whatsapp facebooktwitter

ಚಿತ್ರಕಲೆ, ಶಿಲ್ಪಕಲೆ, ಪದವಿ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ಚಿತ್ರಕಲೆ, ಶಿಲ್ಪಕಲೆ, ಪದವಿ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

14-09-2020 07:49 PM

ಹಾಸನ,ಸೆ.14- ಕನ್ನಡ ವಿಶ್ವವಿದ್ಯಾಲಯ ಹಂಪಿ ಬಾದಾಮಿ ಕೇಂದ್ರದಲ್ಲಿ ನಡೆಸಲಾಗುತ್ತಿರುವ ಚಿತ್ರಕಲೆ ಹಾಗೂ ಶಿಲ್ಪಕಲಯ 4 ವರ್ಷದ ಪದವಿ ಕೋರ್ಸ್‍ಗಳ ವ್ಯಾಸಾಂಗಕ್ಕೆ 2020-21ನೇ ಸಾಲಿಗೆ ಪ್ರವೇಶಗಳು ಪ್ರಾರಂಭವಾಗಿವೆ. ಪಿ.ಯು.ಸಿ., ಐ.ಟಿ.ಐ., ಜೆ.ಓ.ಡಿ.ಸಿ ಹಾಗೂ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಕನ್ನಡ ವಿಶ್ವವಿದ್ಯಾಲಯ ಹಂಪಿಯ ವಿಸ್ತರಣಾ ಕೇಂದ್ರವಾದ ಬಾದಾಮಿ ಬನಶಂಕರಿಯಲ್ಲಿ ನಡೆಸಲಾಗುತ್ತಿರುವ ಚಿತ್ರಕಲೆ ಮತ್ತು ಶಿಲ್ಪಕಲೆಯ 4 ವರ್ಷದ ಪದವಿ ತರಗತಿಗಳು ಇನ್ನತರ ಸಾಮಾನ್ಯ ಪದವಿಗಳಾದ ಬಿ.ಎ., ಬಿ.ಕಾಂ., ಬಿ.ಎಸ್.ಸಿ., ಬಿ.ಎಸ್.ಡಬ್ಲೂ. ಇನ್ನಿತರ ತತ್ಸಮಾನ ಪದವಿಗಳಂತೆ ಪದವಿ ಹಂತದ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳು, ಬ್ಯಾಂಕಿಂಗ್, ಕೆ.ಎ.ಎಸ್., ಐ.ಎ.ಎಸ್., ರೈಲ್ವೆ ಇಲಾಖೆ, ಎಫ್.ಡಿ.ಎ. ಮುಂತಾದವುಗಳನ್ನು ಬರೆಯಲು ಅವಕಾಶವಿದೆ.

ಉನ್ನತ ವ್ಯಾಸಾಂಗ ಮಾಡುವವರಿಗೆ ಎಂ.ವಿ.ಎ., ಎಂ.ಎಫ್.ಎ., ಎಂ.ಫಿಲ್., ಪಿ.ಎಚ್.ಡಿ. ಮತ್ತು ಬೇರೆ ಕ್ಷೇತ್ರಗಳಾದ ಪತ್ರಿಕೋಧ್ಯಮ, ಬಿ.ಪಿಎಡ್., ಮುಂತಾದವುಗಳನ್ನು ಕಲಿಯಲು ಅವಕಾಶಗಳಿವೆ.ದೃಶ್ಯಕಲೆಯ ಈ ಪದವಿಗಳನ್ನು ಸ್ವಉದ್ಯೋಗ ಪ್ರಧಾನವಾಗಿ ರೂಪಿಸಲಾಗಿದೆ. ಸಾಂಪ್ರದಾಯಿಕ

ಶಿಲ್ಪಕಲೆಯ ಪದವೀಧರರು ಸ್ವಂತ ಸ್ಟುಡಿಯೋ ಆರಂಭಿಸಿ ಜನರಿಗೆ ಉದ್ಯೋಗ ನೀಡುತ್ತಿದ್ದಾರೆ. ಚಿತ್ರಕಲಾ ಪದವೀಧರರು ಚಲನಚಿತ್ರ, ಧಾರವಾಹಿ, ದೂರದರ್ಶನಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಇದಲ್ಲದೇ ಎನಿಮೇಷನ್, ಪೋಸ್ಟರ್ ಡಿಸೈನ್, ಸ್ಕೆಚಿಂಗ್ ತಿಳಿದಿರುವವರು ಬೇರೆ ಬೇರೆ ವಾಣಿಜ್ಯ ಕಂಪನಿಗಳು, ಜಾಹಿರಾತು ಸಂಸ್ಥೆಗಳು, ಟೆಕ್ಸ್‍ಟೈಲ್ ಡಿಸೈನ್ಸ್, ಪತ್ರಿಕೋಧ್ಯಮ, ಫ್ಯಾಶನ್ ಡಿಸೈನ್ ಮುಂತಾದ ಅನೇಕ ಕಡೆಗಳಲ್ಲಿ ಕೆಲಸ ಮಾಡಬಹುದು.

ಬಾದಾಮಿ ಕೇಂದ್ರದಲ್ಲಿ ನಿರಂತರವಾಗಿ ಪ್ರಖ್ಯಾತ ಕಲಾವಿದರು ಮತ್ತು ಸೃಜನಶೀಲ ಯು ಕಲಾವಿದರಿಂದ ಕಲಾಪ್ರಾತ್ಯಕ್ಷಿತೆ ಹಾಗೂ ಉಪನ್ಯಾಸಗಳನ್ನು ಏರ್ಪಡಿಸಲಾಗಿರುತ್ತದೆ. ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕಲಾ ಶಿಬಿರ, ಕಾರ್ಯಗಾರ, ಕಲಾ ಪ್ರದರ್ಶನಗಳು ನಿರಂತರವಾಗಿ ನಡೆಯುತ್ತವೆ. ಕೇಂದ್ರವು ನಾಡೋಜ ಡಾ. ಆರ್.ಎಂ. ಹಡಪದ ಅವರ ಹೆಸರಿನಲ್ಲಿ ಚಿತ್ರಕಲೆ ಹಾಗೂ ಶಿಲ್ಪಕಲೆಯ ಸುಸಜ್ಜಿತ ಆರ್ಟ್ ಗ್ಯಾಲರಿಯನ್ನು ಹೊಂದಿದೆ. ಇಲ್ಲಿ ಸಂಪ್ರದಾಯ ಶಿಲ್ಪ ಮತ್ತು ಚಿತ್ರಗಳನ್ನು ಸಂಗ್ರಹಿಸಿದ್ದು, ಪ್ರದರ್ಶನ ಹಾಗೂ ಅಧ್ಯಯನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9449256814 ಅನ್ನು ಸಂಪರ್ಕಿಸಬಹುದು.


ನಿಮ್ಮ ಅನಿಸಿಕೆ ತಿಳಿಸಿ

Read More News

ಚಿಕ್ಕಜಂತಕಲ್ ಗ್ರಾಮದಲ್ಲಿ ಪೋಷಣ ಮಾಸಾಚರಣೆ ಹಾಗೂ ಉಡಿತುಂಬ ಕಾರ್ಯಕ್ರಮ

ಗಂಗಾವತಿ ; .ಚಿಕ್ಕ ಜಂಥಕಲ್ ಗ್ರಾಮದಲ್ಲಿ ಶಿಶು ಅಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಶಿಕ್ಷಣ ಇಲಾಖೆ ಕೃಷಿ ಇಲಾಖೆ ಇವರ ಸಂಯುಕ್ತ...

Read More

23-09-2020 07:55 AM

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

Read More
×E-Paperಸಾಹಿತ್ಯGeneralVideos