whatsapp facebooktwitter

ಗ್ರಾಮ ಪಂಚಾಯತಿಗಳಲ್ಲಿ ಕೋವಿಡ್-19 ಸಹಾಯವಾಣಿ ಕೇಂದ್ರ ತೆರೆಯಲು ಜಿ.ಪಂ. ಸಿಇಓ ಎನ್.ಎಂ.ನಾಗರಾಜ ಸೂಚನೆ

ಗ್ರಾಮ ಪಂಚಾಯತಿಗಳಲ್ಲಿ ಕೋವಿಡ್-19 ಸಹಾಯವಾಣಿ ಕೇಂದ್ರ ತೆರೆಯಲು ಜಿ.ಪಂ. ಸಿಇಓ ಎನ್.ಎಂ.ನಾಗರಾಜ ಸೂಚನೆ

31-07-2020 09:20 PM

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 31 ಜಿಲ್ಲೆಯಲ್ಲಿ ಕೊರೋನಾ ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕೋವಿಡ್-19 ಸಹಾಯವಾಣಿ ಕೇಂದ್ರವನ್ನು ತೆರೆದು, ಗ್ರಾಮ ಮಟ್ಟದ ಕಾರ್ಯಪಡೆಯನ್ನು ಚುರುಕು ಗೊಳಿಸುವ ಮೂಲಕ ಕೊರೋನಾ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ. ನಾಗರಾಜ ಅವರು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿ ತಾಲೂಕಿನ, ಬೀರಸಂದ್ರ ಗ್ರಾಮದ, ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ "ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ"ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳ ವಿದ್ಯುತ್ ಬಿಲ್ ಬಾಕಿ ಇದ್ದು, ತ್ವರಿತವಾಗಿ ಬೆಸ್ಕಾಂಗೆ ವಿದ್ಯುತ್ ಬಿಲ್ ಪಾವತಿಸಿ, ರಶೀದಿಯನ್ನು ಜಿಲ್ಲಾ ಪಂಚಾಯತಿಗೆ ಸಲ್ಲಿಸಲು ತಿಳಿಸಿದರಲ್ಲದೆ,

ಸ್ವಚ್ಛ ಭಾರತ್ ಮಿಷನ್-ಗ್ರಾಮೀಣ ಹಾಗೂ ಜಲ್ ಜೀವನ್ ಮಿಷನ್ ಯೋಜನೆಗಳಡಿ ಕೈಗೊಂಡಿರುವ ವೈಯಕ್ತಿಕ ಶೌಚಾಲಯ, ಘನ ತ್ಯಾಜ್ಯ ಸಂಗ್ರಹಣೆ ಘಟಕ, ಶುದ್ಧ ಕುಡಿಯುವ ನೀರಿನ ಘಟಕ, ಸಮುದಾಯ ಶೌಚಾಲಯ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದರು .

ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಕೆ.ಕರಿಯಪ್ಪ ಅವರು ಮಾತನಾಡಿ ನರೇಗಾ ಯೋಜನೆಯಡಿ, ಗೋಕಟ್ಟೆ ಕಾಮಗಾರಿ, ಬದು ನಿರ್ಮಾಣ ಕಾಮಗಾರಿ, ಕೃಷಿಹೊಂಡ ಕಾಮಗಾರಿ, ಚರಂಡಿ ಕಾಮಗಾರಿ, ಗಿಡ ನೆಡುವ ಕಾಮಗಾರಿ, ನಮ್ಮ ಹೊಲ ನಮ್ಮ ದಾರಿ, ದನಗಳ ಕುಡಿಯುವ ನೀರಿನ ತೊಟ್ಟಿ, ಕಿಚನ್ ಗಾರ್ಡನ್, ಸೊಕ್ ಪಿಟ್, ಶಾಲೆ ಕಂಪೌಂಡ್ ಮತ್ತು ಆಟದ ಮೈದಾನ ನಿರ್ಮಾಣ ಮುಂತಾದ ಕಾಮಗಾರಿಗಳನ್ನು ಹೆಚ್ಚು ನಿರ್ಮಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಕಾರ್ಯ ನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರುಗಳು, ತಾಲ್ಲೂಕುಗಳ ಅಭಿಯಂತರರು ಜಿಲ್ಲಾ ಎಸ್.ಬಿ.ಎಂ.ಜಿ. ಸಮಾಲೋಚರುಗಳು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ತಾಲ್ಲೂಕುಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos