whatsapp facebooktwitter

ನರಗುಂದ ಪುರಸಭೆಯ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಸಚಿವ ಸಿ ಸಿ ಪಾಟೀಲ ಚಾಲನೆ

ನರಗುಂದ ಪುರಸಭೆಯ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಸಚಿವ ಸಿ ಸಿ ಪಾಟೀಲ ಚಾಲನೆ

21-11-2020 07:45 PM

ನರಗುಂದ 21: ಅಭಿವೃದ್ಧಿಯೆಡೆಗೆ ಸಾಗುವಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ ಸಿ ಪಾಟೀಲ ಅವರು ಹೇಳಿದರು.
ನರಗುಂದ ಪಟ್ಟಣ ಪುರಸಭೆ ಆವರಣದಲ್ಲಿ ಶನಿವಾರ ಏರ್ಪಡಿಸಲಾದ ನರಗುಂದ ಪುರಸಭೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಹಾಗೂ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಸಚಿವರು ಮಾತನಾಡಿದರು.
ನರಗುಂದ ಪುರಸಭೆಯ ವಿವಿಧ ವಾರ್ಡುಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಸುಮಾರು 550 ಲಕ್ಷ ರೂ.ಗಳಲ್ಲಿ ಕೈಗೊಳ್ಳಲಾಗುತ್ತಿದೆ. ಕಾಮಗಾರಿಗಳು ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕು ಎಂದರು. ಅದೇ ರೀತಿ ಬಹುದಿನಗಳ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಬೇಡಿಕೆಯಾಗಿದ್ದ ಗ್ರಂಥಾಲಯ ಕಟ್ಟಡ ನಿರ್ಮಾಣ ಕಾಮಗಾರಿಯನ್ನು 30 ಲಕ್ಷ ರೂ.ಗಳಲ್ಲಿ

Advertise

ಕೈಗೊಳ್ಳಲಾಗುತ್ತಿದ್ದು ಇದರಿಂದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ಸಹಕಾರಿಯಾಗಲಿದೆ ಎಂದರು.
ಕೋವಿಡ್ ಸೋಂಕು ನಿಯಂತ್ರಣಕ್ಕೆ ಬರುತ್ತಿರುವುದರಿಂದ ಜನಜೀವನ ಯಥಾಸ್ಥಿತಿಗೆ ಮರಳುತ್ತಿದ್ದು ಸರ್ಕಾರಕ್ಕೆ ತೆರಿಗೆ ರೂಪದಲ್ಲಿ ಆದಾಯ ಬರುತ್ತಿದೆ. ಈ ಆದಾಯವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡುವ ಮೂಲಕ ರಾಜ್ಯವನ್ನು ಅಭಿವೃದ್ಧಿಯಡೆಗೆ ಕೊಂಡೊಯ್ಯೋಣವೆAದರು. ಪುರಸಭೆಯ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದ ಸಚಿವರು ಜನರ ಆಶೀರ್ವಾದದಿಂದ ತಾವುಗಳು ಆಯ್ಕೆಯಾಗಿದ್ದೀರಿ. ಸಾರ್ವಜನಿಕರ ಸೇವೆಗೆ ನಿರಂತರ ಕರ್ತವ್ಯ ನಿರ್ವಹಿಸೋಣವೆಂದರು.
ಕಾರ್ಯಕ್ರಮದಲ್ಲಿ ಪುರಸಭೆಯ ಅಧ್ಯಕ್ಷೆ ಭಾವನಾ ಪಾಟೀಲ, ಉಪಾಧ್ಯಕ್ಷ ಪ್ರಶಾಂತ ಜೋಶಿ, ತಹಶೀಲ್ದಾರ ಪ್ರಶಾಂತ , ಪ್ರಮುಖರಾದ ಹಾಲಪ್ಪನವರ, ಎಮ್.ಎಸ್. ಪಾಟೀಲ, ಅಜ್ಜಪ್ಪ ಸೇರಿದಂತೆ ಮತ್ತಿತರರು ಇದ್ದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಬೈಕ್ ಕಳ್ಳರ ಬಂಧನ

ಯರಗಟ್ಟಿ : ಬೈಕ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಮುರಗೋಡ ಪೋಲಿಸರು ಬಂಧಿಸಿದ್ದು ಆರು (6) ಬೈಕ್ ವಶಪಡಿಸಿಕೊಂಡಿದ್ದಾರೆ.
ಯರಗಟ್ಟಿ ನಗರ ಮತ್ತು ಹಲವು...

Read More

28-11-2020 08:38 PM

ಪರಿತ್ಯಕ್ತ ಗಂಡು ಮಗು ರಕ್ಷಣೆ

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಪರಿತ್ಯಕ್ತ ಗಂಡು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು...

Read More

28-11-2020 08:37 PM

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಧ್ಯತೆ ನೀಡಿ : ಸುಂದರೇಶ ಬಾಬು

ಗದಗ ೨೮ : ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆಧ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ....

Read More

28-11-2020 08:25 PM

ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಗಂಭೀರ

ಜೈಪುರ : ಕೊರೋನಾ ಸೋಂಕಿನಿಂದ ಬಳಲುತ್ತಿರುವ ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೊರೊನಾದಿಂದ ಪೈಲಟ್...

Read More

28-11-2020 08:09 PM

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ...

Read More

28-11-2020 07:57 PM

Read More
×E-Paperಸಾಹಿತ್ಯGeneralVideos