whatsapp facebooktwitter

ಆ.01 ರಿಂದ 15 ರವರೆಗೆ ಶಾಲಾ ಚುಚ್ಚುಮದ್ದು ಕಾರ್ಯಕ್ರಮ ಜಿಲ್ಲಾಧಿಕಾರಿಗಳಿಂದ ಚಾಲನೆ

ಆ.01 ರಿಂದ 15 ರವರೆಗೆ ಶಾಲಾ ಚುಚ್ಚುಮದ್ದು ಕಾರ್ಯಕ್ರಮ ಜಿಲ್ಲಾಧಿಕಾರಿಗಳಿಂದ ಚಾಲನೆ

31-07-2020 07:46 PM

ದಾವಣಗೆರೆ ಜು.31.ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲೆಯಲ್ಲಿ ಆಗಸ್ಟ್ 1 ರಿಂದ 15 ರವರೆಗೆ ಶಾಲಾ ಚುಚ್ಚುಮದ್ದು ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರು ಇಂದು ಈ ಕಾರ್ಯಕ್ರಮ ಕುರಿತಾದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚುಚ್ಚುಮದ್ದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮೊದಲನೇ ಹಂತದಲ್ಲಿ ಕೋವಿಡ್ ಇಲ್ಲದೇ ಇರುವ ಗ್ರಾಮೀಣ ಭಾಗಗಳಲ್ಲಿ 5 ನೇ ಮತ್ತು 10 ನೇ ತರಗತಿ ಮಕ್ಕಳಿಗೆ ಧನುರ್ವಾಯು ಮತ್ತು ಗಂಟಲು ಮಾರಿ ರೋಗವನ್ನು ತಡೆಗಟ್ಟಲು ಡಿ.ಟಿ ಚುಚ್ಚುಮದ್ದನ್ನು ಜಿಲ್ಲೆಯ ಎಲ್ಲಾ ಉಪ ಕೇಂದ್ರ/ಹಳ್ಳಿಯ ಶಾಲೆಗಳಲ್ಲಿ

ನಿಗದಿತ ದಿನಾಂಕಗಳಂದು ಸಂಸ್ಥೆಗಳಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ನೀಡಲಾಗುವುದು. ಪೋಷಕರು ನಿಗದಿತ ದಿನಾಂಕಗಳಂದು ತಮ್ಮ ಮಕ್ಕಳನ್ನು ಶಾಲೆಗಳಿಗೆ ಕರೆದುಕೊಂಡು ಬಂದು ಚುಚ್ಚುಮದ್ದನ್ನು ಹಾಕಿಸಬೇಕೆಂದು ಜಿಲ್ಲಾಧಿಕಾರಿಗಳು ಈ ವೇಳೆ ತಿಳಿಸಿದರು.

ಈ ವೇಳೆ ಡಿಹೆಚ್‍ಓ ಡಾ.ರಾಘವೇಂದ್ರ ಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್, ಆರ್‍ಸಿಹೆಚ್‍ಓ ಡಾ.ಮೀನಾಕ್ಷಿ ಇದ್ದರು.
ಜಿಲ್ಲೆಯಲ್ಲಿ 5ನೇ ಮತ್ತು 10 ನೇ ತರಗತಿ ಸೇರಿ ಒಟ್ಟು 54177 ಮಕ್ಕಳಿಗೆ ಚುಚ್ಚುಮದ್ದು ನೀಡುವ ಗುರಿ ಹೊಂದಲಾಗಿದೆ ಎಂದು ಆರ್‍ಸಿಹೆಚ್ ಹಾಗೂ ಡಿಹೆಚ್‍ಓ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos