whatsapp facebooktwitter

ಮಕ್ಕಳ ರಕ್ಷಣೆ ಎಲ್ಲ ಜವಾಬ್ದಾರಿ: ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

ಮಕ್ಕಳ ರಕ್ಷಣೆ ಎಲ್ಲ ಜವಾಬ್ದಾರಿ: ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

21-11-2020 07:48 PM

ಗದಗ ೨೧ : ಮಕ್ಕಳು ದೇಶದ ಸಂಪತ್ತು ಅವರ ರಕ್ಷಣೆ ಎಲ್ಲರ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶಬಾಬು ಹೇಳಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಗದಗ ಇವರ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಗದಗ ಜಿಲ್ಲಾಡಳಿತ ಭವನದ ಆವರಣದಲ್ಲಿ (ದಿ.೨೦ರಂದು) ಮಕ್ಕಳ ರಕ್ಷಣೆ ಕುರಿತು ಮಾಸಿಕ ಆಂದೋಲನದ ಭಾಗವಾಗಿ ಜಾಗೃತಿ ಜಾಥಾ ವಾಹನಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.
ಇಂದಿನ ಮಕ್ಕಳು ಅನೇಕ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಭಿಕ್ಷಾಟಣೆ, ಬಾಲಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ, ಭಿಕ್ಷಾಟಣೆ , ಹೆಣ್ಣು ಬ್ರೂಣ ಹತ್ಯೆ, ಮುಂತಾದ ಅನಿಷ್ಟ ಪದ್ಧತಿಗೆ ಒಳಗಾಗಿ ಶೋಷಣೆಗೆ ಒಳಗಾಗುತ್ತಿದ್ದಾರೆ. ಇದನ್ನು ತಡೆಗಟ್ಟಲು ಜನರಲ್ಲಿ ಜಾಗೃತಿ ಮೂಡಿಸುವದು ಅವಶ್ಯಕತೆ ಇದೆ. ಅದಕ್ಕಾಗಿ ಜಾಗೃತಿ

Advertise

ಜಾಥಾ ಉತ್ತಮ ಸಾಧನ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ, ಹಿರಿಯ ದಿವಾಣಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್. ಜಿ. ಸಲಗೆರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಎ , ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಮಂಜುನಾಥ ಬಮ್ಮನಕಟ್ಟಿ , ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಸಿ.ಎಸ್.ಬೊಮ್ಮನಹಳ್ಳಿ, ಶ್ರೀಮತಿ. ಅನ್ನಪೂರ್ಣ ಗಾಣಿಗೇರ, ಮಲ್ಲಿಕಾರ್ಜುನ, ಬೆಲ್ಲದ ಸೇವಾ ಭಾರತಿ ಟ್ರಸ್ಟ್ ಅಮೂಲ್ಯ(ಪಿ) ವಿಶೇಷ ದತ್ತು ಕೇಂದ್ರ ಕಾರ್ಯಕ್ರಮದಲ್ಲಿ ಹಾಜರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅವಿನಾಶಲಿಂಗ ಗೋಟಖಿಂಡಿ ಸ್ವಾಗತಿಸಿದರು.
ಜಾಗೃತಿ ರಥ ದಿ:೨೦-೧೧-೨೦೨೦ರಿಂದ ದಿ:೨೧-೧೧-೨೦೨೦ರಂದು ಮುಂಡರಗಿ ತಾಲೂಕಿನಲ್ಲಿ ದಿ:೨೨-೧೧-೨೦೨೦ರಿಂದ ದಿ:೨೩-೧೧-೨೦೨೦ರಂದು ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕಿನ ಗ್ರಾಮ ಪಂಚಾಯತ ವ್ಯಾಪ್ತಿ ಹಳ್ಳಿಗಳಲ್ಲಿ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಬೈಕ್ ಕಳ್ಳರ ಬಂಧನ

ಯರಗಟ್ಟಿ : ಬೈಕ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಮುರಗೋಡ ಪೋಲಿಸರು ಬಂಧಿಸಿದ್ದು ಆರು (6) ಬೈಕ್ ವಶಪಡಿಸಿಕೊಂಡಿದ್ದಾರೆ.
ಯರಗಟ್ಟಿ ನಗರ ಮತ್ತು ಹಲವು...

Read More

28-11-2020 08:38 PM

ಪರಿತ್ಯಕ್ತ ಗಂಡು ಮಗು ರಕ್ಷಣೆ

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಪರಿತ್ಯಕ್ತ ಗಂಡು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು...

Read More

28-11-2020 08:37 PM

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಧ್ಯತೆ ನೀಡಿ : ಸುಂದರೇಶ ಬಾಬು

ಗದಗ ೨೮ : ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆಧ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ....

Read More

28-11-2020 08:25 PM

ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಗಂಭೀರ

ಜೈಪುರ : ಕೊರೋನಾ ಸೋಂಕಿನಿಂದ ಬಳಲುತ್ತಿರುವ ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೊರೊನಾದಿಂದ ಪೈಲಟ್...

Read More

28-11-2020 08:09 PM

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ...

Read More

28-11-2020 07:57 PM

Read More
×E-Paperಸಾಹಿತ್ಯGeneralVideos