whatsapp facebooktwitter

ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ/ಸಾಧನ ಸಲಕರಣೆಗಳಿಗೆ ಅರ್ಜಿ ಆಹ್ವಾನ

ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ/ಸಾಧನ ಸಲಕರಣೆಗಳಿಗೆ ಅರ್ಜಿ ಆಹ್ವಾನ

30-07-2020 08:58 PM

ದಾವಣಗೆರೆ ಜು.30.2020-21 ನೇ ಸಾಲಿಗೆ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ
ಶೇ. 60ಕ್ಕಿಂತ ಹೆಚ್ಚು ಅಂಕ ಪಡೆದ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ & ಸಾಧನ ಸಲಕರಣೆ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರೋತ್ಸಾಹಧನ ಯೋಜನೆ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ರೂ.3000/-, ಪಿ.ಯು.ಸಿ ವಿದ್ಯಾರ್ಥಿಗಳಿಗೆ ರೂ.5000/-, ಪದವಿ, ಡಿ.ಎಡ್ ವಿದ್ಯಾರ್ಥಿಗಳಿಗೆ ರೂ.8000/-, ಬಿ.ಇಡಿ, ಸ್ನಾತಕೋತ್ತರ ಪದವಿ, ಎಂ.ಎ, ಎಂ.ಕಾಂ., ಎಂ.ಎಸ್ಸಿ ಹಾಗೂ ಪದವಿ ನಂತರ 2 ವರ್ಷಗಳ ಕೋರ್ಸ್ ಮಾಡಿದ ವಿದ್ಯಾರ್ಥಿಗಳಿಗೆ ರೂ.10,000/- ಹಾಗೂ ಕೃಷಿ ಪದವಿ, ಇಂಜಿನಿಯರಿಂಗ್ ತಾಂತ್ರಿಕ ಪಶುವೈದ್ಯಕೀಯ, ಎಂ.ಇಡಿ ಮಾಡಿದ ವಿದ್ಯಾರ್ಥಿಗಳಿಗೆ ರೂ.12,000/- ಪ್ರೋತ್ಸಾಹಧನವನ್ನು ನೀಡಲಾಗುವುದು.

ಪ್ರೋತ್ಸಾಹಧನ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ವಿಕಲಚೇತನರು ಕಡ್ಡಾಯವಾಗಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಆಧಾರ್ ಕಾರ್ಡ್ ಲಿಂಕ್ ಮಾಡಿಸಿರುವ ಉಳಿತಾಯ ಖಾತೆ ಪುಸ್ತಕದ ಪ್ರತಿ ಹಾಗೂ ಅಂಗವಿಕಲರ ಗುರುತಿನ ಕಾರ್ಡ್ (ಯು.ಡಿ.ಐ.ಸಿ. ಕಾರ್ಡ್), ಆಧಾರ್ ಕಾರ್ಡ್, ಅಂಕಪಟ್ಟಿ ಹಾಗೂ

ಇತ್ತೀಚಿನ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು.
ಸಾಧನ ಸಲಕರಣೆ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಕಡ್ಡಾಯವಾಗಿ ಅಂಗವಿಕಲರ ಗುರುತಿನ ಕಾರ್ಡ್ (ಯು.ಡಿ.ಐ.ಸಿ. ಕಾರ್ಡ್), ಆಧಾರ ಕಾರ್ಡ್, ಬಿ.ಪಿ.ಎಲ್. ಜಾತಿ & ಆದಾಯ ಪ್ರಮಾಣಪತ್ರ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ನಮೂನೆಗಳನ್ನು hಣಣಠಿ://ಜತಿಜsಛಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದು ಹಾಗೂ ಗ್ರಾಮ ಪಂಚಾಯ್ತಿ & ತಾಲ್ಲೂಕು ಪಂಚಾಯ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಆರ್‍ಡಬ್ಲ್ಯೂ ಮತ್ತು ಎಂಆರ್‍ಡಬ್ಲ್ಯು ರನ್ನು ಸಂಪರ್ಕಿಸಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಸಹಾಯವಾಣಿ & ಮಾಹಿತಿ ಸಲಹಾ ಕೇಂದ್ರ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಚೆÉೀರಿ, ಶಂಕರಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ, ಎಂ.ಸಿ.ಸಿ. ‘ಬಿ’ ಬ್ಲಾಕ್, ದಾವಣಗೆರೆ. ದೂ.ಸಂ: 08192-263939 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಜಿ.ಎಸ್ ಶಶಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ನವೀಕರಿಸಬಹುದಾದ ಇಂಧನಗಳ ಕುರಿತು ಕಾರ್ಯಾಗಾರ

ಯರಗಟ್ಟಿ : ಗುರುವಾರ ಕರ್ನಾಟಕ ಪಬ್ಲಿಕ್ ಸ್ಕೂಲ್ ಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು...

Read More

14-08-2020 09:47 PM

ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ಪತ್ರ ಚಳುವಳಿ

ಕಾರವಾರ - ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿಂದು ಮೀನುಗಾರರು ಪತ್ರ ಚಳುವಳಿ...

Read More

14-08-2020 09:44 PM

೨೦ ಕ್ಕೂ ಹೆಚ್ಚು ಸಂಶಯಾಸ್ಪದ ವ್ಯಕ್ತಿಗಳ ವಶಕ್ಕೆ ಪಡೆದು ಖಡಕ್ ಎಚ್ಚರಿಕೆ

ಕಾರವಾರ - ಬೆಂಗಳೂರಿನ ಡಿಜಿ ಹಳ್ಳಿ ಮತ್ತು,ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ಉದ್ರಿಕ್ತ ಪುಂಡರು ದಾಳಿ ಮಾಡಿ ದಾಂಧಲೆ ಎಬ್ಬಿಸಿ ಉಂಟಾದ ಗಲಭೆಯಲ್ಲಿ ಮೂರು...

Read More

14-08-2020 09:43 PM

ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಡಾ. ಹರೀಶಕುಮಾರ. ಕೆ.

ಕಾರವಾರ : ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶಮೂರ್ತಿ ಪ್ರತಿಷ್ಠಾಪನೆಗೆ...

Read More

14-08-2020 09:41 PM

ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 ಜನರಿಗೆ ಸೊಂಕು

ಬೆಂಗಳೂರು :ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 , ಶಿವಮೊಗ್ಗ 413, ದಾವಣಗೆರೆ 351,, ಉಡುಪಿ 322, ದಕ್ಷಿಣ ಕನ್ನಡ 307,ಮೈಸೂರು 291,...

Read More

14-08-2020 09:37 PM

Read More
×E-Paperಸಾಹಿತ್ಯGeneralVideos