whatsapp facebooktwitter

ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳ ವರ್ಗಾವಣೆ

ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳ ವರ್ಗಾವಣೆ

20-11-2020 06:20 PM

ಧಾರವಾಡ ನ. 20: 2020-21 ನೇ ಸಾಲಿಗೆ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನು ಕಡ್ಡಾಯವಾಗಿ ಗಣಕೀಕೃತ ಕೌನ್ಸೆಲಿಂಗ್ ಮೂಲಕ ನಡೆಸಲಾಗುವುದು.

ವರ್ಗಾವಣೆ ಅಧಿಸೂಚನೆ ದಿನಾಂಕಕ್ಕೆ ಗರಿಷ್ಠ 5 ವರ್ಷದ ಅವಧಿ ಪೂರೈಸಿದ ನಿರ್ದಿಷ್ಟಪಡಿಸಿದ ಹುದ್ದೆಗಳಲ್ಲಿರುವ ಅಂದರೆ ಕ್ಷೇತ್ರ ಸಮನ್ವಯಾಧಿಕಾರಿಗಳು, ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ, ಸಹಾಯಕ ಯೋಜನಾ ಸಮನ್ವಯಾಧಿಕಾರಿಗಳು ಹಾಗೂ ವಿಷಯ ಪರಿವೀಕ್ಷಕರ ಹುದ್ದೆಗಳಲ್ಲಿರುವ ಗ್ರೂಪ್ ಬಿ ವೃಂದದ ಅಧಿಕಾರಿಗಳ ವರ್ಗಾವಣೆಯನ್ನು ಅಂತಿಮ ಆದ್ಯತಾ ಪಟ್ಟಿಯಂತೆ ದಿನಾಂಕ: 23-12-2020 ರಂದು ಗಣಕೀಕೃತ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಲಾಗುವುದು.

ವರ್ಗಾವಣೆ ಅಧಿಸೂಚನೆ ದಿನಾಂಕಕ್ಕೆ ಕನಿಷ್ಠ (3) ವರ್ಷ ಅವಧಿ ಪೂರೈಸಿದ ಹಾಗೂ ಗರಿಷ್ಠ (5) ವರ್ಷದ ಅವಧಿ ಪೂರೈಸದ ನಿರ್ದಿಷ್ಟಪಡಿಸಿದ ಹುದ್ದೆಗಳಲ್ಲಿರುವ ಗ್ರೂಪ್ ‘ಬಿ’ ವೃಂದದ ಅಧಿಕಾರಿಗಳ ವರ್ಗಾವಣೆಯನ್ನು ಅಂತಿಮ ಆದ್ಯತಾ ಪಟ್ಟಿಯಂತೆ ದಿನಾಂಕ: 11-01-2021 ರಂದು ಗಣಕೀಕೃತ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಲಾಗುವುದು.

ಮುಖ್ಯ ಶಿಕ್ಷಕರ ವೃಂದದ ವಿಭಾಗ ಮಟ್ಟದ ಸಾಮಾನ್ಯ ಕೋರಿಕೆ

Advertise

ವರ್ಗಾವಣೆಯನ್ನು ಅಂತಿಮ ಆದ್ಯತಾ ಪಟ್ಟಿಯಂತೆ ದಿನಾಂಕ: 04-01-2021 ರಿಂದ 09-01-2021 ರ ವರೆಗೆ ಗಣಕೀಕೃತ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಲಾಗುವುದು.

ಮುಖ್ಯ ಶಿಕ್ಷಕರ ವೃಂದದ ವಿಭಾಗ ಮಟ್ಟದ ಪರಸ್ಪರ ವರ್ಗಾವಣೆಯನ್ನು ಅಂತಿಮ ಆದ್ಯತಾ ಪಟ್ಟಿಯಂತೆ ದಿನಾಂಕ: 13-01-2021 ರಂದು ಗಣಕೀಕೃತ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಲಾಗುವುದು.

ಈ ಕುರಿತು ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಇಲಾಖಾ ಜಾಲತಾಣದಲ್ಲಿ ವಿವರವಾದ ಸೂಚನೆಗಳುಳ್ಳ ಅಧೀಕೃತ ಜ್ಞಾಪನದ ಮೂಲಕ ವಿವರವಾದ ವೇಳಾ ಪಟ್ಟಿ ಪ್ರಕಟಿಸಲಾಗಿದೆ. ಅದರಂತೆ ಬೆಳಗಾವಿ ವಿಭಾಗದ ಅರ್ಹ ಅಧಿಕಾರಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಪರ ಆಯುಕ್ತರ ಕಚೇರಿಯ ಸಹಾಯಕ ನೋಡಲ್ ಅಧಿಕಾರಿ ಹಾಗೂ ಹಿರಿಯ ಸಹಾಯಕ ನಿರ್ದೇಶಕರಾದ ಕೇಶವ ವಾಮನ ಪೆಟ್ಲೂರ, ಮೊ.ಸಂಖ್ಯೆ : 7975392787 ಇವರನ್ನು ಹಾಗೂ ಸಂಬಂಧಿಸಿದ ಜಿಲ್ಲೆಗಳ ಉಪನಿರ್ದೇಶಕರ ಹಾಗೂ ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿನ ಸಹಾಯವಾಣಿಯನ್ನು ಸಂಪರ್ಕಿಸಬಹುದೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಡಾ: ಬಿ.ಕೆ.ಎಸ್. ವರ್ಧನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

"ಅಗ್ನಿ ಹೋತ್ರ" ದ ಲಾಭ ಮತ್ತು ಮಹತ್ವ

ಗೋವು ಉಸಿರಾಟ ಪ್ರಕ್ರಿಯೆಯಲ್ಲಿ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರಗೆ ಬಿಡುತ್ತದೆ !!ಮತ್ಯಾವ ಜೀವಸಂಕುಲದಲ್ಲೂ
ಹೀಗಿಲ್ಲಗೋವಿನ...

Read More

01-12-2020 07:55 AM

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಡಿಗಲ್ಲು ಸಮಾರಂಭ

ಗಂಗಾವತಿ : ಸಮೀಪದ ಶ್ರೀಕ್ಷೇತ್ರ ಗಡ್ಡಿ ಗ್ರಾಮದಲ್ಲಿ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪುಣ್ಯಾಶ್ರಮದಲ್ಲಿ ಇಂದು ಶ್ರೀ ಶ್ರೀ ರಾಜರಾಜೇಶ್ವರಿ ದೇವಸ್ಥಾನದ...

Read More

01-12-2020 07:46 AM

ಆನ್ ಲೈನ್ ಪದ್ದತಿಯಿಂದ ಶೈಕ್ಷಣಿಕಾಭಿವೃದ್ಧಿ ಶೂನ್ಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ನ30ರಂದು ಜರುಗಿತು, ಶಾಸಕರಿಗೆ ಅಭಿನಂದನೆ:-ಸಭೆಯ ಪ್ರಾರಂಭದಲ್ಲಿಯೇ, ಕೂಡ್ಲಿಗಿ ತಾಲೂಕನ್ನು...

Read More

01-12-2020 06:30 AM

ಮಾಧ್ಯಮ ಸಾಕ್ಷರತೆ ತರಬೇತಿಗಳು

ಬೆಳಗಾವಿ : ಫ್ಯಾಕ್ಟ್ ಶಾಲಾ ಇಂಡಿಯಾ ಮಿಡಿಯಾಲಿಟ್ರಸಿ ನೆಟವರ್ಕ್, ಡಾಟಾಲಿಡ್ಸ್ ಇವರುಗಳ ಸಹಾಯದಿಂದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ...

Read More

01-12-2020 06:21 AM

ಅನ್ನದಾನ ಸ್ವಾಮಿಗಳು ನಿಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಚಳ್ಳೂರ ಗ್ರಾಮದ ಬೃಹನ ಮಠದ ಅನ್ನದಾನಸ್ವಾಮಿಗಳು ಸೊಮವಾರ ಸಾಯಂಕಾಲ 6.00ಗಂಟೆಗೆ ಶಿವಾಧಿನರಾಗಿದ್ದಾರೆ.ಅವರ...

Read More

01-12-2020 06:18 AM

Read More
×E-Paperಸಾಹಿತ್ಯGeneralVideos