whatsapp facebooktwitter

ಕೋವಿಡ್-19; ಶುಕ್ರವಾರ 15 ಹೊಸ ಪ್ರಕರಣ ದೃಢ

ಕೋವಿಡ್-19; ಶುಕ್ರವಾರ 15 ಹೊಸ ಪ್ರಕರಣ ದೃಢ

31-07-2020 07:21 PM

ಮಡಿಕೇರಿ ಜು.31-ಜಿಲ್ಲೆಯಲ್ಲಿ ಸಂಜೆ 4 ಗಂಟೆಗೆ 15 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ವಿರಾಜಪೇಟೆಯ ಮೊಗರಗಲ್ಲಿಯ ಈ ಹಿಂದೆ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 53 ವರ್ಷ ಪುರುಷ, 49 ವರ್ಷ ಮಹಿಳೆ, 10 ವರ್ಷದ ಬಾಲಕ, 27 ವರ್ಷದ ಪುರುಷ, 55 ವರ್ಷದ ಪುರುಷ, 58 ವರ್ಷದ ಪುರುಷ, 21 ವರ್ಷದ ಪುರುಷ ಮತ್ತು 48 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ.

ವಿರಾಜಪೇಟೆಯ ವಡ್ಡರಮಾಡುವಿನ ಈ ಹಿಂದೆ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 40 ವರ್ಷದ ಪುರುಷ ಮತ್ತು 48 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ.

ಹಾಸನ ಅರಕಲಗೋಡು ಹುಲಿಕಲ್‍ನ ಮೂಲದ ಕೆಎಸ್‍ಆರ್‍ಟಿಸಿ ಡಿಪೋದ 29 ವರ್ಷದ ಪುರುಷನಿಗೆ ಸೋಂಕು ದೃಢಪಟ್ಟಿದೆ. ಹಾಸನದ ಹೊಳೆನರಸೀಪುರ ಕಡುವಿನ ಕೋಟೆಯ

ಕೆಎಸ್‍ಆರ್‍ಡಿಸಿ ಡಿಪೋವಿನ 38 ವರ್ಷದ ಪುರುಷನಿಗೆ ಸೋಂಕು ದೃಢಪಟ್ಟಿದೆ. ವಿರಾಜಪೇಟೆಯ ಬಿರುನಾಣಿ ಗ್ರಾಮದ 54 ವರ್ಷದ ಪುರುಷನಿಗೆ ಸೋಂಕು ದೃಢಪಟ್ಟಿದೆ.

ರ್ಯಾಪಿಡ್ ಆಂಟಿಜನ್ ಪರೀಕ್ಷೆ ಮೂಲಕ 2 ಪ್ರಕರಣಗಳು ದೃಢಪಟ್ಟಿದ್ದು, ವಿರಾಜಪೇಟೆ ಸಿದ್ದಾಪುರ ಎಂಜಿ. ರಸ್ತೆಯ 52 ವರ್ಷದ ಪುರುಷ ಮತ್ತು 45 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ ವಿರಾಜಪೇಟೆಯ ಬಿರುನಾಣಿ ಗ್ರಾಮದಲ್ಲಿ ಹೊಸದಾಗಿ 1 ಕಂಟೈನ್‍ಮೆಂಟ್ ವಲಯವನ್ನು ತೆರೆಯಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 449 ಆಗಿದ್ದು, 301 ಮಂದಿ ಗುಣಮುಖರಾಗಿದ್ದಾರೆ. 139 ಸಕ್ರಿಯ ಪ್ರಕರಣಗಳಿದ್ದು, 09 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 111 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos