whatsapp facebooktwitter

ಪ್ರಗತಿ ಪರಿಶೀಲನಾ ಸಭೆ ಕೊರೋನಾ ಸೋಂಕು ಕುರಿತು ಮುಂಜಾಗ್ರತೆ ಇರಲಿ

ಪ್ರಗತಿ ಪರಿಶೀಲನಾ ಸಭೆ ಕೊರೋನಾ ಸೋಂಕು ಕುರಿತು ಮುಂಜಾಗ್ರತೆ ಇರಲಿ

19-11-2020 09:24 PM

ಗದಗ .೧೯: ಕೊರೋನಾ ಸೋಂಕು ನಿಯಂತ್ರಣಕ್ಕೆ ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಎಲ್ಲರೂ ಪಾಲಿಸುವುದರ ಮೂಲಕ ಸೋಂಕು ಹತೋಟೆಗೆ ಅಧಿಕಾರಿಗಳು ನಿಗಾವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿ. ಪಂ. ಸಭಾಂಗಣದಲ್ಲಿ ಏರ್ಪಡಿಸಿದ ಜಿಲ್ಲಾ ಮಟ್ಟದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗದಗ ಜಿಲ್ಲೆಯ ಕೊರೋನಾ ಅಂಕಿ ಅಂಶಗಳ ಮಾಹಿತಿ ಪಡೆದು, ಸೋಂಕು ಸದ್ಯದ ಪರಿಸ್ಥಿತಿಯಲ್ಲಿ ನಿಯಂತ್ರಣದಲ್ಲಿದ್ದು ಮುಂದಿನ ದಿನಗಳಲ್ಲಿ ಅಧಿಕವಾದಲ್ಲಿ ಅಗತ್ಯವಿರುವ ಎಲ್ಲ ರೀತಿಯ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡಿಕೊಳ್ಳೂವುದರ ಮೂಲಕ ನಿಯಂತ್ರಣಕ್ಕೆ ಮುಂದಾಗಬೇಕು. ಸಾರ್ವಜನಿಕರಿಗೆ, ಸೋಂಕಿತರಿಗೆ ಕೊರೋನಾ ಹಾಗೂ ಚಿಕಿತ್ಸೆ ಕುರಿತು ಸಹಾಯವಾಣಿ ಮೂಲಕ ನಿಖರ ಮಾಹಿತಿಯನ್ನು ಒದಗಿಸಬೇಕು. ಹೋಮ್ ಕ್ವಾರಂಟೈನ್ ನಲ್ಲಿರುವವರ ಮೇಲೆ ಆಗಾಗ್ಗೆ ತಪಾಸಣೆ ನಡೆಸುವ ಮೂಲಕ ಸೋಂಕು ಹರಡದಂತೆ ಕಾರ್ಯನಿರ್ವಹಣೆ ಅಗತ್ಯ.
ಜಿಲ್ಲೆಯಲ್ಲಿ ಕಾಲೇಜುಗಳು ಆರಂಭವಾಗಿದ್ದು ಆದ್ಯತೆ ಮೇರೆಗೆ ಕಾಲೇಜು ವಿದ್ಯಾರ್ಥಿಗಳ ಕೊರೋನಾ ಸೋಂಕು ಪರೀಕ್ಷೆಯನ್ನು ಕಾಲೇಜುಗಳಿಗೆ ತೆರಳಿ ಅಲ್ಲಿಯೇ ಗಂಟಲು ದ್ರವ ಸಂಗ್ರಹಿಸಿ ತಕ್ಷಣ ವರದಿ ನೀಡುವ ಮೂಲಕ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ಆರೋಗ್ಯ ಇಲಾಖೆ ಸಿಬ್ಬಂದಿಗಳು ಕೆಲಸ ನಿರ್ವಹಿಸುವಂತೆ ತಿಳಿಸಿದರು.

ಜಿಲ್ಲೆಯ ಪ್ರತಿ ಗ್ರಾಮಕ್ಕೂ ಮೂಲಭೂತ ಸೌಕರ್ಯಗಳನ್ನು ಒದಗಿಸುವದರೊಂದಿಗೆ ರುದ್ರ ಭೂಮಿಯನ್ನು ಒದಗಿಸಬೇಕು. ಅಧಿಕಾರಿಗಳ ಮಾಹಿತಿ ನೀಡಿದಂತೆ ೧೧೧ ಗ್ರಾಮಗಳಲ್ಲಿ ರುದ್ರ ಭೂಮಿಯ ಅಗತ್ಯವಿದ್ದು ಸದ್ಯದಲಿಯೇ ಅವರಿಗೆ ಹತ್ತಿರದ ಸರ್ಕಾರಿ ಭೂಮಿಯನ್ನು ಗುರುತಿಸಿ ಮಂಜೂರಾತಿ ನೀಡಬೇಕು. ದಾಖಲೆ ರಹಿತ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಅಲ್ಲದೇ ಪೋಡಿ ಮುಕ್ತ ಗ್ರಾಮಗಳಾಗಿ ಪರಿವರ್ತಿಸಬೇಕೆಂದು ತಿಳಿಸಿದರು.
ಬೆಳೆ ಸಮೀಕ್ಷೆ ಪೂರ್ಣಗೊಂಡಿದ್ದು ಆನ್‌ಲೈನ್‌ನಲ್ಲಿ ನೊಂದಣಿ ಕಾರ್ಯ ಆದಷ್ಟು ಬೇಗನೆ ಮುಕ್ತಾಯಗೊಳಿಸಿ. ಪ್ರವಾಹ ಹಾಗೂ ಮಳೆಯಿಂದ ಹಾನಿಗೊಳಗಾದ ಮನೆಗಳ ಸರ್ವೆ ಕಾರ್ಯ ನಡೆಸಿ ಮಾರ್ಗಸೂಚಿಗಳನ್ವಯ ಪರಿಹಾರ ವಿತರಣೆ ಮುಕ್ತಾಯಗೊಳಿಸುವಂತೆ ತಿಳಿಸಿದರು.
ನಗರೋತ್ತಾನ ಯೋಜನೆ, ೧೪ ನೇ ಹಣಕಾಸು ಯೋಜನೆ, ಸ್ವಚ್ಛ ಭಾರತ ಮಿಷನ್, ಅಮೃತ ಯೋಜನೆಗಳ ಕುರಿತು ಮಾಹಿತಿ ಪಡೆದು ಈ ಎಲ್ಲ ಯೋಜನೆಗಳ ಕಾಮಗಾರಿಗಳು ಬಹುದಿನಗಳಿಂದ ನಡೆಯುತ್ತಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳಿಸುವ ಮೂಲಕ ಸಾರ್ವಜನಿಕರಿಗೆ ಮುಕ್ತ ಸಂಚಾರಕ್ಕೆ

Advertise

ಅನುವು ಮಾಡಿಕೊಡಬೇಕು. ನರೇಗಾ ಯೋಜನೆ ಅಡಿ ಕೂಲಿಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವ ಮೂಲಕ ಸ್ವಾವಲಂಬನೆ ಜೀವನಕ್ಕೆ ಮುಂದಾಗುವಂತೆ ತಿಳಿಸಿದ ಅವರು, ಹೆಚ್ಚು ಹೆಚ್ಚು ಕಾಮಗಾರಿಗಳನ್ನು ಕೈಗೊಳ್ಳಬೇಕೆಂದರು. ಅಲ್ಲದೇ ಸ್ವಚ್ಛ ಭಾರತ ಮಿಷನ್ ನಡಿ ನಿರ್ಮಿಸಿರುವ ಶೌಚಾಲಯಗಳನ್ನು ಗ್ರಾಮೀಣ ಭಾಗದ ಜನರು ಬಳಕೆ ಮಾಡುವ ಕುರಿತು ಅರಿವು ಮೂಡಿಸುವ ಮೂಲಕ ಯೋಜನೆಯ ಸದುಪಯೋಗಕ್ಕೆ ಕ್ರಮ ವಹಿಸುವಂತೆ ತಿಳಿಸಿದರು.
ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯಲ್ಲಿ ೩೦,೦೦೦ ಕಾರ್ಡುಗಳನ್ನು ವಿತರಿಸಿದ ಕುರಿತು ಮಾಹಿತಿ ಪಡೆದು ಕಾರ್ಡು ವಿತರಣೆಯ ಕಾರ್ಯ ಚುರುಕುಗೊಳಿಸುವ ಮೂಲಕ ಅರ್ಹ ಎಲ್ಲರಿಗೂ ಆರೋಗ್ಯ ಕರ್ನಾಟಕ ಕಾರ್ಡ ತಲುಪುವಂತೆ ಕ್ರಮ ವಹಿಸಬೇಕು. ಈ ಮೂಲಕ ಜಿಲ್ಲೆಯ ಬಡವರಿಗೆ ಉಚಿತ ಆರೋಗ್ಯ ಸೇವೆ ದೊರೆಯುವಂತೆ ಮಾಡಬೇಕೆಂದು ತಿಳಿಸಿದರು.

ಜಿಲ್ಲೆಯ ಶೈಕ್ಷಣಿಕ ಪ್ರಗತಿ ಕುರಿತು ಮಾಹಿತಿ ಅವಲೋಕಿಸಿದ ಅವರು ಕಳೆದ ವರ್ಷದ ಎಸ್.ಎಸ್.ಎಲ್.ಸಿ. ಫಲಿತಾಂಶವು ಕಡಿಮೆಯಾಗಿದ್ದು ಪ್ರಸಕ್ತ ಸಾಲಿನ ಫಲಿತಾಂಶವು ಉತ್ತಮಗೊಳಿಸಲು ಸೂಕ್ತ ಕ್ರಿಯಾ ಯೋಜನೆ ರೂಪಿಸಿ ಅನುಷ್ಟಾನಗೊಳಿಸುವ ಮೂಲಕ ಶೈಕ್ಷಣಿಕ ಪ್ರಗತಿ ಸಾಧನೆಗೆ ಮುಂದಾಗುವಂತೆ ಹೇಳಿದರು. ಅಲ್ಲದೇ ಜಿಲ್ಲಾ ಮಟ್ಟದ ಅಧಿಕಾರಿಗಳು ನಿಯಮಿತವಾಗಿ ಶಾಲೆ ಆರಂಭವಾದ ನಂತರ ಭೇಟಿ ನೀಡಿ ಸೂಕ್ತ ಸಲಹೆ ನೀಡುವ ಮೂಲಕ ಶೈಕ್ಷಣಿಕ ಪ್ರಗತಿಗೆ ಸಹಕರಿಸುವಂತೆ ಸೂಚಿಸಿದರು.
ಅಂಬೇಡ್ಕರ್ ಅಭಿವೃದ್ಧಿ ನಿಗಮ, ದೇವರಾಜ ಅರಸು ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಸೇರಿದಂತೆ ಇತರೆ ನಿಗಮಗಳಲ್ಲಿ ಕಳೆದ ಎರಡು ಮೂರು ವರ್ಷಗಳಲ್ಲಿ ಕೈಗೊಂಡ ಕಾಮಗಾರಿಗಳು ಪೂರ್ಣಗೊಳ್ಳದಿರುವ ಕುರಿತು ಜಿಲ್ಲಾ ಮಟ್ಟದಲ್ಲಿ ಮಾಸಿಕಿವಾಗಿ ಪರಿಶೀಲನೆ ನಡೆಸಿ ಕಾಮಗಾರಿಗಳ ಮುಕ್ತಾಯಕ್ಕೆ ಸೂಚಿಸಿದರು. ಅರಣ್ಯ ಭೂಮಿ ಒತ್ತುವರಿ ಕುರಿತಂತೆ ಜಂಟಿ ಸರ್ವೇ ಮಾಡುವ ಮೂಲಕ ಅರಣ್ಯ ಭೂಮಿಯನ್ನು ಹದ್ದುಬಸ್ತುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ಹೇಳಿದರು.

ಸಭೆಗೂ ಮುನ್ನ ಅಪರ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ಅವರು, ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ. ಸಲಗರೆ ಇದ್ದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಸುಂದರೇಶ್‌ಬಾಬು, ಜಿಲ್ಲಾ ಪಂಚಾಯತ್ ಸಿಇಓ ಡಾ. ಆನಂದ್ ಕೆ, ಉಪಅರಣ್ಯ ಸಂರಕ್ಷಣಾಧಿಕಾರಿ ಸೂರ್‍ಯಸೇನ, ಅಪರ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಬೈಕ್ ಕಳ್ಳರ ಬಂಧನ

ಯರಗಟ್ಟಿ : ಬೈಕ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಮುರಗೋಡ ಪೋಲಿಸರು ಬಂಧಿಸಿದ್ದು ಆರು (6) ಬೈಕ್ ವಶಪಡಿಸಿಕೊಂಡಿದ್ದಾರೆ.
ಯರಗಟ್ಟಿ ನಗರ ಮತ್ತು ಹಲವು...

Read More

28-11-2020 08:38 PM

ಪರಿತ್ಯಕ್ತ ಗಂಡು ಮಗು ರಕ್ಷಣೆ

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಪರಿತ್ಯಕ್ತ ಗಂಡು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು...

Read More

28-11-2020 08:37 PM

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಧ್ಯತೆ ನೀಡಿ : ಸುಂದರೇಶ ಬಾಬು

ಗದಗ ೨೮ : ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆಧ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ....

Read More

28-11-2020 08:25 PM

ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಗಂಭೀರ

ಜೈಪುರ : ಕೊರೋನಾ ಸೋಂಕಿನಿಂದ ಬಳಲುತ್ತಿರುವ ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೊರೊನಾದಿಂದ ಪೈಲಟ್...

Read More

28-11-2020 08:09 PM

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ...

Read More

28-11-2020 07:57 PM

Read More
×E-Paperಸಾಹಿತ್ಯGeneralVideos