whatsapp facebooktwitter

ಸರ್ಕಾರದ ಮಾರ್ಗಸೂಚಿ ಪ್ರಕಾರ ಸ್ವಾತಂತ್ರ್ಯೋತ್ಸವ ಆಯೋಜನೆಗೆ ಸಿದ್ಧತೆ

ಸರ್ಕಾರದ ಮಾರ್ಗಸೂಚಿ ಪ್ರಕಾರ ಸ್ವಾತಂತ್ರ್ಯೋತ್ಸವ ಆಯೋಜನೆಗೆ ಸಿದ್ಧತೆ

31-07-2020 08:59 PM

ಶಿವಮೊಗ್ಗ, ಜು.31: ಕರೋನಾ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಸಿದ್ಧತೆಗಳನ್ನು ಮಾಡುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.

ಅವರು ಗುರುವಾರ ಸಂಜೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಪ್ರತಿವರ್ಷದಂತೆ ಈ ಬಾರಿಯೂ ಡಿಎಆರ್ ಪೆರೇಡ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆದರೆ ಈ ಬಾರಿ ಶಾಲಾ ಮಕ್ಕಳು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಸೀಮಿತ ಸಂಖ್ಯೆಯಲ್ಲಿ ಮಾತ್ರ ಸಾರ್ವಜನಿಕರು ಭಾಗವಹಿಸಲು ಅವಕಾಶವಿದ್ದು, ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು.

ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನರ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಿರಬೇಕು. ಸಮಾರಂಭದ ಕೊನೆಯಲ್ಲಿ ಶಾಲಾ ಮಕ್ಕಳ ಬದಲಿಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿಸಲು ಕ್ರಮ ಕೈಗೊಳ್ಳಬೇಕು.
ಸಮಾರಂಭದಲ್ಲಿ ವೈದ್ಯರು, ನರ್ಸ್‍ಗಳು, ಆಶಾ ಕಾರ್ಯಕರ್ತರು, ಪೌರ ಕಾರ್ಮಿಕರು ಸೇರಿದಂತೆ ಆಯ್ದ ಕರೋನಾ ವಾರಿಯರ್ಸ್‍ಗಳನ್ನು ಗೌರವಿಸಲಾಗುವುದು.

ಈ ಬಾರಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಸಮಾರಂಭಕ್ಕೆ ಆಹ್ವಾನಿಸಲಾಗುವುದಿಲ್ಲ. ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಅವರನ್ನು ಸನ್ಮಾನಿಸಿ ಗೌರವಿಸಲು ವ್ಯವಸ್ಥೆ ಮಾಡಬಹುದಾಗಿದೆ. ಇನ್ನುಳಿದಂತೆ ಪ್ರತಿ ವರ್ಷದಂತೆ ಸಂಭ್ರಮದಿಂದ ಸ್ವಾತಂತ್ರ್ಯೋತ್ಸವ ಆಯೋಜಿಸಬೇಕು. ಎಲ್ಲಾ ಪ್ರಮುಖ ವೃತ್ತಗಳನ್ನು ಹಾಗೂ ಸರ್ಕಾರಿ ಕಚೇರಿಗಳನ್ನು ವಿದ್ಯುದ್ದೀಪಗಳಿಂದ ಆಲಂಕರಿಸಬೇಕು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos