whatsapp facebooktwitter

ಬಲವಂತದ ಬಳ್ಳಾರಿ ಬಂದ್ ಮಾಡಿದ್ರೇ ಕ್ರಮ:ಸಚಿವ ಆನಂದಸಿಂಗ್

ಬಲವಂತದ ಬಳ್ಳಾರಿ ಬಂದ್ ಮಾಡಿದ್ರೇ ಕ್ರಮ:ಸಚಿವ ಆನಂದಸಿಂಗ್

19-11-2020 05:59 PM

ಹೊಸಪೇಟೆ, ನ.19 :ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಂದ್ ಮಾಡುವುದಕ್ಕೆ ಮತ್ತು ಹೋರಾಟ ಮಾಡುವುದಕ್ಕೆ ಸ್ವಾತಂತ್ರ್ಯ ಇದೆ. ಬಲವಂತದ ಬಂದ್ ಮಾಡಿದರೇ ಕಾನೂನಿನ ಕ್ರಮಕೈಗೊಳ್ಳಲಾಗುವುದು ಅರಣ್ಯ,ಪರಿಸರ,ಜೀವಿಶಾಸ್ತ್ರ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ತಿಳಿಸಿದರು.
ವಿಜಯನಗರ ಜಿಲ್ಲೆ ರಚನೆ ವಿರೋಧಿಸಿ ವಿವಿಧ ಸಂಘಟನೆಗಳು ನ. 26ರಂದು ಬಳ್ಳಾರಿ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಹೊಸಪೇಟೆಯ ಅಮರಾವತಿ ಅತಿಥಿ ಗೃಹದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಯಾವುದೇ ರೀತಿಯ ಬಲವಂತದ ಮತ್ತು ಜನರಿಗೆ ತೊಂದರೆಯಾಗುವಂತೆ ಹೋರಾಟ ಮತ್ತು ಬಂದ್ ಮಾಡಿದರೇ ಕ್ರಮಕೈಗೊಳ್ಳಲಾಗುವುದು. ಸಾಂಕೇತಿಕ ಹೋರಾಟ ಮಾಡಲಿ ಎಂದರು.
ಸಾರ್ವಜನಿಕರಿಗೆ ಆಡಳಿತಾತ್ಮಕವಾಗಿ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ದೊಡ್ಡ ದೊಡ್ಡ ಜಿಲ್ಲೆಗಳನ್ನು ವಿಭಜಿಸಿ ರಾಮನಗರ,ಯಾದಗಿರಿಗಳು ಜಿಲ್ಲೆ ಮಾಡಿದಂತೆ ವಿಜಯನಗರ ಜಿಲ್ಲೆ ಮಾಡುವುದಕ್ಕೆ ಸರಕಾರ

Advertise

ತೀರ್ಮಾನಿಸಿದೆ ಎಂದರು.
ವಿಜಯನಗರ ಜಿಲ್ಲೆಯ ಕೂಗು ಇಂದು ನಿನ್ನೆಯದಲ್ಲ;ಇದು ಬಹಳದಿನಗಳಿಂದ ಇತ್ತು. ಬಳ್ಳಾರಿ ಜಿಲ್ಲೆಯ ಪಶ್ಚಿಮ ತಾಲೂಕುಗಳ ಬಹುದಿನಗಳ ಬೇಡಿಕೆಗೆ ಸರಕಾರ ಸ್ಪಂದಿಸಿದೆ ಎಂದರು.
ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ ಅವರು ಸಮಾಧಾನವಾಗಿಯೇ ಇದ್ದಾರೆ;ಮಾಧ್ಯಮದವರೇ ಅವರನ್ನು ಪ್ರಚೋದಿಸ್ತಾ ಇರುವುದು ಎಂದರು.
ಸರಕಾರದ ಮುಖ್ಯ ಕಾರ್ಯದರ್ಶಿಗಳು, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಕುಳಿತು ಚರ್ಚಿಸಿ ಯಾವ ತಾಲೂಕುಗಳು ಯಾವ್ಯಾವ ಜಿಲ್ಲೆಗೆ ಸೆರಿಸಬೇಕು ಅಂತ ಚರ್ಚಿಸಿ ತೀರ್ಮಾನಿಸಲಿದ್ದಾರೆ. ಇದುವರೆಗೆ ಯಾವಾ ತಾಲೂಕು ಯಾವ ಜಿಲ್ಲೆಗಳಿಗೆ ಸೇರಿಸಬೇಕು ಎಂಬುದು ನಿರ್ಧರಿಸಿಲ್ಲ. ನೂತನ ಜಿಲ್ಲೆಯ ಮ್ಯಾಪ್ ಇನ್ನೂ ರೆಡಿ ಮಾಡಿಲ್ಲ;ಕೆಲವರು ತಮ್ಮ ಬೆಳೆ‌ ಬೇಯಿಸಿಕೊಳ್ಳುವುದಕ್ಕೆ ಪ್ರಚೋದಿಸ್ತಾ ಇದ್ದಾರೆ ಎಂದು ಟೀಕಿಸಿದರು.
ಈ ಸಂದರ್ಭದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್, ಸಹಕಾರ ಸಚಿವ ಸೋಮಶೇಖರ್ ಮತ್ತಿತರರು ಇದ್ದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

"ಅಗ್ನಿ ಹೋತ್ರ" ದ ಲಾಭ ಮತ್ತು ಮಹತ್ವ

ಗೋವು ಉಸಿರಾಟ ಪ್ರಕ್ರಿಯೆಯಲ್ಲಿ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರಗೆ ಬಿಡುತ್ತದೆ !!ಮತ್ಯಾವ ಜೀವಸಂಕುಲದಲ್ಲೂ
ಹೀಗಿಲ್ಲಗೋವಿನ...

Read More

01-12-2020 07:55 AM

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಡಿಗಲ್ಲು ಸಮಾರಂಭ

ಗಂಗಾವತಿ : ಸಮೀಪದ ಶ್ರೀಕ್ಷೇತ್ರ ಗಡ್ಡಿ ಗ್ರಾಮದಲ್ಲಿ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪುಣ್ಯಾಶ್ರಮದಲ್ಲಿ ಇಂದು ಶ್ರೀ ಶ್ರೀ ರಾಜರಾಜೇಶ್ವರಿ ದೇವಸ್ಥಾನದ...

Read More

01-12-2020 07:46 AM

ಆನ್ ಲೈನ್ ಪದ್ದತಿಯಿಂದ ಶೈಕ್ಷಣಿಕಾಭಿವೃದ್ಧಿ ಶೂನ್ಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ನ30ರಂದು ಜರುಗಿತು, ಶಾಸಕರಿಗೆ ಅಭಿನಂದನೆ:-ಸಭೆಯ ಪ್ರಾರಂಭದಲ್ಲಿಯೇ, ಕೂಡ್ಲಿಗಿ ತಾಲೂಕನ್ನು...

Read More

01-12-2020 06:30 AM

ಮಾಧ್ಯಮ ಸಾಕ್ಷರತೆ ತರಬೇತಿಗಳು

ಬೆಳಗಾವಿ : ಫ್ಯಾಕ್ಟ್ ಶಾಲಾ ಇಂಡಿಯಾ ಮಿಡಿಯಾಲಿಟ್ರಸಿ ನೆಟವರ್ಕ್, ಡಾಟಾಲಿಡ್ಸ್ ಇವರುಗಳ ಸಹಾಯದಿಂದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ...

Read More

01-12-2020 06:21 AM

ಅನ್ನದಾನ ಸ್ವಾಮಿಗಳು ನಿಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಚಳ್ಳೂರ ಗ್ರಾಮದ ಬೃಹನ ಮಠದ ಅನ್ನದಾನಸ್ವಾಮಿಗಳು ಸೊಮವಾರ ಸಾಯಂಕಾಲ 6.00ಗಂಟೆಗೆ ಶಿವಾಧಿನರಾಗಿದ್ದಾರೆ.ಅವರ...

Read More

01-12-2020 06:18 AM

Read More
×E-Paperಸಾಹಿತ್ಯGeneralVideos