whatsapp facebooktwitter

ಆತ್ಮ ನಿರ್ಭರ ಅಭಿಯಾನದ ಪಿಎಂಎಫ್‍ಎಂಎಫ್ ಯೋಜನೆಗೆ ಒಂದು ಜಿಲ್ಲೆಗೆ ಒಂದು ಉತ್ಪನವಾಗಿ ಮಾವು ಆಯ್ಕೆ: ಜಿಲ್ಲಾಧಿಕಾರಿ ನಿತೇಶ ಪಾಟೀಲ

ಆತ್ಮ ನಿರ್ಭರ ಅಭಿಯಾನದ ಪಿಎಂಎಫ್‍ಎಂಎಫ್ ಯೋಜನೆಗೆ ಒಂದು ಜಿಲ್ಲೆಗೆ ಒಂದು ಉತ್ಪನವಾಗಿ ಮಾವು ಆಯ್ಕೆ: ಜಿಲ್ಲಾಧಿಕಾರಿ ನಿತೇಶ ಪಾಟೀಲ

31-07-2020 08:48 PM

ಧಾರವಾಡ ಜು,31: ಆತ್ಮ ನಿರ್ಭರ ಅಭಿಯಾನದ ಭಾಗವಾಗಿ ಸೂಕ್ಷ್ಮ ಮತ್ತು ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು ಪ್ರೋತ್ಸಾಹಿಸಲು ರಾಜ್ಯ ಸರಕಾರದ ಸಹಯೋಗದಲ್ಲಿ ಕೇಂದ್ರ ಸರಕಾರ ಆರಂಭಿಸಿರುವ ಪಿಎಂಎಫ್‍ಎಂಎಫ್ (Scheme for formalization of micro food Processing Enterprises) ಯೋಜನೆಗೆ ಧಾರವಾಡ ಜಿಲ್ಲೆಯಿಂದ ಒಂದು ಜಿಲ್ಲೆ ಒಂದು ಬೆಳೆ ಕಾರ್ಯಕ್ರಮದಡಿ ಮಾವು ಬೆಳೆಯನ್ನು ಆಯ್ಕೆ ಮಾಡಲಾಗಿದೆ ಎಂದು ಆಯ್ಕೆ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು.
ಅವರು ಇಂದು ಮದ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜರುಗಿದ ಆತ್ಮ ನಿರ್ಭರ ಅಭಿಯಾನದ ಪಿಎಂಎಫ್‍ಎಂಎಫ್ ಕಾರ್ಯಕ್ರಮದ ಒಂದು ಜಿಲ್ಲೆ ಒಂದು ಉತ್ಪ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೇಂದ್ರ ಸಕಾರವು ಆತ್ಮ ನಿರ್ಭರ ಅಭಿಯಾನದಡಿ ಆಹಾರ ಸಂಸ್ಕರಣ ಉದ್ದಿಮೆಗಳ ಮಂತ್ರಾಲಯದಿಂದ ಪಿಎಂಎಫ್‍ಎಂಎಫ್ ಕಾರ್ಯಕ್ರಮದಡಿ ಪ್ರತಿ ಜಿಲ್ಲೆಗೆ ಒಂದು ಉತ್ಪನ್ನ ಆಯ್ಕೆ ಮಾಡಿ, ಅಸಂಘಟಿತ ವಲಯದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು ಪ್ರೋತ್ಸಾಹಿಸಿ, ಬೆಳವಣಿಗೆಗೆ ಉತ್ತೇಜನ ನೀಡಲಿದೆ.
ಈ ಯೋಜನೆಗೆ ಧಾರವಾಡ ಜಿಲ್ಲೆಯಿಂದ ಮಾವು ಉತ್ಪನ್ನವನ್ನು ಶಿಪಾರಸ್ಸು ಮಾಡಲು ಸಮಿತಿ ನಿರ್ಧರಿಸಿದೆ. ಇದರೊಂದಿಗೆ ಎರಡನೇಯ ಬೆಳೆ ಶಿಪಾರಸ್ಸಾಗಿ ಮೆಣಸಿನಕಾಯಿ ಉತ್ಪನ್ನವನ್ನು ಸೇರಿಸಲು ಸಮಿತಿ ಉತ್ಸಾಹ ತೋರಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಅಸಂಘಟಿತ ವಲಯದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು ಪ್ರೋತ್ಸಾಹಿಸಿ, ಅವುಗಳ ಸ್ಪಧಾತ್ಮಕತೆ ಹೆಚ್ಚಿಸುವುದು ಮತ್ತು ಅವುಗಳನ್ನು ಸಂಘಟಿತ ವಲಯಕ್ಕೆ ಒಳಪಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು ಮತ್ತು ಉತ್ಪಾದಕ ಸಹಕಾರಿ ಸಂಘಗಳನ್ನು ಆಹಾರ ಸಂಸ್ಕರಣ ಉದ್ದಿಮೆಗಳೊಂದಿಗೆ ಬೆಸೆಯುವುದು ಪಿಎಂಎಫ್‍ಎಂಎಫ್ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಧಾರವಾಡ ಜಿಲ್ಲೆಯಲ್ಲಿ ಸುಮಾರು 8734 ಹೆಕ್ಟೆರ್ ಪ್ರದೇಶದಲ್ಲಿ ಮಾವು ಬೆಳೆ ಇದ್ದು, ಮುಖ್ಯವಾಗಿ ಜಿಲ್ಲೆಯಲ್ಲಿ ಆಪುಸ್, ಕೇಸರ, ಪೈರಿ, ಮಲ್ಲಿಕಾ ತಳಿಯ ಮಾವುಗಳನ್ನು ಬೆಳೆಯಲಾಗುತ್ತದೆ. ಪ್ರತಿ ವರ್ಷ ಸುಮಾರ 77,458 ಮೆಟ್ರಿಕ್ ಟನ್ ಮಾವು ಉತ್ಪಾದನೆ ಇದೆ. ಮಾವು ಬೆಳೆಗಾರರು,

