whatsapp facebooktwitter

ಮಕ್ಕಳಲ್ಲಿ ಸಾಹಿತ್ಯ, ಸಂಗೀತ,ವೈಜ್ಞಾನಿಕ ಮನೋಭಾವ ವಿಕಸನಕ್ಕೆ ರಾಜ್ಯದಾದ್ಯಂತ ಚಟುವಟಿಕೆಗಳ ವಿಸ್ತರಣೆ-ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ

ಮಕ್ಕಳಲ್ಲಿ ಸಾಹಿತ್ಯ, ಸಂಗೀತ,ವೈಜ್ಞಾನಿಕ ಮನೋಭಾವ ವಿಕಸನಕ್ಕೆ ರಾಜ್ಯದಾದ್ಯಂತ ಚಟುವಟಿಕೆಗಳ ವಿಸ್ತರಣೆ-ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ

14-09-2020 07:39 PM

ಧಾರವಾಡ ಸೆ.14:ಮಕ್ಕಳಲ್ಲಿ ಸಾಹಿತ್ಯ, ಸಂಗೀತ, ಕಲೆ, ಶಿಕ್ಷಣ, ವೈಜ್ಞಾನಿಕ ಮನೋಭಾವ ಬೆಳೆಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ ಹೇಳಿದರು.

ನಗರದ ಅಕಾಡೆಮಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಮಕ್ಕಳು ಸಾಹಿತ್ಯ, ಸಂಗೀತ, ಕ್ರೀಡೆ ಸೇರಿದಂತೆ ಎಲ್ಲ ವಲಯಗಳಲ್ಲಿ ಬೆಳೆಯಬೇಕು. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಎಲ್ಲಾ ಜಿಲ್ಲೆಗಳಲ್ಲಿ ಚಟುವಟಿಕೆಗಳ ವಿಸ್ತರಣೆಗೆ ಕ್ರಮ ವಹಿಸಲಾಗುವುದು. ಪ್ರಸ್ತುತ ಅಕಾಡೆಮಿಗೆ ಸರಕಾರ 3 ಕೋಟಿ.ರೂ.ವಾರ್ಷಿಕ ಅನುದಾನ ನೀಡುತ್ತಿದೆ. ಮಕ್ಕಳ ಕ್ಷೇತ್ರದ ಸವಾರ್ಂಗೀಣ ಬೆಳವಣಿಗೆಯ

Advertise

ಹಿತದೃಷ್ಟಿಯಿಂದ ಅನುದಾನ ಹೆಚ್ಚಿಸಲು ಸರ್ಕಾರಕ್ಕೆ ಮನವಿ ಮಾಡುವುದಾಗಿ ಹೇಳಿದರು.

ಅಧಿಕಾರಿಗಳು ಹಾಗೂ ಮಕ್ಕಳ ಸಾಹಿತ್ಯಾಸಕ್ತರ ಸಭೆ ಕರೆದು ಚಟುವಟಿಕೆಗಳ ಕುರಿತು ಯೋಜನೆಗಳನ್ನು ರೂಪಿಸಲಾಗುವುದು ಎಂದರು.

ಬೃಹತ್ ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ನೂತನ ಅಧ್ಯಕ್ಷರು ಅಕಾಡೆಮಿ ಮುನ್ನಡೆಸಲು ಉತ್ಸುಕರಾಗಿದ್ದಾರೆ. ಸರ್ಕಾರದಿಂದ ಅವರಿಗೆ ಎಲ್ಲಾ ಅಗತ್ಯ ಪೆÇ್ರೀತ್ಸಾಹ ನೀಡಲಾಗುವುದು ಎಂದರು.

ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಅರವಿಂದ ಬೆಲ್ಲದ, ಅಮೃತ ದೇಸಾಯಿ, ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಮಾಜಿ ಶಾಸಕರಾದ ಎಸ್.ವಿ. ಸಂಕನೂರ, ಸೀಮಾ ಮಸೂತಿ ಮತ್ತಿತರರು ಇದ್ದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos