whatsapp facebooktwitter

ಗ್ರಾಮದಲ್ಲಿ ಮಣ್ಣು ಪರೀಕ್ಷಾ ಪ್ರಯೋಗಾಲಯ ಸ್ಥಾಪನೆ

ಗ್ರಾಮದಲ್ಲಿ ಮಣ್ಣು ಪರೀಕ್ಷಾ ಪ್ರಯೋಗಾಲಯ ಸ್ಥಾಪನೆ

14-09-2020 07:45 PM

ಹಾಸನ,ಸೆ.14. ಗ್ರಾಮೀಣ ಯುವಕರಿಗೆ ಉದ್ಯೋಗ ಸೃಷ್ಠಿ ಮತ್ತು ನಿಗದಿತ ಸಮಯದಲ್ಲಿ ಮಣ್ಣು ಮಾದರಿಗಳ ವಿಶ್ಲೇಷಣೆ ಮಾಡುವ ಉದ್ದೇಶದಿಂದ ಮಣ್ಣು ಆರೋಗ್ಯ ನಿರ್ವಹಣೆ ಸಂಬಂದಿಸಿದಂತೆ ಗ್ರಾಮ ಮಟ್ಟದಲ್ಲಿ ಮಣ್ಣು ಪರೀಕ್ಷಾ ಪ್ರಯೋಗಾಲಯವನ್ನು ಸ್ಥಾಪಿಸಲು ಕೇಂದ್ರ ಸರ್ಕಾರವು ಮಾರ್ಗಸೂಚಿಯನ್ನು ನೀಡಿರುತ್ತದೆ.
ಈ ಕುರಿತು ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ಕನಿಷ್ಠ ಪಕ್ಷ ಮೆಟ್ರಿಕ್‍ನಲ್ಲಿ ಎರಡನೇ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.
ಅರ್ಜಿದಾರರು, ಫಲಾನುಭವಿಗಳು ಗ್ರಾಮ ಮಟ್ಟದಲ್ಲಿ ಮಣ್ಣು ಪರೀಕ್ಷಾ ಘಟಕಗಳನ್ನು ಸ್ಥಾಪಿಸಲು ಸ್ವಂತ ಕಟ್ಟಡ ಅಥವಾ ಬಾಡಿಗೆ ಕಟ್ಟಡವನ್ನು ಹೊಂದಿರಬೇಕು. ಕನಿಷ್ಠ ನಾಲ್ಕು ವರ್ಷಗಳ ಅವಧಿಗೆ ಬಾಡಿಗೆ ಕರಾರು ಪತ್ರವನ್ನು ಹೊಂದಿರಬೇಕು.
ಅರ್ಜಿದಾರರು ಅರ್ಜಿಗಳನ್ನು ಅಗತ್ಯ ಶೈಕ್ಷಣಿಕ ಅರ್ಹತೆ, PAN ಸಂಖ್ಯೆ ಮತ್ತು ಆದಾರ್ ಸಂಖ್ಯೆಯ ದಾಖಲಾತಿಗಳನ್ನು ಸಲ್ಲಿಸುವುದು.
ಕೃಷಿ ಕ್ಲಿನಿಕ್ ಮತ್ತು ಕೃಷಿ ವ್ಯಾಪಾರ

Advertise

ಕೇಂದ್ರಗಳು (Agri clinics and agri buisness centers), ಕೃಷಿ ಉದ್ದಿಮೆದಾರರು, ಮಾಜಿ ಯೋಧರು, ಸ್ವಸಹಾಯ ಸಂಘಗಳು, ರೈತರ ಉತ್ಪಾದಕರ ಸಂಸ್ಥೆಗಳು (FPOs), ರೈತ ಉತ್ಪನ್ನ ಕಂಪನಿಗಳು ರೈತರ ಜಂಟಿ ಜವಾಬ್ದಾರಿ ಗುಂಪುಗಳು, ರೈತರ ಸಹಕಾರ ಸಂಘಗಳು, PAC, ಪರಿಕರಗಳ ರೀಟೇಲ್ ಔಟ್‍ಲೆಟ್‍ಗಳು, ಪರಿಕರಗಳ ರೀಟೇಲ್‍ದಾರರಿಗೆ, ಆರ್ಥಿಕ ಸಹಾಯನ್ನು ನೀಡಲು ಅವಕಾಶವಿರುತ್ತದೆ. ಮಹಿಳಾ ಸ್ವಸಹಾಯ ಗುಂಪುಗಳನ್ನು ಆದ್ಯತೆ ಮೇಲೆ ಪರಿಗಣಿಸಲಾಗುವುದು.
ಗ್ರಾಮ ಮಟ್ಟದಲ್ಲಿ ಮಣ್ಣು ಪರೀಕ್ಷಾ ಪ್ರಯೋಗಾಲವನ್ನು ಸ್ಥಾಪಿಸಲು ಆರ್ಥಿಕ ಸಹಾಯವನ್ನು ನೀಡಲಾಗುವುದು. ಪ್ರಾಯೋಜನೆಯ ಒಟ್ಟು ವೆಚ್ಚ ರೂ 5.00 ಲಕ್ಷಗಳಾಗಿದ್ದು ಫಲಾನುಭವಿಗಳಿಗೆ ಯೋಜನಾ ವೆಚ್ಚದ ಶೇ.75.00ರಷ್ಟು ಆರ್ಥಿಕ ಸಹಾಯವನ್ನು ಸಬ್ಸಿಡಿಯನ್ನಾಗಿ ನೀಡಲಾಗುತ್ತದೆ. ಉಳಿದ ಶೇ.25.00ರಷ್ಟು ಯೋಜನಾ ವೆಚ್ಚವನ್ನು ಫಲಾನುಭವಿಗಳು ಭರಿಸುವುದು.
ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಆಯಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos