whatsapp facebooktwitter

ವೈದ್ಯಾಧಿಕಾರಿಗಳ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಡಿಸಿಗೆ ಮನವಿ

ವೈದ್ಯಾಧಿಕಾರಿಗಳ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಡಿಸಿಗೆ ಮನವಿ

14-09-2020 06:20 PM

ದಾವಣಗೆರೆ ಸೆ.14 ಸರ್ಕಾರಿ ವೈದ್ಯಾಧಿಕಾರಿಗಳ ನ್ಯಾಯುತವಾದ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಸೆ.21 ರಿಂದ ತುರ್ತು ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸುತ್ತೇವೆ ಎಂದು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಜಿಲ್ಲಾ ಶಾಖೆ ವತಿಯಿಂದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ರಾಜ್ಯ ವೈದ್ಯಾಧಿಕಾರಿಗಳ ಸಂಘವು ಸರ್ಕಾರಕ್ಕೆ ಜುಲೈ 22 ರಂದು ಹಲವು ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಮನವಿಯನ್ನು ಸಲ್ಲಿಸಿದ್ದು, ಆಗಸ್ಟ್ 15 ರೊಳಗೆ ನ್ಯಾಯಯುತ

ಬೇಡಿಕೆಗಳು ಈಡೇರದ ಪಕ್ಷದಲ್ಲಿ ಹಂತ ಹಂತವಾಗಿ ಮುಷ್ಕರದ ಮೊರೆ ಹೋಗುವುದಾಗಿ ಸರ್ಕಾರದ ಗಮನಕ್ಕೆ ತರಲಾಗಿತ್ತು.
ಆದರೆ ಇದುವರೆಗೂ ನಮ್ಮ ಬೇಡಿಕೆಗಳು ಈಡೇರಿರುವುದಿಲ್ಲ. ಆದ್ದರಿಂದ ಸೆ.14 ರಿಂದ ಇಲಾಖೆಯ ಕಾರ್ಯಕ್ರಮ ಅನುಷ್ಟಾನದ ಬಗ್ಗೆ ಸರ್ಕಾರಕ್ಕೆ ನೀಡುತ್ತಿರುವ ವರದಿಗಳನ್ನು ಸ್ಥಗಿತಗೊಳಿಸಿ ಆರೋಗ್ಯ ಸೇವೆಗಳನ್ನು ನೀಡುವುದು ಹಾಗೂ ಸೆ.21 ರಿಂದ ತುರ್ತು ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸುತ್ತೇವೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಡಾ.ಎಲ್.ನಾಗರಾಜ್ ಮನವಿಯಲ್ಲಿ ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

ಕರ್ನಾಟಕ ಲೋಕಾಯುಕ್ತ ಕಚೇರಿಯ ಹೊಸ ದೂರವಾಣಿ ಸಂಪರ್ಕ

ದಾವಣಗೆರೆ ಸೆ.22.ಲೋಕಾಯುಕ್ತ ಕಚೇರಿಯ ಹಳೆಯ ಸ್ಥಿರ ದೂರವಾಣಿ ಸಂಖ್ಯೆ: 08192-230164 ಸಂಪರ್ಕವನ್ನು ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಕಡಿತಗೊಳಿಸಿ ಹೊಸ ದೂರವಾಣಿ...

Read More

22-09-2020 08:17 PM

Read More
×E-Paperಸಾಹಿತ್ಯGeneralVideos