whatsapp facebooktwitter

ವಾರ್ತಾ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಕಂಬಿ ಅವರಿಗೆ ಬೀಳ್ಕೊಡುಗೆ

ವಾರ್ತಾ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಕಂಬಿ ಅವರಿಗೆ ಬೀಳ್ಕೊಡುಗೆ

31-07-2020 05:36 PM

ಬೆಳಗಾವಿ, ಜು.31: ಸೇವಾನಿವೃತ್ತಿ ಹೊಂದಿದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕರಾದ ಬಸವರಾಜ ಕಂಬಿ ಅವರನ್ನು ಶುಕ್ರವಾರ (ಜು.31) ಇಲಾಖೆಯ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸನ್ಮಾನಿಸಿ, ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ ಕಂಬಿ ಅವರು, ಇಲಾಖೆಯಲ್ಲಿನ ಸುದೀರ್ಘ ಸೇವೆಯು ಸಂತೃಪ್ತಿ ತಂದಿದೆ ಎಂದು ಹೇಳಿದರು.
ಮಾಧ್ಯಮ ಸ್ನೇಹಿತರು ಮತ್ತು ಸಹೋದ್ಯೋಗಿಗಳ ಜತೆಗಿನ ಒಡನಾಟ ಹಾಗೂ ಹಿರಿಯ ಅಧಿಕಾರಿಗಳ ಪ್ರೋತ್ಸಾಹವನ್ನು ಮೆಲುಕು ಹಾಕಿದ ಅವರು, ಸೇವಾವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಹೃದಯಪೂರ್ವಕ

ಕೃತಜ್ಞತೆಯನ್ನು ಸಲ್ಲಿಸಿದರು.
31 ವರ್ಷಗಳ ಸುದೀರ್ಘ ಸೇವಾವಧಿಯಲ್ಲಿ ಹದಿನೇಳು ವರ್ಷಗಳ ಕಾಲ ಬೆಳಗಾವಿಯಲ್ಲಿ ಸೇವೆ ಸಲ್ಲಿಸಿರುವ ಬಸವರಾಜ ಕಂಬಿ ಅವರು, ಗುಲ್ಬರ್ಗ ವಿಭಾಗದ ಹೆಚ್ಚುವರಿ ಉಪ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು.
ಕೇಂದ್ರ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಪರವಾಗಿ ಕಂಬಿ ದಂಪತಿಯನ್ನು ಸನ್ಮಾನಿಸಲಾಯಿತು.
ಇಲಾಖೆಯ ಜಂಟಿ ನಿರ್ದೇಶಕರಾದ ಡಿ.ಪಿ.ಮುರುಳಿಧರ, ಪ್ರಕಾಶ್ ಅಬ್ಬೂರ, ನಿವೃತ್ತ ಜಂಟಿ ನಿರ್ದೇಶಕರಾದ ದಿನೇಶ್ ಎಚ್.ಬಿ. ಹಾಗೂ ಭೃಂಗೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ನಿಮ್ಮ ಅನಿಸಿಕೆ ತಿಳಿಸಿ

Read More News

ನವೀಕರಿಸಬಹುದಾದ ಇಂಧನಗಳ ಕುರಿತು ಕಾರ್ಯಾಗಾರ

ಯರಗಟ್ಟಿ : ಗುರುವಾರ ಕರ್ನಾಟಕ ಪಬ್ಲಿಕ್ ಸ್ಕೂಲ್ ಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು...

Read More

14-08-2020 09:47 PM

ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ಪತ್ರ ಚಳುವಳಿ

ಕಾರವಾರ - ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿಂದು ಮೀನುಗಾರರು ಪತ್ರ ಚಳುವಳಿ...

Read More

14-08-2020 09:44 PM

೨೦ ಕ್ಕೂ ಹೆಚ್ಚು ಸಂಶಯಾಸ್ಪದ ವ್ಯಕ್ತಿಗಳ ವಶಕ್ಕೆ ಪಡೆದು ಖಡಕ್ ಎಚ್ಚರಿಕೆ

ಕಾರವಾರ - ಬೆಂಗಳೂರಿನ ಡಿಜಿ ಹಳ್ಳಿ ಮತ್ತು,ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ಉದ್ರಿಕ್ತ ಪುಂಡರು ದಾಳಿ ಮಾಡಿ ದಾಂಧಲೆ ಎಬ್ಬಿಸಿ ಉಂಟಾದ ಗಲಭೆಯಲ್ಲಿ ಮೂರು...

Read More

14-08-2020 09:43 PM

ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಡಾ. ಹರೀಶಕುಮಾರ. ಕೆ.

ಕಾರವಾರ : ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶಮೂರ್ತಿ ಪ್ರತಿಷ್ಠಾಪನೆಗೆ...

Read More

14-08-2020 09:41 PM

ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 ಜನರಿಗೆ ಸೊಂಕು

ಬೆಂಗಳೂರು :ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 , ಶಿವಮೊಗ್ಗ 413, ದಾವಣಗೆರೆ 351,, ಉಡುಪಿ 322, ದಕ್ಷಿಣ ಕನ್ನಡ 307,ಮೈಸೂರು 291,...

Read More

14-08-2020 09:37 PM

Read More
×E-Paperಸಾಹಿತ್ಯGeneralVideos