This is the title of the web page
This is the title of the web page

Please assign a menu to the primary menu location under menu

Local News

ವಾಲ್ಮೀಕಿ ಅಭಿವೃದ್ಧಿ ನಿಗಮ: ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ


ಬೆಳಗಾವಿ,ಜುಲೈ: ೨೦೨೨-೨೩ ನೇ ಸಾಲಿಗೆ ೧೮ ರಿಂದ ೬೦ ವರ್ಷದೊಳಗಿನ ಅರ್ಹ ಪರಿಶಿಷ್ಟ ಪಂಗಡದ ಜನಾಗಂದವರ ಆರ್ಥಿಕ ಸಬಲೀಕರಣಕ್ಕಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ, ಬೆಳಗಾವಿ ಜಿಲ್ಲೆಯ ಜಿಲ್ಲಾ ಕಚೇರಿ ವತಿಯಿಂದ ಅರ್ಹ ಫಲಾಪೇಕ್ಷಿಗಳಿಂದ ಸುವಿಧಾ ಆ್ಯಪ ಮೂಲಕ ಆನ್‌ಲೈನ್ ಅರ್ಜಿ ಅಹ್ವಾನಿಸಿದೆ.
ನೇರ ಸಾಲ ಯೋಜನೆ: ಸಣ್ಣ ಆದಾಯಗಳಿಸುವ ಆರ್ಥಿಕ ಚಟುವಟಿಕೆಗಳಿಗಾಗಿ ಘಟಕ ವೆಚ್ಚ ಗರಿಷ್ಟ ರೂ.೧.೦೦ ಲಕ್ಷಗಳು ಇದರಲ್ಲಿ ೫೦% ಅವಧಿ ಸಾಲ ಮತ್ತು ೫೦% ಸಹಾಯಧನ.
ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಐ.ಎಸ್.ಬಿ) ಇ.ವಿ ಮತ್ತು ಇತರೆ ದ್ವಿಚಕ್ರ ವಾಹನ ಖರೀದಿ (ಇ-ಕಾಮರ್ಸ್ನಡಿಯಲ್ಲಿ ಕಂಪನಿಗಳಿಂದ ಗ್ರಾಹಕರಿಗೆ ಸರಕು ತಲುಪಿಸಲು) ಗರಿಷ್ಟ ರೂ.೫೦,೦೦೦/- ಸಹಾಯಧನ, ಉಳಿದ ಮೊತ್ತ ಬ್ಯಾಂಕ್ ಸಾಲ.
ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಐ.ಎಸ್.ಬಿ) ಚಟುವಟಿಕೆಗಳಿಗಾಗಿ: ಗರಿಷ್ಟ ರೂ. ೨. ಲಕ್ಷ, ಸಹಾಯಧನ ಉಳಿದ ಮೊತ್ತ ಬ್ಯಾಂಕ್‌ನಿಂದ ಸಾಲ.
ಸರಕು ಸಾಗಾಣಿಕೆ ವಾಹನ: ಗರಿಷ್ಟ ರೂ. ೩.೫೦ ಲಕ್ಷ, ಸಹಾಯಧನ ಉಳಿದ ಮೊತ್ತ ಬ್ಯಾಂಕ್ ಸಾಲ.
ಮೈಕ್ರೋ ಕ್ರೆಡಿಟ್ ಯೋಜನೆ: (ಮಹಿಳಾ ಸ್ವ-ಸಹಾಯ ಸಂಘಗಳಿಗೆ ಕಿರುಸಾಲ ಯೋಜನೆ) ಮಹಿಳೆಯರಲ್ಲಿ ಗುಂಪು ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡಿ ಆದಾಯ ಗಳಿಸಲು ಅನುವಾಗುವಂತೆ ಕನಿಷ್ಟ ೧೦ ಸದಸ್ಯರಿರುವ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಗರಿಷ್ಟ ರೂ.೨.೫೦ ಲಕ್ಷಗಳನ್ನು ಮಂಜೂರು ಮಾಡಲಾಗುವುದು. ಇದರಲ್ಲಿ ರೂ.೧.೫೦ ಲಕ್ಷ ಸಹಾಯಧನ ಮತ್ತು ರೂ.೧. ಲಕ್ಷ ಸಾಲ. ಭೂ ಒಡೆತನ ಯೋಜನೆ: ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕನಿಷ್ಟ ಒಂದು ಎಕರೆ ತರಿ/ಅರ್ಧ ಎಕರೆ ಭಾಗಯ್ತು ಅಥವಾ ಎರಡು ಎಕರೆ ಖುಷ್ಕಿ ಅಥವಾ ಘಟಕ ವೆಚ್ಚದಂತೆ ಲಭ್ಯವಾಗುವ ಜಮೀನನ್ನು ಖರೀದಿಸಿ ಕೊಡಲಾಗುವುದು.
ಗಂಗಾ ಕಲ್ಯಾಣ ಯೋಜನೆ: ಸಣ್ಣ ಮತ್ತು ಅತಿ ಸಣ್ಣ ರೈತರು ಹೊಂದಿರುವ ಖುಷ್ಕಿ/ ಒಣ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಿ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು.
ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸೇರಿದ ಫಲಾಪೇಕ್ಷಿಗಳು ಈ ಕೆಳಕಂಡ ವೆಬ್‌ಸೈಟ್‌ಗಳಲ್ಲಿ ಆನ್‌ಲೈನ್‌ನಲ್ಲಿ ಸಂಬಂಧಪಟ್ಟ ಯೋಜನೆಗಳಿಗೆ ಅಗತ್ಯ ದಾಖಲಾತಿಗಳಾದ ಜಾತಿ ಮತ್ತು ಆಧಾಯ, ಪಡಿತರ ಚೀಟಿ, ಆಧಾರ ಕಾರ್ಡ, ಓಟರ ಐಡಿ, ಬ್ಯಾಂಕ ಪಾಸ್‌ಬುಕ್ ಪ್ರತಿ ವಾಹನವಾಗಿದ್ದಲ್ಲಿ ಡ್ರಾವಿಂಗ್ ಲೈಸೆನ್ಸ್, ಗಂಗಾ ಕಲ್ಯಾಣ ಯೋಜನೆಗೆ ಜಮೀನಿನ ಪಹಣಿ ಮತ್ತು ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರ ದೃಢೀಕರಣ ಪತ್ರಗಳನ್ನು ಅಪ್‌ಲೋಡ್‌ಮಾಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ
ನಿಗಮದ ವೆಬ್‌ಸೈಟ್‌ಗಳಾದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಇಲ್ಲಿ ಸಂಪರ್ಕಿಸಬಹದು. ಅರ್ಜಿ ಸಲ್ಲಿಸಲು ಆಗಸ್ಟ್ ೨೦ ೨೦೨೨ ಕೊನೆಯ ದಿನಾಂಕವಾಗಿದ್ದು, ಮೇಲ್ಕಂಡ ವೆಬ್‌ಸೈಟ್‌ಗಳಲ್ಲಿ ನಿಗದಿತ ದಿನಾಂಕದೊಳಗೆ ಅರ್ಜಿಗಳನ್ನು ಸಲ್ಲಿಸುವುದು. ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ ರೂಂ ನಂ: ೨೨೧ ೨ನೇ ಮಹಡಿ ಸುವರ್ಣ ವಿಧಾನಸೌಧ ಹಲಗಾ ಬೆಳಗಾವಿ ಜಿಲ್ಲೆ ಹಾಗೂ ನಿಗಮದ ವೆಬ್‌ಸೈಟ್ hಣಣಠಿs://ಞmvsಣಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ ಮತ್ತು ದೂರವಾಣಿ ಸಂಖ್ಯೆ: ೦೮೩೧-೨೪೫೧೨೫೨ ಹಾಗೂ ಕಲ್ಯಾಣ ಮಿತ್ರ ಸಹಾಯವಾಣಿ-೯೪೮೨೩೦೦೪೦೦ ಇವರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply