whatsapp facebooktwitter

ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್

ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್

14-09-2020 07:58 PM

ಮಡಿಕೇರಿ ಸೆ.14:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಫೋಷಣ ಅಭಿಯಾನ ಯೋಜನೆಯಡಿ’ ಅಂಗನವಾಡಿ ಸೇವೆಗಳ ಡಿಜಿಟಲೀಕರಣಗೊಳಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ನಗರದ ಜಿ.ಪಂ.ಭವನದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಸಾಂಕೇತಿಕವಾಗಿ ಸ್ಮಾರ್ಟ್ ಫೆÇೀನ್ ವಿತರಿಸಿದರು.
ಈ ವೇಳೆ ಪೆÇೀಷಣ್ ಅಭಿಯಾನ್ ಸಂಬಂಧಿಸಿದಂತೆ ಪೆÇೀಸ್ಟರ್ ಬಿಡುಗಡೆ ಮಾಡಿದರು. ಈ ಸಂದರ್ಭ ಮಾತನಾಡಿದ ಸಚಿವರು ಕೇಂದ್ರ ಸರ್ಕಾರ ರಾಜ್ಯಕ್ಕೆ 129 ಕೋಟಿ ರೂ.ಬಿಡುಗಡೆ ಮಾಡಿದ್ದು, ರಾಜ್ಯದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾಗುತ್ತಿದೆ. ರಾಜ್ಯದ 66 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ಈ ಉಚಿತ ಮೊಬೈಲ್ ನೀಡಲಾಗುತ್ತಿದೆ ಎಂದರು.
ಅಲ್ಲದೆ ಜಿಲ್ಲೆಯ 921 ಅಂಗನವಾಡಿಗಳಿಗೆ ಸ್ಯಾಮ್‍ಸಂಗ್ ಕಂಪೆನಿಯ 10 ಸಾವಿರ ರೂ. ಮೌಲ್ಯದ ಮೊಬೈಲ್‍ನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.
ರಾಜ್ಯದಲ್ಲಿ ಯಾವುದೇ ಮಕ್ಕಳು,

ತಾಯಂದಿರು ಅಪೌಷ್ಠಿಕತೆಯಿಂದ ಬಳಲಬಾರದು. ಅಂಗನವಾಡಿಗಳಲ್ಲಿ ನೀಡುವ ಔಷಧೋಪಚಾರ ಸೇರಿದಂತೆ ಮತ್ತಿತರ ವಿಚಾರಗಳ ಬಗ್ಗೆ ಮೊಬೈಲ್ ಮೂಲಕ ಮಾಹಿತಿ ಸಂಗ್ರಹಿಸಬಹುದಾಗಿದೆ ಎಂದರು.

ಅಲ್ಲದೆ ಅಂಗನವಾಡಿಗಳಲ್ಲಿ ಮಕ್ಕಳಿಗೆ ಚುಚ್ಚುಮದ್ದು, ದಾಖಲಾತಿ ಸಂಖ್ಯೆಗಳ ಬಗ್ಗೆಯೂ ಸಹ ಮೊಬೈಲ್ ಮೂಲಕ ಮಾಹಿತಿ ಪಡೆಯಬಹುದಾಗಿದೆ ಎಂದು ಸಚಿವರು ಹೇಳಿದರು.
ಮಾತೃಪೂರ್ಣ, ಮಾತೃ ವಂದನ ಸೇರಿದಂತೆ 40 ಬಗೆಯ ಕಾರ್ಯಕ್ರಮ ಕಡತಗಳ ನಿರ್ವಹಣೆ ಮಾಡಬಹುದು ಎಂದು ವಿ.ಸೋಮಣ್ಣ ಅವರು ತಿಳಿಸಿದರು.
ನೆಟ್‍ವರ್ಕ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಗಮನ ಸೆಳೆದರು. ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿ.ಇ.ಒ ಭನ್ವರ್ ಸಿಂಗ್ ಮೀನಾ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಕ್ಷಮಾ ಮಿಶ್ರ, ಡಿಸಿಎಫ್ ಗಳಾದ ಪ್ರಭಾಕರನ್, ಮಹೇಶ್ ಕುಮಾರ್ ಇತರರು ಇದ್ದರು.


ನಿಮ್ಮ ಅನಿಸಿಕೆ ತಿಳಿಸಿ

Read More News

ಚಿಕ್ಕಜಂತಕಲ್ ಗ್ರಾಮದಲ್ಲಿ ಪೋಷಣ ಮಾಸಾಚರಣೆ ಹಾಗೂ ಉಡಿತುಂಬ ಕಾರ್ಯಕ್ರಮ

ಗಂಗಾವತಿ ; .ಚಿಕ್ಕ ಜಂಥಕಲ್ ಗ್ರಾಮದಲ್ಲಿ ಶಿಶು ಅಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಶಿಕ್ಷಣ ಇಲಾಖೆ ಕೃಷಿ ಇಲಾಖೆ ಇವರ ಸಂಯುಕ್ತ...

Read More

23-09-2020 07:55 AM

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

Read More
×E-Paperಸಾಹಿತ್ಯGeneralVideos