ಮಾರಾಟಗಾರರು, ಸಂಸ್ಕರಿಸಿ ಮಾವಿನ ಉಪ ಉತ್ಪನ್ನಗಳನ್ನು ತಯಾರಿಸುವರನ್ನು ಒಂದು ಗುಂಪು ರೀತಿಯಲ್ಲಿ ಮಾಡಿ ಅವರ ಕಾರ್ಯಗಳಿಗೆ ಪ್ರೋತ್ಸಾಹ ನೀಡುವುದು ಮತ್ತು ಈ ಮೂಲಕ ಸ್ಥಳಿಯವಾಗಿ ಹೆಚ್ಚು ಉದ್ಯೋಗ ಸೃಷ್ಟಿಸಿ, ವೈಜ್ಞಾನಿಕವಾಗಿ ಸಂಸ್ಕರಣೆ, ಪ್ಯಾಕ ಮಾಡುವುದು, ರಪ್ತು, ಮಾರಾಟಕ್ಕೆ ಉತ್ತೇಜಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.

ಸಮಿತಿ ಉಪಾದ್ಯಕ್ಷರೂ ಆಗಿರುವ ಜಿ.ಪಂ. ಸಿ.ಇ.ಓ ಡಾ.ಬಿ.ಸಿ.ಸತೀಶ ಮಾತನಾಡಿ, ಜಿಲ್ಲೆಯ ಮಾವು ಬೆಳೆಯೊಂದಿಗೆ ಈರುಳ್ಳಿ, ಹೆಸರು, ಮೆನಸಿಣಕಾಯಿ, ಜೋಳ, ಮೆಕ್ಕೆ ಜೋಳ ಸಹ ಬೆಳೆಯುತ್ತಾರೆ. ಆದರೆ ಮಾವು ಉತ್ಪನ್ನವೂ ಕಾಲ ಮಿತಿಯಲ್ಲಿ ಬಳಕೆಯಾಗಬೇಕು. ಮಾವು ಬೆಳೆಗರಿಗೆ ಮತ್ತು ಸಂಸ್ಕರಣ ಘಟಕಗಳಿಗೆ ಸಂಪರ್ಕ ಮಾಡುವದರಿಂದ ಹೆಚ್ಚು ಉದ್ಯೋಗ ಹಾಗೂ ಮಾವು ಬೆಳೆ ವಿಸ್ತರ್ಣೆಗೆ ಸಹಾಯವಾಗುತ್ತದೆ. ಅರೆ ಮಲೆನಾಡು ಜಿಲ್ಲೆಯಾಗಿರುವದರಿಂದ ಮಾವು ಬೆಳೆಯಲು ಧಾರವಾಡ ಜಿಲ್ಲೆ ಉತ್ತಮವಾದ ಮಾವು ಬೆಳೆಗೆ ಪೂರಕ ವಾತಾವರಣ ಹೊಂದಿದೆ ಎಂದು ಹೇಳಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ.ಐ.ಬಿ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಪಿಎಂಎಫ್‍ಎಂಎಫ್ ಯೋಜನೆಯಡಿ ಒಂದು ಜಿಲ್ಲೆಗೆ ಒಂದು ಉತ್ಪನ್ನವಾಗಿ ಆಯ್ಕೆ ಮಾಡುವ ಬೆಳೆಯ ಮೌಲ್ಯ ವರ್ಧನೆ, ಸಂಸ್ಕರಣೆ, ಪ್ಯಾಕಿಂಗ್, ಬ್ರಾಂಡ್ ಅಭಿವೃದ್ಧಿ, ಮಾರುಕಟ್ಟೆಗೆ ಪ್ರೋತ್ಸಾಹಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಹಯೋಗದಲ್ಲಿ ಸಬ್ಸಿಡಿ ಸಹಾಯಧನ ನೀಡಲಾಗುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಸಮಿತಿ ಸದಸ್ಯರಾದ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮೋಹನ ಭರಮಕ್ಕನವರ, ತೋಟಗಾರಿಕೆ ಇಲಾಖೆಯ ಪ್ರಭಾರಿ ಉಪನಿರ್ದೇಶಕ ಶಶಿಕಾಂತ ಕೋಟಿಮನಿ ಸೇರಿದಂತೆ ರೈತ ಉತ್ಪಾದಕ ಸಂಸ್ಥೆಗಳ ಪ್ರತಿನಿಧಿಗಳು ಮಾತನಾಡಿದರು.
ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಕೆ.ಈಶ್ವರನಾಥ, ನರ್ಬಾಡ್ ಜಿಲ್ಲಾ ವ್ಯವಸ್ಥಾಪಕ ಮಯೂರ ಕಾಂಬಳೆ, ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯ ಕೃಷಿ ಅಧಿಕಾರಿ ಮಂಜುನಾಥ.ಬಿ.ಹೂಗಾರ, ರೈತ ಉತ್ಪಾದಕ ಸಂಸ್ಥೆಗಳ ಮುಖ್ಯಸ್ಥರಾದ ಅಶೋಕ ದೊಡವಾಡ, ಪರಮೇಶ್ವರ, ಚನ್ನಬಸಯ್ಯ ಹುಬ್ಬಳ್ಳಿ, ಬಸವರಾಜ ತಾಮ್ರಗುಂಡ, ನಾರಾಯಣ ಯಲಿಗಾರ ಸೇರಿದಂತೆ ನೀರಾವರಿ, ಲೋಕೋಪಯೋಗಿ, ಪಶುಸಂಗೋಪನೆ, ಹೆಸ್ಕಾಂ, ಸಾರಿಗೆ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos