whatsapp facebooktwitter

ಕೋವಿಡ್-೧೯ : ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಸಾರ್ವಜನಿಕ ದರ್ಶನ ನಿಷೇಧ

ಕೋವಿಡ್-೧೯ : ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಸಾರ್ವಜನಿಕ ದರ್ಶನ ನಿಷೇಧ

31-07-2020 05:37 PM

ಕೊಪ್ಪಳ, ಜು.೩೧: ಕೋವಿಡ್-೧೯ ಹಿನ್ನೆಲೆ ಕೊಪ್ಪಳ ಜಿಲ್ಲೆಯ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಸಾರ್ವಜನಿಕ ದರ್ಶನವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಅವರು ಆದೇಶ ಹೊರಡಿಸಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಕೋವಿಡ್-೧೯ ಹರಡದಂತೆ ಸಾರ್ವಜನಿಕರ ಮತ್ತು ಭಕ್ತಾಧಿಗಳ ಆರೋಗ್ಯ ಕಾಪಾಡುವುದಕ್ಕೆ ಮುಂಜಾಗೃತಾ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ರ ಹಾಗೂ ದಂಡ ಪ್ರಕ್ರಿಯಾ ಸಂಹಿತೆ ೧೯೭೩ ಕಲಂ ೧೪೪ ರಡಿಯ ಜಿಲ್ಲೆಯ ಸುಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ತಾಲ್ಲೂಕಿನ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಸಾರ್ವಜನಿಕ ದರ್ಶನವನ್ನು ಆಗಸ್ಟ್. ೩೧ ರವರೆಗೆ

ನಿಷೇಧಿಸಿ ಆದೇಶ ಹೋರಡಿಸಲಾಗಿದೆ.
ಈ ಆದೇಶದನ್ವಯ ದೇವಸ್ಥಾನದ ಆಡಳಿತ ಮಂಡಳಿಯವರು ದೇವಸ್ಥಾನದಲ್ಲಿ ನಡೆಯುವ ದಿನನಿತ್ಯದ ಧಾರ್ಮಿಕ ವಿಧಿ ವಿಧಾನಗಳನ್ನು ಹಾಗೂ ಎಲ್ಲಾ ಮುಂಜಾಗೃತಾ ಕ್ರಮವನ್ನು ವಹಿಸಿ ನಡೆಸುವ ಷರತ್ತಿಗೊಳಪಟ್ಟು ವಿನಾಯಿತಿ ನೀಡಿದೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯನ್ವಯ ಕ್ರಮ ಜರುಗಿಸಲಾಗುವುದು. ಈ ಆದೇಶವನ್ನು ಜಾರಿಗೆಗೊಳಿಸಲು ದೇವಸ್ಥಾನ ಆಡಳಿತ ಮಂಡಳಿ, ಜಿಲ್ಲಾ ಪೊಲೀಸ್ ಅಧೀಕ್ಷಕರು, ಕೊಪ್ಪಳ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು ಹಾಗೂ ಸಂಬAಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos