whatsapp facebooktwitter

ಮರಾಠಾ ಅಭಿವೃದ್ಧಿ ಪ್ರಾಧಿಕಾರ:ಮುಖಂಡರ ಮುಖಕ್ಕೆ ಮಸಿ ಬಳಿಯಲು ಮುಂದಾಗಬೇಕಾಗುತ್ತದೆ -ರಣಗಟ್ಟಿಮಠ

ಮರಾಠಾ ಅಭಿವೃದ್ಧಿ ಪ್ರಾಧಿಕಾರ:ಮುಖಂಡರ ಮುಖಕ್ಕೆ ಮಸಿ ಬಳಿಯಲು ಮುಂದಾಗಬೇಕಾಗುತ್ತದೆ -ರಣಗಟ್ಟಿಮಠ

20-11-2020 09:05 PM

ಬೆಳಗಾವಿ : ಪ್ರತಿವರ್ಷ ರಾಜ್ಯೋತ್ಸವ ದಿನದಂದು ಕರಾಳ ದಿನ ಆಚರಿಸುವ ಮರಾಠಾ ಸಮುದಾಯದವರಿಗೆ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವ ಮೂಲಕ ಸರ್ಕಾರ ಕನ್ನಡಿಗರಿಗೆ ಅನ್ಯಾಯ ಮಾಡುತ್ತಿದೆ. ಕೂಡಲೇ ಸರ್ಕಾರ ನಿರ್ಧಾರದಿಂದ ಹಿಂದಕ್ಕೆ ಸರಿಯಬೇಕು. ಇಲ್ಲವಾದರೆ ಮುಖಂಡರ ಮುಖಕ್ಕೆ ಮಸಿ ಬಳಿಯಲು ರಕ್ಷಣಾ ವೇದಿಕೆ ಮುಂದಾಗಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡ ಮಹಾಂತೇಶ ರಣಗಟ್ಟಿಮಠ ಎಚ್ಚರಿಸಿದರು.
ರಾಜ್ಯ ಸರ್ಕಾರ ಕೂಡಲೇ ಮರಾಠಾ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವ ನಿರ್ಧಾರವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಣದ ಮುಖಂಡರು, ಕಾರ್ಯಕರ್ತರು ಬೆಳಗಾವಿ ಚನ್ನಮ್ಮ ಸರ್ಕಲ್‍ನಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಬೆಳಗಾವಿ ಚನ್ನಮ್ಮ ಸರ್ಕಲ್‍ನಲ್ಲಿ ಶುಕ್ರವಾರ ಸೇರಿದ ಕರ್ನಾಟಕ

Advertise

ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಣದ ಮುಖಂಡರು, ಕಾರ್ಯಕರ್ತರು ರಾಜ್ಯ ಸರ್ಕಾರ ಕೂಡಲೇ ಮರಾಠಾ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವ ನಿರ್ಧಾರವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರು ಆದ ಶ್ರೀ ಗಿರೀಶ್ ಕರ್ಲೆಕ್ಕನವರ್ , ಯುವ ಘಟಕದ ಅಧ್ಯಕ್ಷರು ಆರ್ ಅಭಿಲಾಷ, ನಂದಗಡ ಅಧ್ಯಕ್ಷರು ಆದ ಇಬ್ರಾಹಿಂ, ಚಿಕ್ಕೋಡಿ ಅಧ್ಯಕ್ಷರು ಆದ್ ಕೃಷ್ಣಾ ಕೆಂಚಣ್ಣವರ್, ಮಲ್ಲಿಕಾರ್ಜುನ್ ಕಬ್ಬಾಡಿ,ಜಿಲ್ಲಾ ದಕ್ಷಿಣ ಬಾಗದ ಅಧ್ಯಕ್ಷರು ಆದ್ ಮಲ್ಲಪ್ಪ ಸೊಂಟಕ್ಕಿ, ಇರ್ಫಾನ್ ಅಕ್ತರ್, ಮಹಿಳಾ ಅಧ್ಯಕ್ಷರು ಆದ ಶ್ರೀಮತಿ ಜ್ಯೋತಿ ಅಥಣಿಮಠ, ಜಿಲ್ಲಾ ಗೌರವ ಅಧ್ಯಕ್ಷರು ಆದ ಶ್ರೀಮತಿ ಕಸ್ತೂರಿ ಬಾವಿ, ಶ್ರೀ ಮಲ್ಲಿಕಾ, ರವಿ ಹಿರೇಮಠ, ವಾಜೀದ್ ಹಿರೇಕೊಡಿ, ಪ್ರಭು ಕಾಕತಿಕರ್ ಕರವೇ ಕಾರ್ಯಕರ್ತರು ಇನ್ನಿತರರು ಉಪಸ್ಥಿತರಿದ್ದರು .

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

"ಅಗ್ನಿ ಹೋತ್ರ" ದ ಲಾಭ ಮತ್ತು ಮಹತ್ವ

ಗೋವು ಉಸಿರಾಟ ಪ್ರಕ್ರಿಯೆಯಲ್ಲಿ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರಗೆ ಬಿಡುತ್ತದೆ !!ಮತ್ಯಾವ ಜೀವಸಂಕುಲದಲ್ಲೂ
ಹೀಗಿಲ್ಲಗೋವಿನ...

Read More

01-12-2020 07:55 AM

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಡಿಗಲ್ಲು ಸಮಾರಂಭ

ಗಂಗಾವತಿ : ಸಮೀಪದ ಶ್ರೀಕ್ಷೇತ್ರ ಗಡ್ಡಿ ಗ್ರಾಮದಲ್ಲಿ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪುಣ್ಯಾಶ್ರಮದಲ್ಲಿ ಇಂದು ಶ್ರೀ ಶ್ರೀ ರಾಜರಾಜೇಶ್ವರಿ ದೇವಸ್ಥಾನದ...

Read More

01-12-2020 07:46 AM

ಆನ್ ಲೈನ್ ಪದ್ದತಿಯಿಂದ ಶೈಕ್ಷಣಿಕಾಭಿವೃದ್ಧಿ ಶೂನ್ಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ನ30ರಂದು ಜರುಗಿತು, ಶಾಸಕರಿಗೆ ಅಭಿನಂದನೆ:-ಸಭೆಯ ಪ್ರಾರಂಭದಲ್ಲಿಯೇ, ಕೂಡ್ಲಿಗಿ ತಾಲೂಕನ್ನು...

Read More

01-12-2020 06:30 AM

ಮಾಧ್ಯಮ ಸಾಕ್ಷರತೆ ತರಬೇತಿಗಳು

ಬೆಳಗಾವಿ : ಫ್ಯಾಕ್ಟ್ ಶಾಲಾ ಇಂಡಿಯಾ ಮಿಡಿಯಾಲಿಟ್ರಸಿ ನೆಟವರ್ಕ್, ಡಾಟಾಲಿಡ್ಸ್ ಇವರುಗಳ ಸಹಾಯದಿಂದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ...

Read More

01-12-2020 06:21 AM

ಅನ್ನದಾನ ಸ್ವಾಮಿಗಳು ನಿಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಚಳ್ಳೂರ ಗ್ರಾಮದ ಬೃಹನ ಮಠದ ಅನ್ನದಾನಸ್ವಾಮಿಗಳು ಸೊಮವಾರ ಸಾಯಂಕಾಲ 6.00ಗಂಟೆಗೆ ಶಿವಾಧಿನರಾಗಿದ್ದಾರೆ.ಅವರ...

Read More

01-12-2020 06:18 AM

Read More
×E-Paperಸಾಹಿತ್ಯGeneralVideos