whatsapp facebooktwitter

ಸಂಪುಟ ರಚನೆ ಸಿಎಂ ಪರಮಾಧಿಕಾರಕ್ಕೆ ಬಿಟ್ಟಿದ್ದು:ಬಿ.ಸಿ.ಪಾಟೀಲ್

ಸಂಪುಟ ರಚನೆ ಸಿಎಂ ಪರಮಾಧಿಕಾರಕ್ಕೆ ಬಿಟ್ಟಿದ್ದು:ಬಿ.ಸಿ.ಪಾಟೀಲ್

20-11-2020 09:23 PM

ಕೊಪ್ಪಳ,ನ.20 : ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಪರಮಾಧಿಕಾರ ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು, ಈ ಸಂಬಂಧ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಕೊಪ್ಪಳದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ಶಾಸಕರೆಲ್ಲರಿಗೂ ಸಚಿವರಾಗಬೇಕು ಎನ್ನುವ ಆಸೆ ಸಹಜವೇ. ಇದರಲ್ಲಿ ತಪ್ಪೇನಿಲ್ಲ. ಸಚಿವ ಸಂಪುಟವೋ ವಿಸ್ತರಣೆಯೋ ಎನ್ನುವುದು ವರಿಷ್ಠರಿಗೆ ಬಿಟ್ಟ ವಿಚಾರ. ಸಿಎಂ ಪರಮಾಧಿಕಾರ ಎಂದರು.
ಸರ್ಕಾರ ಮರಾಠ ಅಭಿವೃದ್ಧಿ ನಿಗಮ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಗಳಿಗೆ ಆದೇಶ ಮಾಡಿರುವುದು ಸ್ವಾಗತಾರ್ಹವಾಗಿದ್ದು, ಇದರಿಂದ ಮರಾಠ ಹಾಗೂ ವೀರಶೈವ ಲಿಂಗಾಯತ ಸಮುದಾಯಗಳ ಹಿಂದುಳಿದವರಿಗೆ ಬಡವರಿಗೆ ಅನುಕೂಲವಾಗಲಿದೆ.ಇದು ಮರಾಠಿ ಭಾಷೆ ಪ್ರಾಧಿಕಾರ ಇದಲ್ಲ. ಕರ್ನಾಟಕದಲ್ಲಿರುವ ಮರಾಠಿಗರನ್ನು ಕರ್ನಾಟಕ ಬಿಟ್ಟು ಕಳುಹಿಸಲಾಗುವುದಿಲ್ಲ. ಮರಾಠರ ಅಭಿವೃದ್ಧಿಗಾಗಿ ಸರ್ಕಾರ ನಿಗಮ ಮಾಡಿದ್ದು ಸ್ವಾಗತಾರ್ಹ. ಅದರಂತೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ

Advertise

ಮಾಡಿದ್ದು ಸಹ ಸರಿಯಾಗಿದೆ. ರಾಜ್ಯದಲ್ಲಿ ವೀರಶೈವ ಲಿಂಗಾಯತ ದೊಡ್ಡ ಸಮುದಾಯವಾಗಿದ್ದರೂ ಈ ಸಮುದಾಯದಲ್ಲಿ ಬಡವರು ಹಿಂದುಳಿದವರು ಇದ್ದಾರೆ. ನಿಗಮ ರಚನೆಯಿಂದ ಇವರಿಗೆ ಅನುಕೂಲವಾಗಲಿದೆ. ಇದೇ ರೀತಿ ಮರಾಠ ಅಭಿವೃದ್ಧಿ ನಿಗಮದಿಂದ ಮರಾಠಿಗರಲ್ಲಿರುವ ಬಡವರಿಗೆ ಹಿಂದುಳಿದವರಿಗೂ ಕೂಡ ಅನುಕೂಲವಾಗಲಿದೆ.ಕುಂಬಾರ ಅಭಿವೃದ್ಧಿ ನಿಗಮ, ವಿಶ್ವಕರ್ಮ ಅಭಿವೃದ್ಧಿ ನಿಗಮ, ಬ್ರಾಹ್ಮಣ ನಿಗಮ, ಅಲ್ಪಸಂಖ್ಯಾತರಿಗೂ ನಿಗಮವಿದೆ ಎಂದರು. ಓಲೈಕೆಗಾಗಿ ನಿಗಮ ರಚನೆ ಮಾಡಿರುವುದಲ್ಲ. ಸಮುದಾಯಗಳ ಅಭಿವೃದ್ಧಿಗಾಗಿ ನಿಗಮ ರಚಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
ಮಾಜಿ ಸಂಸದ ಶಿವರಾಜ ತಂಗಡಗಿ ಅವರನ್ನು ತೃಪ್ತಿ ಮಾಡಲು ಚುನಾವಣಾ ಆಯೋಗ ವ್ಯವಸ್ಥೆ ಬದಲಾವಣೆ ಮಾಡುವ ಅವಶ್ಯಕತೆಯಿಲ್ಲ. ಉಪಚುನಾವಣೆ ಸೋಲಿಗೆ ಇವಿಎಂ ಯಂತ್ರ ಎನ್ನುವುದು ಕಾಂಗ್ರೆಸ್ ತನ್ನ ಸೋಲಿಗೆ ನೀಡುವ ಕಾರಣವಾಗಿದೆ. ಕಾಂಗ್ರೆಸ್ ನದ್ದು ಕುಣಿಯಲಾಗದವಳು ನೆಲ ಡೊಂಕು ಎನ್ನುವಂತಹ ಉತ್ತರವಾಗಿದೆ. ಕಾಂಗ್ರೆಸ್ ತನ್ನ ಅಸ್ತಿತ್ವ ಸ್ವಂತಿಕೆ ಎಲ್ಲವನ್ನೂ ಕಳೆದುಕೊಂಡಿದೆ ಎಂದು ಬಿ.ಸಿ.ಪಾಟೀಲ್ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಬೈಕ್ ಕಳ್ಳರ ಬಂಧನ

ಯರಗಟ್ಟಿ : ಬೈಕ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಮುರಗೋಡ ಪೋಲಿಸರು ಬಂಧಿಸಿದ್ದು ಆರು (6) ಬೈಕ್ ವಶಪಡಿಸಿಕೊಂಡಿದ್ದಾರೆ.
ಯರಗಟ್ಟಿ ನಗರ ಮತ್ತು ಹಲವು...

Read More

28-11-2020 08:38 PM

ಪರಿತ್ಯಕ್ತ ಗಂಡು ಮಗು ರಕ್ಷಣೆ

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಪರಿತ್ಯಕ್ತ ಗಂಡು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು...

Read More

28-11-2020 08:37 PM

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಧ್ಯತೆ ನೀಡಿ : ಸುಂದರೇಶ ಬಾಬು

ಗದಗ ೨೮ : ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆಧ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ....

Read More

28-11-2020 08:25 PM

ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಗಂಭೀರ

ಜೈಪುರ : ಕೊರೋನಾ ಸೋಂಕಿನಿಂದ ಬಳಲುತ್ತಿರುವ ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೊರೊನಾದಿಂದ ಪೈಲಟ್...

Read More

28-11-2020 08:09 PM

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ...

Read More

28-11-2020 07:57 PM

Read More
×E-Paperಸಾಹಿತ್ಯGeneralVideos