whatsapp facebooktwitter

ವಿವಿಧ ಕಾರ್ಖಾನೆ ಮಾಲಿಕರು-ಕಾರ್ಮಿಕರು ಸೌಹಾರ್ಧತೆಯಿಂದ ಅಭಿವೃದ್ಧಿಗೆ ನೆರವಾಗಿ:ಸಚಿವ ಶಿವರಾಮ ಹೆಬ್ಬಾರ

ವಿವಿಧ ಕಾರ್ಖಾನೆ ಮಾಲಿಕರು-ಕಾರ್ಮಿಕರು ಸೌಹಾರ್ಧತೆಯಿಂದ ಅಭಿವೃದ್ಧಿಗೆ ನೆರವಾಗಿ:ಸಚಿವ ಶಿವರಾಮ ಹೆಬ್ಬಾರ

31-07-2020 05:06 PM

ವಿಜಯಪುರ ಜುಲೈ. ೩೧: ಕೋವಿಡ್ ಹಿನ್ನಲೆಯಲ್ಲಿ ವಿವಿಧ ಕಾರ್ಖಾನೆಗಳ ಮಾಲಿಕರು ಮತ್ತು ಕಾರ್ಮಿಕರು ಪರಸ್ಪರ ಸೌಹಾರ್ಧಯುತವಾಗಿ ಇರುವುದರ ಜೊತೆಗೆ ಅಭಿವೃದ್ಧಿಯಲ್ಲಿ ಸರ್ಕಾರಕ್ಕೆ ನೆರವಾಗುವಂತೆಯು ರಾಜ್ಯ ಕಾರ್ಮಿಕ ಮತ್ತು ಸಕ್ಕರೆ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿAದು ಕಾರ್ಮಿಕ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸೇರಿದಂತೆ ಇತರ ಅವಶ್ಯಕ ಇಲಾಖೆಗಳು ಮತ್ತು ಕಾರ್ಮಿಕ ಸಂಘಟಣೆಗಳೊAದಿಗೆ ಸಭೆ ನಡೆಸಿದ ಅವರು ಕೋವಿಡ್ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರು ಕಷ್ಟವನ್ನು ಅನುಭವಿಸಿದ್ದು, ಕಾರ್ಮಿಕರ ಹಿತ ಕಾಪಾಡಲು ಶಕ್ತಿಮೀರಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ಮುಂದಿನ ದಿನಗಳಲ್ಲಿ ವಿವಿಧ ಕಾರ್ಖಾನೆ, ಸಕ್ಕರೆ ಕಾರ್ಖಾನೆ ಮಾಲಿಕರು ಮತ್ತು ಕಾರ್ಮಿಕರು ಸೌಹಾರ್ಧಯುತವಾಗಿ ತಮ್ಮ ಸಮಸ್ಯೆಗಳನ್ನು ನಿವಾರಿಸಿಕೊಂಡು ಅಭಿವೃದ್ಧಿಯಲ್ಲಿ ನೆರವಾಗುವಂತೆ ಸಭೆಯಲ್ಲಿ ಕೋರಿದರು.
ರಾಜ್ಯ ಸರ್ಕಾರವು ವಿವಿಧ ಕಾರ್ಖಾನೆಗಳ ಮಾಲಿಕರು, ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು ಹಾಗೂ ರೈತರಿಗೆ ನೆರವಾಗಲು ಹಲವು ನೆರವು ಕ್ರಮಗಳನ್ನು ಕೈಗೊಂಡಿದ್ದು, ಕಾರ್ಖಾನೆಗಳು ಮತ್ತು ಕಾರ್ಮಿಕರ ರಕ್ಷಣೆಗೆ ಸಕಾಲದಲ್ಲಿ ಸ್ಪಂದಿಸಿದೆ. ಮುಂದೆಯೂ ಕೂಡಾ ಕಾರ್ಖಾನೆಗಳು ಬದುಕಬೇಕು ಮತ್ತು ಕಾರ್ಮಿಕರಿಗೆ ಉದ್ಯೋಗದ ರಕ್ಷಣೆ ದೊರಕಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಕೋವಿಡ್ ಹಿನ್ನಲೆಯಲ್ಲಿ ಸರ್ಕಾರದ ಯಾವುದೇ ಕೆಲಸಗಳು ನಿಲ್ಲಬಾರದು. ಕಾರ್ಮಿಕ ಇಲಾಖೆ ವಿವಿಧ ಕಾರ್ಖಾನೆಗಳು ಮತ್ತು ಕಾರ್ಮಿಕರ ಮಧ್ಯ ಸಂಪರ್ಕ ಸೇತುವೆಯಾಗಿ ಕ್ರೀಯಾಶೀಲರಾಗಿ ಕಾರ್ಯನಿರ್ವಹಿಸಬೇಕು. ಕಾರ್ಮಿಕರಿಗೆ ಹೆಚ್ಚಿನ ಉದ್ಯೋಗ ಸೃಷ್ಠಿಸುವ ಉದ್ದೇಶದಿಂದ ಕಾರ್ಮಿಕರ ಕಾನೂನನ್ನು ಜಾರಿಗೊಳಿಸಿದ್ದು, ಕೋವಿಡ್‌ದಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಸರ್ಕಾರ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ ಎಂದು ಹೇಳಿದರು.
ಈಗಿರುವ ಕಾರ್ಖಾನೆಗಳನ್ನು ಉಳಿಸುವುದು, ಕಾರ್ಮಿಕರ ಜೀವನ ಮತ್ತು ಉದ್ಯೋಗ ರಕ್ಷಣೆಯ ಸವಾಲು ಇದ್ದು, ಕೆರಳ, ತಮಿಳುನಾಡು ರಾಜ್ಯಗಳ ಮಾದರಿಯಲ್ಲಿ ಅಸಂಘಟಿತ ಕಾರ್ಮಿಕರಿಗಾಗಿ ನೂತನ ಮಂಡಳಿ ರಚನೆಯ ಅಂತಿಮ ಸಿದ್ದತೆ ನಡೆದಿದ್ದು ವಿಧಾನಸಭೆ ಅಧಿವೇಶನದಲ್ಲಿ ನೂತನ ಬಿಲ್ ಮಂಡಣೆಗೆ ಸಿದ್ದತೆ ಕೈಗೊಳ್ಳಲಾಗುತ್ತಿದೆ. ಅದರಂತೆ ಸಕ್ಕರೆ ಕಾರ್ಖಾನೆಗಳ ಮೊಲ್ಯಾಸಿಸ್, ಎಥೆನಾಲ್ ಹಾಗೂ ಅಬಕಾರಿ ಸುಂಕಗಳಿಗೆ ಸಂಬAಧಪಟ್ಟ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು, ಆಯಾ ಇಲಾಖೆಗಳ ಸಚಿವರೊಂದಿಗೆ ಚರ್ಚಿಸಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಲಾಕ್‌ಡೌನ್ ಜಾರಿಯಾದ ಹಿನ್ನಲೆಯಲ್ಲಿ ಕಾರ್ಮಿಕರ ರಕ್ಷಣೆಗೆ ಪ್ರತಿ ಜಿಲ್ಲೆಗೆ ೧೫ ಲಕ್ಷ ರೂಗಳನ್ನು ನೀಡಿದೆ. ಕಾರ್ಮಿಕ ಇಲಾಖೆಯಿಂದ ನೀಡುವ ಕಾರ್ಮಿಕ ಕಾರ್ಡ್ ಅನ್ನು ಮೂರು ವರ್ಷಕ್ಕೊಮ್ಮೆ ನವಿಕರಣ ಗೊಳಿಸುವುದರ ಜೊತೆಗೆ ಅರ್ಹರಿಗೆ ಈ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಅವರು ಲಾಕ್‌ಡೌನ್ ಸಂಕಷ್ಠಕ್ಕಿಡಾದ ಕ್ಷೌರಿಕರು ಮತ್ತು ಅಗಸರು ಬರುವ ಅಗಸ್ಟ ೧೫ರ ವರೆಗೆ ಸರ್ಕಾರದ ಪರಿಹಾರ ಧನ ಸೌಲಭ್ಯ ಪಡಿತುವ ಅವಧಿ ವಿಸ್ತರಿಸಲಾಗಿದೆ. ಅದರಂತೆ ರಾಜ್ಯದಲ್ಲಿ ೮೪ ಲಕ್ಷ ವಲಸೆ ಕಾರ್ಮಿಕರಿಗೆ ಊಟದ ವ್ಯವಸ್ಥೆ ಮಾಡುವುದರ ಮೂಲಕ ಸರ್ಕಾರ ಜನಪರ ಕಾಳಜಿ ಪ್ರದರ್ಶಿಸಿದೆ. ೬ ಲಕ್ಷ ಕಾರ್ಮಿಕರಿಗೆ ಫುಡ್‌ಕಿಟ್ ನೀಡಲಾಗಿದ್ದು, ಕಷ್ಟದ ಸಮಯದಲ್ಲಿ ನೆರವು ಹಸ್ತ ನೀಡಲಾಗಿದೆ.

ಅಧಿಕಾರಿಗಳು ಕೂಡಾ ಸೂಕ್ತ ಸಮಯಕ್ಕೆ ಕಷ್ಟದಲ್ಲಿರುವವರಿಗೆ ಸ್ಪಂದಿಸಿ ಸೂಕ್ತ ಸೌಲಭ್ಯ ಕಲ್ಪಿಸುವಂತೆ ಅವರು ಸೂಚಿಸಿದರು.
ಸಭೆಯಲ್ಲಿ ಜಿಲ್ಲೆಯಲ್ಲಿ ಮೂರು ಕಾರ್ಖಾನೆಗಳು ಮಾತ್ರ ರೈತರ ಬಾಕಿ ಬಿಲ್‌ಗಳನ್ನು ಉಳಿಸಿಕೊಂಡಿದ್ದು, ತಕ್ಷಣ ವಿತರಣೆಗೆ ಸೂಚಿಸಲಾಗಿದೆ, ಇತರೆ ಕಾರ್ಖಾನೆಗಳು ಶೇ.೧೦೦ ರಷ್ಟು ರೈತರ ಬಿಲ್ ಪಾವತಿಸಿರುವದರ ಬಗ್ಗೆ ಸಂತಸ ವ್ಯಕ್ತಪಡಿಸಿ ವಿಜಯಪುರ ಜಿಲ್ಲೆಯಲ್ಲಿ ೪೩೧೧ ಕ್ಷೌರಿಕರು ಮತ್ತು ಅಗಸರಿಗೆ ತಲಾ ೫ ಸಾವಿರ ರೂಗಳ ಪರಿಹಾರಧನ ಶೇ೯೯ ರಷ್ಟು ವಿತರಣೆಗೆ ಜಿಲ್ಲಾಡಳಿತ ಕೈಗೊಂಡ ಕ್ರಮದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಸಭೆಯಲ್ಲಿ ಶಾಸಕ ಶ್ರೀ ಯಶವಂತರಾಯಗೌಡ ಪಾಟೀಲ ಅವರು ಸಕ್ಕರೆ ಉದ್ಯಮ ಸಂಕಷ್ಟದಲ್ಲಿದ್ದು, ಸರ್ಕಾರ ಕೈಗಾರಿಕೆ ಮತ್ತು ಕಾರ್ಮಿಕರ ರಕ್ಷಣೆಗೆ ಕ್ರಮಕೈಗೊಳ್ಳಬೇಕು. ಕಾರ್ಮಿಕ ಇಲಾಖೆ ಸಿಬ್ಬಂಧಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಬೇಕು. ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗಾಗಿ ಶಾಶ್ವತ ಪರಿಹಾರೋಪಾಯಗಳ ನಿರ್ಣಯವನ್ನು ಕೈಗೊಳ್ಳಲು ಸಚಿವರಲ್ಲಿ ಮನವಿ ಮಾಡಿದರು. ಶಾಸಕ ಸೋಮನಗೌಡ ಪಾಟೀಲ (ಸಾಸನೂರ), ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಗೋವಿಂದ ರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್, ಉಪ ಕಾರ್ಮಿಕ ಆಯುಕ್ತ ಬೆಳಗಾವಿ ಶ್ರೀ ವೆಂಕಟೇಶ ಸಿಂದಿಹಟ್ಟಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಸಿದ್ದರಾಮ ಮಾರಿಹಾಳ ಮತ್ತು ಕಾರ್ಮಿಕ ಸಂಘಟಣೆಗಳ ಮುಖಂಡರು ಉಪಸ್ಥಿತರಿದ್ದರು.
ನಗರದ ಕಾರ್ಮಿಕ ರಾಜ್ಯ ವಿಮಾ ಚಿಕಿತ್ಸಾಲಯ (ಇ.ಎಸ್.ಐ) ಗೆ ಸಚಿವರ ಭೇಟಿ: ಸಚಿವ ಶ್ರೀ ಶಿವರಾಮ ಹೆಬ್ಬಾರ ಅವರು ಇಂದು ಬೆಳಿಗ್ಗೆ ನಗರದ ಇ.ಎಸ್.ಐ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸಾ ವ್ಯವಸ್ಥೆ ಮತ್ತು ಔಷಧಿಗಳ ಬಗ್ಗೆ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಉತ್ತರ ಕರ್ನಾಟಕ ಹಾಗೂ ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ವೈದ್ಯರ ಕೊರತೆ ನೀಗಿಸಲು ೧೬೯ ಎಂ.ಬಿ.ಬಿ.ಎಸ್ ವೈದ್ಯರನ್ನು ಲೋಕಸೇವಾ ಆಯೋಗದ ಮೂಲಕ ನೇಮಿಸಿ ಶೇ ೧೦೦ ರಷ್ಟು ನೇಮಕಾತಿ ಮಾಡಲಾಗಿದೆ. ಬಡ ಜನರ ಅನುಕೂಲಕ್ಕಾಗಿ ೪೦೦ ಕೋಟಿ ರೂಗಳ ಔಷಧಿಯನ್ನು ಕೂಡಾ ಇ.ಎಸ್.ಐ ಆಸ್ಪತ್ರೆಗಳಿಗೆ ಒದಗಿಸಲಾಗಿದೆ. ಅದರಂತೆ ನರ್ಸ್ ಮತ್ತು ಡಿ.ದರ್ಜೆ ನೌಕರರ ೨೯೦ ಹುದ್ದೆಗಳ ನೇಮಕಾತಿಗೆ ಟೆಂಡರ್ ಸಹ ಕರೆಯಲಾಗಿದೆ ಎಂದು ತಿಳಿಸಿದರು.
ನಗರದ ಇ.ಎಸ್.ಐ ಆಸ್ಪತ್ರೆ ಪರಿಣಾಮಕಾರಿ ಕಾರ್ಯ ನಿರ್ವಹಣೆಗೆ ಹಿರಿಯ ಅಧಿಕಾರಿಗಳು ಸೂಕ್ತ ಗಮನ ನೀಡಲು ಸೂಚಿಸಿದ್ದು, ವೈದ್ಯರು ಮತ್ತು ಸಂಬAಧಪಟ್ಟ ಸಿಬ್ಬಂಧಿಗಳು ಇಚ್ಛಾಶಕ್ತಿಯಿಂದ ಕಾರ್ಯ ನಿರ್ವಹಿಸಬೇಕು. ಬಡವರಿಗೆ ಚಿಕಿತ್ಸಾ ಸೌಲಭ್ಯ ಸಮರ್ಪಕವಾಗಿ ದೊರಕಿಸುವ ಕುರಿತು ಸೂಕ್ತ ತಿಳುವಳಿಕೆ ಮೂಡಿಸುವ ಜೊತೆಗೆ ಆಸ್ಪತ್ರೆಯ ಮಾಹಿತಿ ಒಳಗೊಂಡ ಫಲಕವನ್ನು ಸಾರ್ವಜನಿಕರ ಹಾಗೂ ಬಡ ರೋಗಿಗಳ ಗಮನಕ್ಕಾಗಿ ಆಸ್ಪತ್ರೆ ಹೊರಗೆ ಹಾಗೂ ಮುಖ್ಯ ರಸ್ತೆ ಪಕ್ಕದಲ್ಲಿ ಅಳವಡಿಸುವಂತೆ ಸೂಚಿಸಿದರು.
ಆಸ್ಪತ್ರೆಗೆ ಸಂಬAಧಪಟ್ಟAತೆ ವೈದ್ಯರು ಪ್ರಾಮಾಣಿಕ ಸೇವೆ ಸಲ್ಲಿಸಬೇಖು. ಬಡವರಿಗೆ ಸರ್ಕಾರದ ವೆಚ್ಚದಿಂದಲೆ ಚಿಕಿತ್ಸಾ ಸೌಲಭ್ಯ ದೊರೆಯುವುದರಿಂದ ಹಾಗೂ ೨ ವಿವಿಧ ಆಸ್ಪತ್ರೆಗಳೊಂದಿಗೆ ಸಹಯೋಗ ಇರುವುದರಿಂದ ಬಡವರಿಗೆ ಉಪಯುಕ್ತ ಆಗುವ ರೀತಿಯಲ್ಲಿ ಕಾರ್ಯ ನಿರ್ವಹಿಸುವಂತೆ ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಸೋಮನಗೌಡ ಪಾಟೀಲ(ಸಾಸನೂರ), ಮುಖಂಡರಾದ ವಿಜುಗೌಡ ಪಾಟೀಲ, ಆಸ್ಪತ್ರೆಯ ಆಡಳಿತ ವಿಮಾ ವೈದ್ಯಾಧಿಕಾರಿ ಡಾ. ಜ್ಯೋತಿ ಶಿರಸಗಿ, ವಿಮಾ ವೈದ್ಯಾಧಿಕಾರಿ ಡಾ. ಪಾಂಡುರAಗ ಚಹ್ವಾಣ ಹಾಗೂ ಇತರರು ಉಪಸ್ಥಿತರಿದ್ದರು.


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos