
ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಕನ್ನಡ ಪ್ರಾಧ್ಯಾಪಕರಾದ ಡಾ. ರಮೇಶ ಕಲ್ಲನಗೌಡರ ಅವರು ಡಾ.ಫ.ಗು. ಹಳಕಟ್ಟಿಯವರ ಜೀವನ ಮತ್ತು ಸಾಧನೆ ಕುರಿತು ಉಪನ್ಯಾಸ ನೀಡುವರು. ಮೃತ್ಯುಂಜಯ ಹಿರೇಮಠ ಮತ್ತು ತಂಡದವರಿಂದ ವಚನ ಸಂಗೀತ ಕಾರ್ಯಕ್ರಮ ಜರುಗಲಿದೆ. ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿ.ಸಿಖಾ , ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ ಬಿ, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ಸರ್ವರಿಗೂ ಸ್ವಾಗತ ಕೋರಿದ್ದಾರೆ.