whatsapp facebooktwitter

ಗದಗ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಚಿವರಿಗೆ ಮನವಿ ಸಲ್ಲಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು

ಗದಗ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಚಿವರಿಗೆ ಮನವಿ ಸಲ್ಲಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು

20-11-2020 03:38 PM

ಗದಗ ನ ೨೦ : ಮಹಾವಿದ್ಯಾಲಯದಲ್ಲಿ ಶಿಕ್ಷಕರ ಮತ್ತು ಲ್ಯಾಬ್ ಗಳ ಕೊರತೆಯಿದ್ದು ಶೈಕ್ಷಣಿಕ ಏಳ್ಗೆಯಿಂದ ಹಿನ್ನಡೆಯಾಗುತ್ತಿದೆ ಆದಷ್ಟು ಬೇಗ ಗದಗ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಕೆಲವು ಮೂಲ ಸೌಕರ್ಯವನ್ನು ಒದಗಿಸಲು ಪಶುಸಂಗೋಪನೆ, ವಕ್ಫ್ ಹಾಗೂ ಹಜ್ ಸಚಿವರಾದ ಪ್ರಭು ಚವ್ಹಾಣ ಅವರಿಗೆ ಮಹಾವಿದ್ಯಾಲಯದ ಡೀನ್ ಡಾ. ಆರ್. ನಾಗರಾಜ್ ಕೇಳಿಕೊಂಡರು.

ಇದಕ್ಕೆ ಸಚಿವರು, ಸರ್ಕಾರದ ಮಟ್ಟದಲ್ಲಿ ಇಲಾಖೆಯ ಮಟ್ಟದಲ್ಲಿ ಬೇಕಾದ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿಕೊಳ್ಳುವುದಾಗಿ ಭರವಸೆ ನೀಡಿದರು. ಪಶು ವೈಧ್ಯಕೀಯ ಮಹಾವಿದ್ಯಾಲಯವು ಉತ್ತಮ ಶಿಕ್ಷಣ ನಿಡುವುದರೊಂದಿಗೆ ಮಹಾವಿದ್ಯಾಲಯದಲ್ಲಿ ತರಬೇತಿ ಪಡೆದ ಎಲ್ಲರೂ ಉತ್ತಮ ಸಮಾಜ ಕಾರ್ಯ ಮಾಡುವಂತಾಗಲಿ ಈ ನಿಟ್ಟಿನಲ್ಲಿ ಮಹಾವಿದ್ಯಾಲಯ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಪಶು

Advertise

ವೈದ್ಯಕೀಯ ಮಹಾವಿದ್ಯಾಲಯದ ಕಟ್ಟಡ ನಿರ್ಮಾಣದ ಗುಣಮಟ್ಟ ಕಂಡು ಬೇಸರ ವ್ಯಕ್ತಪಡಿಸಿದ ಸಚಿವ ಪ್ರಭು ಚವ್ಹಾಣ್, ಉತ್ತಮ ರೀತಿಯಲ್ಲಿ ಕಟ್ಟಡ ನಿರ್ವಹಣೆ ಅಗತ್ಯವಾಗಿದೆ. ಮಹಾವಿದ್ಯಾಲಯದ ಆಡಳಿತ ಉತ್ತಮ ನಿರ್ವಹಣೆ ಮಾಡುವಲ್ಲಿ ಗಮನ ಹರಿಸುವಂತೆ ತಿಳಿಸಿದರು.

ಅಂದಾಜು ೧೫೦ ಏಕರೆ ಪ್ರದೇಶದಲ್ಲಿ ವ್ಯಾಪಿಸಿರುವ ಮಹಾವಿದ್ಯಾಲಯ ಸುವ್ಯವಸ್ಥಿತವಾದ ಪಶು ಚಿಕಿತ್ಸಾ ಸಂಕೀರ್ಣವನ್ನು ಹೊಂದಿದೆ ಎಂದು ತಿಳಿಸಿ ಮಹಾವಿದ್ಯಾಲಯದ ಕೆಲವು ವಿಭಾಗಗಳಿಗೆ ಬೇಟಿ ನೀಡಿ, ಆವರಣದಲ್ಲಿ ಗಿಡ ನೆಡುವ ಮೂಲಕ ಮಹಾವಿದ್ಯಾಲಯದ ಕಾರ್ಯಗಳಿಗೆ ಶುಭ ಹಾರೈಸಿದರು.

ಇದಕ್ಕು ಮುನ್ನ ಸಚಿವರು ಗದಗನಲ್ಲಿನ ಪಶುಸಂಗೋಪನೆ ಉಪನಿರ್ದೇಶಕರ ಕಚೇರಿಗೆ ಹಾಗೂ ಪಾಲಿಕ್ಲಿನಿಕ್‌ಗೆ ಭೇಟಿ ನೀಡಿ ಹಾಜರಾತಿ, ಔಷಧಗಳ ಸ್ಟಾಕ್ ಹಾಗೂ ಇತರೆ ದಾಖಲಾತಿಗಳ ಪರಿಶೀಲನೆ ನಡೆಸಿದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

"ಅಗ್ನಿ ಹೋತ್ರ" ದ ಲಾಭ ಮತ್ತು ಮಹತ್ವ

ಗೋವು ಉಸಿರಾಟ ಪ್ರಕ್ರಿಯೆಯಲ್ಲಿ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರಗೆ ಬಿಡುತ್ತದೆ !!ಮತ್ಯಾವ ಜೀವಸಂಕುಲದಲ್ಲೂ
ಹೀಗಿಲ್ಲಗೋವಿನ...

Read More

01-12-2020 07:55 AM

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಡಿಗಲ್ಲು ಸಮಾರಂಭ

ಗಂಗಾವತಿ : ಸಮೀಪದ ಶ್ರೀಕ್ಷೇತ್ರ ಗಡ್ಡಿ ಗ್ರಾಮದಲ್ಲಿ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪುಣ್ಯಾಶ್ರಮದಲ್ಲಿ ಇಂದು ಶ್ರೀ ಶ್ರೀ ರಾಜರಾಜೇಶ್ವರಿ ದೇವಸ್ಥಾನದ...

Read More

01-12-2020 07:46 AM

ಆನ್ ಲೈನ್ ಪದ್ದತಿಯಿಂದ ಶೈಕ್ಷಣಿಕಾಭಿವೃದ್ಧಿ ಶೂನ್ಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ನ30ರಂದು ಜರುಗಿತು, ಶಾಸಕರಿಗೆ ಅಭಿನಂದನೆ:-ಸಭೆಯ ಪ್ರಾರಂಭದಲ್ಲಿಯೇ, ಕೂಡ್ಲಿಗಿ ತಾಲೂಕನ್ನು...

Read More

01-12-2020 06:30 AM

ಮಾಧ್ಯಮ ಸಾಕ್ಷರತೆ ತರಬೇತಿಗಳು

ಬೆಳಗಾವಿ : ಫ್ಯಾಕ್ಟ್ ಶಾಲಾ ಇಂಡಿಯಾ ಮಿಡಿಯಾಲಿಟ್ರಸಿ ನೆಟವರ್ಕ್, ಡಾಟಾಲಿಡ್ಸ್ ಇವರುಗಳ ಸಹಾಯದಿಂದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ...

Read More

01-12-2020 06:21 AM

ಅನ್ನದಾನ ಸ್ವಾಮಿಗಳು ನಿಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಚಳ್ಳೂರ ಗ್ರಾಮದ ಬೃಹನ ಮಠದ ಅನ್ನದಾನಸ್ವಾಮಿಗಳು ಸೊಮವಾರ ಸಾಯಂಕಾಲ 6.00ಗಂಟೆಗೆ ಶಿವಾಧಿನರಾಗಿದ್ದಾರೆ.ಅವರ...

Read More

01-12-2020 06:18 AM

Read More
×E-Paperಸಾಹಿತ್ಯGeneralVideos