whatsapp facebooktwitter

ಧಾರವಾಡ-ಬೆಳಗಾವಿ ನೇರ ರೈಲು ಮಾರ್ಗ : ತ್ವರಿತ ಭೂಸ್ವಾಧೀನ ಕಾರ್ಯ -ಸಚಿವ ಜಗದೀಶ ಶೆಟ್ಟರ್

ಧಾರವಾಡ-ಬೆಳಗಾವಿ ನೇರ ರೈಲು ಮಾರ್ಗ : ತ್ವರಿತ ಭೂಸ್ವಾಧೀನ ಕಾರ್ಯ -ಸಚಿವ ಜಗದೀಶ ಶೆಟ್ಟರ್

14-09-2020 07:35 PM

ಧಾರವಾಡ ಸೆ.14: ಧಾರವಾಡ ಮತ್ತು ಬೆಳಗಾವಿ ಮಧ್ಯೆ ನೇರ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿರುವುದರಿಂದ, ಮಾರ್ಗ ನಿರ್ಮಾಣಕ್ಕೆ ಈಗಾಗಲೇ ಸಮೀಕ್ಷೆ ಮಾಡಿರುವ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ರೇಲ್ವೆ ಇಲಾಖೆಗೆ ನೀಡುವ ಕಾರ್ಯವನ್ನು ರಾಜ್ಯ ಸರ್ಕಾರ ತ್ವರಿತವಾಗಿ ಕೈಗೊಳ್ಳಲಿದೆ ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಹೇಳಿದರು.

ನಗರದ ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿಯಲ್ಲಿಂದು ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೈಲು ಮಾರ್ಗದ ನಿರ್ಮಾಣದಿಂದ ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಸರಕು ಸಾಗಣೆ ಕಾರ್ಯದಲ್ಲಿ ಭಾರೀ ಪ್ರಮಾಣದ ಸಮಯ ಮತ್ತು ಇಂಧನ ಉಳಿತಾಯವಾಗಲಿದೆ. ಹೊಸ ರೈಲು ಮಾರ್ಗ ನಿರ್ಮಾಣದಿಂದ ಅಳ್ನಾವರ ಭಾಗದ ಜನತೆ ಆತಂಕಕ್ಕೀಡಾಗುವ ಅಗತ್ಯವಿಲ್ಲ. ಆ ಮಾರ್ಗದಲ್ಲಿನ ಪ್ರಯಾಣಿಕರಿಗೆ ರೈಲ್ವೇ ಸೌಕರ್ಯಗಳು ಕುಂಠಿತವಾಗುವದಿಲ್ಲ ಎಂದರು.

ಮುಂಬಯಿ-ಬೆಂಗಳೂರು

ಮಧ್ಯೆ ಬೃಹತ್ ಕೈಗಾರಿಕಾ ಕಾರಿಡಾರ್ ಸ್ಥಾಪನೆ ಕುರಿತು ಕೇಂದ್ರ ಸಚಿವ ಪಿಯೂμï ಘೋಯೆಲ್ ಹಾಗೂ ಯಾದಗಿರಿ ಜಿಲ್ಲೆಯ ಕಡೆಚೂರು ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಫಾರ್ಮಾ ಪಾರ್ಕ್ ಸ್ಥಾಪನೆ ಕುರಿತು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರನ್ನು ಭೇಟಿಯಾಗಲು ಪೂರ್ವನಿಗದಿತ ಭೇಟಿ ಸಮಯ ಪಡೆದುಕೊಂಡ ಹಿನ್ನೆಲೆಯಲ್ಲಿ ನವದೆಹಲಿಗೆ ತೆರಳಿದ್ದೆ. ಈ ಭೇಟಿ ಸಂಪೂರ್ಣವಾಗಿ ಇಲಾಖೆಯ ಅಭಿವೃದ್ಧಿ ಕಾರ್ಯಕ್ಕೆ ಸಂಬಂಧಿಸಿದೆ. ಯಾವುದೇ ರಾಜಕೀಯ ಅರ್ಥ ಕಲ್ಪಿಸಬಾರದು ಎಂದು ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟ ಪಡಿಸಿದರು.

ಕೈಗಾರಿಕಾ ಉತ್ಪಾದನಾ ಚಟುವಟಿಕೆಗಳಿಗೆ ಆಮ್ಲಜನಕ ಕೊರತೆಯುಂಟಾಗಿರುವುದು ತಿಳಿದು ಬಂದಿದೆ. ಕೊರೊನಾ ಸೋಂಕಿತರ ಸಂಖ್ಯೆ ಅಧಿಕವಾಗಿರುವುದರಿಂದ ಜೀವ ರಕ್ಷಣೆ ಹಾಗೂ ವೈದ್ಯಕೀಯ ಚಿಕಿತ್ಸೆಗೆ ಆಮ್ಲಜನಕ ಪೂರೈಕೆಗೆ ಮೊದಲ ಆದ್ಯತೆ ನೀಡಲಾಗಿದೆ. ಆಮ್ಲಜನಕ ಉತ್ಪಾದನೆಯಲ್ಲಿ ಕುಂಠಿತವಾಗಿಲ್ಲ. ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆ ತಾತ್ಕಾಲಿಕವಾದುದು ಎಂದು ಸಚಿವರು ಹೇಳಿದರು.


ನಿಮ್ಮ ಅನಿಸಿಕೆ ತಿಳಿಸಿ

Read More News

ಚಿಕ್ಕಜಂತಕಲ್ ಗ್ರಾಮದಲ್ಲಿ ಪೋಷಣ ಮಾಸಾಚರಣೆ ಹಾಗೂ ಉಡಿತುಂಬ ಕಾರ್ಯಕ್ರಮ

ಗಂಗಾವತಿ ; .ಚಿಕ್ಕ ಜಂಥಕಲ್ ಗ್ರಾಮದಲ್ಲಿ ಶಿಶು ಅಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಶಿಕ್ಷಣ ಇಲಾಖೆ ಕೃಷಿ ಇಲಾಖೆ ಇವರ ಸಂಯುಕ್ತ...

Read More

23-09-2020 07:55 AM

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

Read More
×E-Paperಸಾಹಿತ್ಯGeneralVideos