whatsapp facebooktwitter

ಜಿಲ್ಲೆಯಲ್ಲಿಂದು ಹೊಸದಾಗಿ 101 ಕೋವಿಡ್-19 ಪ್ರಕರಣ ಪತ್ತೆ

ಜಿಲ್ಲೆಯಲ್ಲಿಂದು ಹೊಸದಾಗಿ 101 ಕೋವಿಡ್-19 ಪ್ರಕರಣ ಪತ್ತೆ

31-07-2020 09:11 PM

ಹಾಸನ,ಜು.31 ಜಿಲ್ಲೆಯಲ್ಲಿ ಇಂದು ಹೊಸದಾಗಿ 101 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 2131 ಕ್ಕೆ ಏರಿಕೆಯಾಗಿದೆ. ಇಂದು ಇಬ್ಬರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಈವರೆಗೆ 921 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ 1149 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಇಂದು ಒಬ್ಬರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು, ಇದುವರೆಗೆ ಒಟ್ಟು 61 ಮಂದಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಬೇಲೂರು ತಾಲ್ಲೂಕಿನ 64 ವರ್ಷದ ವ್ಯಕ್ತಿ ಉಸಿರಾಟದ

ತೊಂದರೆಯಿಂದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇಂದು ಪತ್ತೆಯಾದ 101 ಪ್ರಕರಣಗಳಲ್ಲಿ 13 ಜನ ಅರಸೀಕೆರೆ ತಾಲ್ಲೂಕಿನವರು, 5 ಮಂದಿ ಚನ್ನರಾಯಪಟ್ಟಣ ತಾಲ್ಲೂಕಿನವರು, 49 ಜನ ಹಾಸನ ತಾಲ್ಲೂಕು, ಒಬ್ಬರು ಹೊಳೆನರಸೀಪುರ ತಾಲ್ಲೂಕು, ಆಲೂರು ತಾಲ್ಲೂಕಿನಲ್ಲಿ ಒಬ್ಬರು, ಅರಕಲಗೂಡು ತಾಲ್ಲೂಕಿನಲ್ಲಿ ಒಬ್ಬರು, 30 ಜನ ಬೇಲೂರು ತಾಲ್ಲೂಕಿನವರು ಹಾಗೂ ಸಕಲೇಶಪುರ ತಾಲ್ಲೂಕಿನಲ್ಲಿ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos