whatsapp facebooktwitter

ಮಳೆಯಿಂದ ಹಾನಿಗೊಳಗಾದ ರೈತರಿಗೆ ಕೂಡಲೇ ಅಗತ್ಯ ಪರಿಹಾರ ಒದಗಿಸಿ-ಜಿ,ಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ

ಮಳೆಯಿಂದ ಹಾನಿಗೊಳಗಾದ ರೈತರಿಗೆ ಕೂಡಲೇ ಅಗತ್ಯ ಪರಿಹಾರ ಒದಗಿಸಿ-ಜಿ,ಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ

21-11-2020 07:41 PM

ವಿಜಯಪುರ ನ.೨೧ : ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಬೀಜ, ಗೊಬ್ಬರ ಇನ್ನೀತರ ಅಗತ್ಯ ಪರಿಹಾರವನ್ನು ಕೂಡಲೇ ಒದಗಿಸಿ, ರೈತರಿಗೆ ಹನಿ ನೀರಾವರಿಯಂತಹ ಯೋಜನೆಗಳನ್ನು ಜಾರಿಗೊಳಿಸಿ, ಬೆಳೆಗಳ ವಿಮೆ ಯೋಜನೆಯನ್ನು ಜಾರಿಗೊಳಿಸಿ, ತಾಡಪತ್ರಿಗಳ ವಿತರಣೆಯಲ್ಲಿ ಕೇಳಿಬರುತ್ತಿರುವ ದೂರುಗಳನ್ನು ಪರಿಗಣಿಸಿ, ಸರಿಪಡಿಸಿ, ಬಡರೈತರಿಗೆ ಅನ್ಯಾಯವಾಗದಂತೆ ಕ್ರಮವಹಿಸಲು ಜಿಲ್ಲಾ ಪಂಚಾಯತ ಅಧ್ಯಕ್ಷೆ ಶ್ರೀಮತಿ ಸುಜಾತಾ ಕಳ್ಳಿಮನಿ ಅವರು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ತಾಲೂಕ ಪಂಚಾಯತ ಭವನದಲ್ಲಿ ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಶಾಲೆಗಳ ಎಸ್‌ಡಿಎಮ್‌ಸಿ ಸದಸ್ಯರ ಬಗ್ಗೆ ಕೇಳಿಬರುತ್ತಿರುವ ದೂರುಗಳ ಬಗ್ಗೆಯೂ ಅಗತ್ಯ ಕ್ರಮಕೈಗೊಳ್ಳುವಂತೆ ಅವರು ಸೂಚಿಸಿದರು.
ತಾಲೂಕುಗಳಲ್ಲಿ ಮಳೆಯಿಂದ ಹಾನಿಗೊಳಗಾದ ಶಾಲಾ ಕಟ್ಟಡಗಳನ್ನು ದುರಸ್ತಿಗೊಳಿಸುವ

Advertise

ಕಾರ್ಯವನ್ನು ಕೂಡಲೇ ಕೈಗೊಳ್ಳಬೇಕೆಂದು ಅದರಂತೆ ಅಂಗನವಾಡಿ ಕೇಂದ್ರಗಳಲ್ಲಿ ಆಹಾರ ವಿತರಣೆಯಲ್ಲಿನ ಲೋಪದೋಪಗಳನ್ನು ಕೂಡಲೇ ಸರಿಪಡಿಸಬೇಕೆಂದು ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಇನ್ನು ತೋಟಗಾರಿಕೆ ಬೆಳೆಯ ರೈತರಿಗೂ ವಿಶೇಷ ಕಾರ್ಯಕ್ರಮಗಳನ್ನು ರೂಪಿಸುವಂತೆ, ವಿವಿಧ ಕಡೆಗಳಲ್ಲಿ ಕೆಟ್ಟುಹೋಗಿರುವ ನೀರಿನ ಆರ್‌ಒ ಪ್ಲಾಂಟ್‌ಗಳನ್ನು ಕೂಡಲೇ ದುರಸ್ತಿಗೊಳಿಸುವಂತೆ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರೂಪಿಸಲಾಗಿರುವ ಸರ್ಕಾರದ ಮಹತ್ವಾಕಾಂಕ್ಷಿ ಆಯುಷ್ಮಾನ್ ಕಾರ್ಡ್ ಯೋಜನೆಯು ಅರ್ಹ ಬಡವರಿಗೆ ತಲುಪುವಂತೆ ಈ ಕುರಿತು ಗ್ರಾಮ ಪಂಚಾಯತಿ ಮಟ್ಟದಲ್ಲಿಯೂ ಜಾಗೃತಿಯನ್ನುಂಟು ಮಾಡಲು ಅವರು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಶಿಕ್ಷಣ, ಆರೋಗ್ಯ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಬೈಕ್ ಕಳ್ಳರ ಬಂಧನ

ಯರಗಟ್ಟಿ : ಬೈಕ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಮುರಗೋಡ ಪೋಲಿಸರು ಬಂಧಿಸಿದ್ದು ಆರು (6) ಬೈಕ್ ವಶಪಡಿಸಿಕೊಂಡಿದ್ದಾರೆ.
ಯರಗಟ್ಟಿ ನಗರ ಮತ್ತು ಹಲವು...

Read More

28-11-2020 08:38 PM

ಪರಿತ್ಯಕ್ತ ಗಂಡು ಮಗು ರಕ್ಷಣೆ

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಪರಿತ್ಯಕ್ತ ಗಂಡು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು...

Read More

28-11-2020 08:37 PM

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಧ್ಯತೆ ನೀಡಿ : ಸುಂದರೇಶ ಬಾಬು

ಗದಗ ೨೮ : ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆಧ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ....

Read More

28-11-2020 08:25 PM

ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಗಂಭೀರ

ಜೈಪುರ : ಕೊರೋನಾ ಸೋಂಕಿನಿಂದ ಬಳಲುತ್ತಿರುವ ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೊರೊನಾದಿಂದ ಪೈಲಟ್...

Read More

28-11-2020 08:09 PM

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ...

Read More

28-11-2020 07:57 PM

Read More
×E-Paperಸಾಹಿತ್ಯGeneralVideos