whatsapp facebooktwitter

ಆಗಸ್ಟ್, 1 ರಿಂದ ರಾಸುಗಳ ತಳಿ ಉನ್ನತೀಕರಣ ಯೋಜನೆ ಪ್ರಾರಂಭ

ಆಗಸ್ಟ್, 1 ರಿಂದ ರಾಸುಗಳ ತಳಿ ಉನ್ನತೀಕರಣ ಯೋಜನೆ ಪ್ರಾರಂಭ

31-07-2020 07:23 PM

ಮಡಿಕೇರಿ ಜು.31-ರಾಷ್ತ್ರೀಯ ಗೋಕುಲ್ ಮಿಷನ್ ಯೋಜನೆಯಡಿಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಕೊಡಗು ಜಿಲ್ಲೆ ವತಿಯಿಂದ ಕೃತಕ ಗರ್ಭಧಾರಣೆ ಮೂಲಕ ರಾಸುಗಳ ತಳಿ ಉನ್ನತೀಕರಣ ಯೋಜನೆ(ರಾಷ್ಟ್ರೀಯ ಕೃತಕ ಗರ್ಭಧಾರಣೆ ಕಾರ್ಯಕ್ರಮ) ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಕಾರ್ಯಕ್ರಮವು 2020ರ ಆಗಸ್ಟ್, 01 ರಿಂದ ಪ್ರಾರಂಭಗೊಂಡು 2021 ರ ಮೇ, 31 ರವರೆಗೆ ಚಾಲ್ತಿಯಲಿದೆ.

ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿನ ಹಸು ಮತ್ತು ಎಮ್ಮೆಗಳಲ್ಲಿ ಉತ್ಕೃಷ್ಟ ದೇಶಿ ಮತ್ತು ವಿದೇಶಿ ತಳಿಗಳ ವೀರ್ಯವನ್ನು ಬಳಸಿ ರೈತರ ಜಾನುವಾರುಗಳಿಗೆ ಉಚಿತವಾಗಿ ಕೃತಕ ಗರ್ಭಧಾರಣೆ ಮಾಡಲಾಗುವುದು. ಇದರ ಮುಖಾಂತರ ಉತ್ತಮ ಗುಣಮಟ್ಟದ ಕರುಗಳ ಜನನದಿಂದ ರಾಸುಗಳ ಉತ್ಪಾದನೆ ಹೆಚ್ಚಿಸುವ ಉದ್ದೇಶ

ಹೊಂದಲಾಗಿದೆ.

ಈ ಯೋಜನೆಯು ಭಾರತ ಸರ್ಕಾರದ ವತಿಯಿಂದ ಘೋಷಿಸಲ್ಪಟ್ಟಿದ್ದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಕರ್ನಾಟಕ ಸರ್ಕಾರದ ವತಿಯಿಂದ ಅನುಸ್ಟಾನಗೊಳಿಸಲಾಗುತ್ತಿದೆ. ಕೊಡಗು ಜಿಲ್ಲೆಯ ಎಲ್ಲಾ 303 ಗ್ರಾಮಗಳನ್ನು ಈ ಕಾರ್ಯಕ್ರಮಕ್ಕೆ ಅಳವಡಿಸಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಅತೀ ಹೆಚ್ಚು ಹಾಲು ಉತ್ಪಾದನೆ ಸಾಮಥ್ರ್ಯ ಹೊಂದಿರುವ ದೇಶಿ, ಮತ್ತು ವಿದೇಶಿ, ತಳಿಗಳ ವೀರ್ಯಗಳನ್ನು ಬಳಸಲಾಗುತ್ತದೆ. ಈ ಕಾರ್ಯಕ್ರಮದಡಿ ಕೃತಕ ಗರ್ಭಧಾರಣಾ ಕಾರ್ಯಕ್ರಮವು ಸಂಪೂರ್ಣ ಉಚಿತವಾಗಿದ್ದು, ಜಿಲ್ಲೆಯ ಪ್ರತಿಯೊಬ್ಬ ರೈತ ಬಾಂದವರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಡಾ.ಎ.ಬಿ.ತಮ್ಮಯ್ಯ ಅವರು ಕೋರಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos