whatsapp facebooktwitter

ಕೇಂದ್ರದ ಅನುಮತಿ ಬಳಿಕ ಮೇಕೆದಾಟು ಅಣೆಕಟ್ಟು ನಿರ್ಮಾಣ : ರಮೇಶ್ ಜಾರಕಿಹೊಳಿ

ಕೇಂದ್ರದ ಅನುಮತಿ ಬಳಿಕ ಮೇಕೆದಾಟು ಅಣೆಕಟ್ಟು ನಿರ್ಮಾಣ : ರಮೇಶ್ ಜಾರಕಿಹೊಳಿ

14-09-2020 08:46 PM

ರಾಮನಗರ, ಸೆ. 14 : ಪ್ರಸ್ತಾಪಿತ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ 9000 ಕೋಟಿ ರೂ.ಗಳ ವೆಚ್ಚದ ವಿಸ್ತöÈತ ಯೋಜನಾ ವರದಿಗೆ (ಡಿಪಿಆರ್) ಅನುಮೋದನೆ ಪಡೆದುಕೊಂಡ ಬಳಿಕ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ತಿಳಿಸಿದರು.
ಯೋಜನೆಗೆ ಸಂಬAಧಿಸಿದAತೆ ಅರ್ಕಾವತಿ ಮತ್ತು ಕಾವೇರಿ ಸೇರುವ ಸಂಗಮ ಹಾಗೂ ಜಲಾಶಯ ನಿರ್ಮಿಸಲಾಗುವ ಉದ್ದೇಶಿತ ಒಂಟಿಗುAಡ್ಲು ಪ್ರದೇಶಕ್ಕೆ ಇಂದು ಭೇಟಿ ನೀಡಿ, ಸ್ಥಳ ಪರಿಶೀಲಿಸಿದ ಬಳಿಕ ಮಾತನಾಡಿದ ಸಚಿವರು, ಅಣೆಕಟ್ಟು ನಿರ್ಮಾಣವಾಗುವುದರಿಂದ ಸುಮಾರು 5051 ಹೆಕ್ಟೇರ್ ಅರಣ್ಯ ಭೂಮಿ ಮುಳುಗಡೆಯಾಗಲಿದೆ. ಹೀಗಾಗಿ, ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮೋದನೆ ಪಡೆದುಕೊಳ್ಳುವುದು ಅಗತ್ಯವಾಗಿದೆ ಎಂದರು.
ಪ್ರಸ್ತಾಪಿತ ಯೋಜನೆಗಾಗಿ ಒಟ್ಟಾರೆಯಾಗಿ 5252 ಹೆಕ್ಟೇರ್ ಪ್ರದೇಶದ ಅವಶ್ಯಕತೆ ಇದೆ. ಇದರಲ್ಲಿ 3181 ಹೆ. (ಶೇ. 63ರಷ್ಟು) ವನ್ಯಜೀವಿ ಪ್ರದೇಶವಾಗಿದೆ. 1870 ಹೆ. (ಶೇ. 37) ಮೀಸಲು ಅರಣ್ಯ ಪ್ರದೇಶವಾಗಿದ್ದರೆ 201 ಹೆಕ್ಟೇರ್ ಕಂದಾಯ ಪ್ರದೇಶವಾಗಿರುತ್ತದೆ. ಈ ಪೈಕಿ ಶೇ. 63ರಷ್ಟು ಪ್ರದೇಶ ವನ್ಯಜೀವಿ ಪ್ರದೇಶವಾಗಿರುವುದರಿಂದ ಕೇಂದ್ರದ ಪರಿಸರ ಸಚಿವಾಲಯದಿಂದ ಅನುಮತಿ ಪಡೆದುಕೊಳ್ಳವುದು ಅಗತ್ಯವಾಗಿದೆ ಎಂದು ವಿವರಿಸಿದರು.
ಸಚಿವ ಸಂಪುಟದಲ್ಲಿ ಅನುಮತಿ: ಪ್ರಸ್ತಾಪಿತ ಜಲಾಶಯಕ್ಕಾಗಿ ಈಗಾಗಲೇ ಪರಿಷ್ಕöÈತ ವಿಸ್ತçತಯೋಜನಾ ವರದಿಯನ್ನು (ಡಿಟೈಲ್ಡ್ ಪ್ರಾಜೆಕ್ಟ್ರಿಪೋರ್ಟ್ - ಡಿಪಿಆರ್) ಸಿದ್ದಪಡಿಸಿ 2019ರ ಜನವರಿ ತಿಂಗಳಲ್ಲಿ ಕೇಂದ್ರಕ್ಕೆ ಸಲ್ಲಿಸಲಾಗಿತ್ತು. ಇದಕ್ಕೆ ಕೇಂದ್ರದ ಜಲ ಆಯೋಗದ ವಿವಿಧ ನಿರ್ದೇಶನಾಲಯಗಳಲ್ಲಿ ಪರಿಶೀಲನೆಯಲ್ಲಿದೆ. ಇವುಗಳಿಂದ ಅನುಮೋದನೆ ದೊರೆತ ತಕ್ಷಣವೆ ಡಿಪಿಆರ್ ಅನ್ನು ಸಚಿವ ಸಂಪುಟದ ಮುಂದಿರಿಸಿ, ಅನುಮೋದನೆ ಪಡೆದುಕೊಂಡ ಬಳಿಕ ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಜಾರಕಿಹೊಳಿ ಅವರು ತಿಳಿಸಿದರು.
ದೆಹಲಿ ಭೇಟಿ: ಅಣೆಕಟ್ಟು ನಿರ್ಮಾಣಕ್ಕಾಗಿ ಈಗಾಗಲೆ 2019ರ ನವೆಂಬರ್ ಮತ್ತು ಕಳೆದ ಜುಲೈ 14ರಂದು ಕೇಂದ್ರದ ಜಲಶಕ್ತಿ ಸಚಿವರನ್ನು ಖುದ್ದು ಭೇಟಿಮಾಡಿ ಚರ್ಚಿಸಲಾಗಿದೆ. ಹಾಗೆಯೇ, ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವೇಡ್ಕರ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದನ್ನು ಸ್ಮರಿಸಿದ ಸಚಿವರು, ಮುಂದಿನ ಬುಧವಾರ ಇಲ್ಲವೆ ಗುರುವಾರ (ಸೆ. 16/17) ಮತ್ತೊಮ್ಮೆ ಪರಿಸರ ಸಚಿವರನ್ನು ಭೇಟಿಮಾಡಿ ಯೋಜನೆಯ ಅಗತ್ಯತೆಯನ್ನು ಮನವರಿಕೆ ಮಾಡಿಕೊಟ್ಟು ಅನುಮೋದನೆ ಪಡೆದುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಕೇಂದ್ರಕ್ಕೆ ಒತ್ತಡ: ಮೇಕೆದಾಟು ಜಲಾಶಯಕ್ಕೆ ಭೇಟಿನೀಡಿ ಪರಿಶೀಲಿಸಿದ ಬಳಿಕ ಮತ್ತಷ್ಟು ವಾಸ್ತವಾಂಶಗಳ ಸಹಿತ ದೆಹಲಿಗೆ ತೆರಳಿ ಕೇಂದ್ರದ ಪರಿಸರ ಸಚಿವರಿಗೆ ಮನವರಿಕೆ ಮಾಡಿಕೊಡುವುದರ ಜೊತೆಗೆ, ಅಗತ್ಯ ಬಿದ್ದರೆ ಕೇಂದ್ರದ ಮೇಲೆ ಮತ್ತಷ್ಟು ಒತ್ತಡ ಹೇರಿ ಶೀಘ್ರ ಅನುಮೋದನೆಗಾಗಿ ಮುಖ್ಯಮಂತ್ರಿ

ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಿಯೋಗವನ್ನು ದೆಹಲಿಗೆ ಕರೆದುಕೊಂಡು ಹೋಗುವ ಬಗ್ಗೆಯೂ ಚಿಂತನೆ ನಡೆಸಿರುವುದಾಗಿ ತಿಳಿಸಿದರು.
ಕುಡಿಯುವ ನೀರಿನ ಯೋಜನೆ: ವ್ಯರ್ಥವಾಗಿ ಹರಿದು ಹೋಗುತ್ತಿದ್ದ ಕಾವೇರಿ ನದಿ ನೀರನ್ನು ಸದ್ಭಳಕೆ ಮಾಡಿಕೊಳ್ಳುವ ಉದ್ದೇಶದಿಂದ ಇಲ್ಲಿ ಅಣೆಕಟ್ಟು ನಿರ್ಮಿಸುವ ಉದ್ದೇಶವನ್ನು ಹೊಂದಲಾಗಿದೆ. ಸಮಗ್ರ ಕುಡಿಯುವ ನೀರಿನ ಯೋಜನೆಗಾಗಿ ಅರ್ಕಾವತಿ ಮತ್ತು ಕಾವೇರಿ ನದಿಯ ಸಂಗಮದ ಸಮೀಪದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಸಮತೋಲನ ಜಲಾಶಯವನ್ನು ನಿರ್ಮಿಸಲಾಗುತ್ತಿದೆ. ಭವಿಷ್ಯದಲ್ಲಿ ಬೆಂಗಳೂರು ನಗರಕ್ಕೆ ಇಲ್ಲಿಂದ ಕುಡಿಯುವ ನೀರನ್ನು ಪೂರೈಸಲಾಗುವುದು ಎಂದರು.

ತಮಿಳುನಾಡಿಗೂ ನೀರು: ಕಾವೇರಿ ನ್ಯಾಯಾಧೀಕರಣದ ಅಂತಿಮ ತೀರ್ಪು ಹಾಗೂ ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಸಾಮಾನ್ಯ ಮಳೆ ವರ್ಷದಲ್ಲಿ 177.25 ಟಿಎಂಸಿ ನೀರನ್ನು ಮಾಸಿಕವಾಗಿ ಹರಿಸಲಾಗುವುದು. ಅದೇ ರೀತಿ ಬೆಂಗಳೂರಿಗೆ ಹಂಚಿಕೆಯಾಗಿರುವ 4.75 ಟಿಎಂಸಿ ನೀರನ್ನು ಉಪಯೋಗಿಸಿಕೊಳ್ಳಲಾಗುವುದು ಎಂದು ಜಾರಕಿಹೊಳಿ ಅವರು ಮಾಹಿತಿ ನೀಡಿದರು.
ಯೋಜನಾ ಸ್ಥಳ: ಮುಗ್ಗೂರು ಮತ್ತು ಹನೂರು ಅರಣ್ಯ ವಲಯದ ನಡುವಿನ ಒಂಟಿಗುAಡ್ಲು ಬಳಿ ಪ್ರಸ್ತಾಪಿತ ಮೇಕೆದಾಟು ಅಣೆಕಟ್ಟನ್ನು ನಿರ್ಮಿಸಲು ಸ್ಥಳ ಗುರುತಿಸಲಾಗಿದೆ. ಸುಮಾರು 441.20 ಮೀಟರ್ ಎತ್ತರ ಹಾಗೂ ಸರಿಸುಮಾರು 674.5 ಮೀಟರ್ ನಷ್ಟು ಅಗಲವಿರುವ ಈ ಉದ್ದೇಶಿತ ಅಣೆಕಟ್ಟೆಯಲ್ಲಿ 67.16 ಟಿಎಂಸಿ ನೀರನ್ನು ಶೇಖರಿಸಿಟ್ಡುಕೊಳ್ಳುವ ಸಾಮರ್ಥ್ಯ ಹೊಂದಿರುತ್ತದೆ. 17 ಕ್ರಸ್ಟ್ಗೇಟ್ ಹೊಂದಿರುವ ಜಲಾಶಯದಲ್ಲಿ 7.7 ಟಿಎಂಸಿಯಷ್ಟು ನೀರುಡೆಡ್ ಸ್ಟೊರೇಜ್ ನಲ್ಲಿ ಸಂಗ್ರಹವಾಗಿರುತ್ತದೆ.

ವಿದ್ಯುತ್‌ಘಟಕ: ಒಂಟಿಗುAಡ್ಲುವಿನಿAದ 3.5. ಕಿ.ಮೀ ದೂರದಲ್ಲಿ ತಮಿಳುನಾಡಿಗೆ ಬಿಡುವ ನೀರಿನಿಂದ ಸುಮಾರು 400 ಮೆಗಾ ವಾಟ್ ವಿದ್ಯುತ್‌ಉತ್ಪಾದಿಸುವ ಉದ್ದೇಶವಿದೆ. ಇಂಧನ ಇಲಾಖೆಯ ವತಿಯಿಂದ ಇಲ್ಲಿ ವಿದ್ಯುತ್‌ಘಟಕವನ್ನು ಸ್ಥಾಪಿಸಲಾಗುವುದು ಎಂದು ಸಚಿವರು ಯೋಜನೆಯ ರೂಪುರೇಷೆಗಳನ್ನು ವಿವರಿಸಿದರು.
ನ್ಯಾಯಾಲಯದಲ್ಲಿ ಪ್ರಕರಣ: ಪ್ರಸ್ತಾಪಿತ ಮೇಕೆದಾಟುಯೋಜನೆಗೆ ಸಂಬAಧಿಸಿದAತೆ ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರ ನೀಡಿದ ಅನುಮತಿಯಂತೆ ಸಲ್ಲಿಸಿರುವ ವಿಸ್ತöÈತ ಯೋಜನಾ ವರದಿಯನ್ನು ತಡೆಹಿಡಿಯುವಂತೆ ಕೋರಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. ಇದಕ್ಕೆ ಕೇಂದ್ರ ಮತ್ತುರಾಜ್ಯ ಸರ್ಕಾರಗಳು ಪ್ರತ್ಯುತ್ತರ ಸಲ್ಲಿಸಿರುತ್ತವೆ. ಪ್ರಕರಣವು ಸುಪ್ರೀಂಕೋರ್ಟ್ ನಲ್ಲಿ ಬಾಕಿ ಇರುವುದಾಗಿ ರಮೇಶ್ ಜಾರಕಿಹೊಳಿ ಅವರು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಯಪ್ರಕಾಶ್, ಮುಖ್ಯ ಇಂಜಿನಿಯರ್ ಶಂಕ್ರರೇಗೌಡ, ಸೂಪರಿಂಟೆAಡ್ ಇಂಜಿನಿಯರ್ ವಿಜಯ್‌ಕುಮಾರ್, ಮತ್ತು ಕಾರ್ಯನಿರ್ವಾಹಕ ಇಂಜಿನಿಯರ್ ವಂಕಟೇಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು.


ನಿಮ್ಮ ಅನಿಸಿಕೆ ತಿಳಿಸಿ

Read More News

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

ಕರ್ನಾಟಕ ಲೋಕಾಯುಕ್ತ ಕಚೇರಿಯ ಹೊಸ ದೂರವಾಣಿ ಸಂಪರ್ಕ

ದಾವಣಗೆರೆ ಸೆ.22.ಲೋಕಾಯುಕ್ತ ಕಚೇರಿಯ ಹಳೆಯ ಸ್ಥಿರ ದೂರವಾಣಿ ಸಂಖ್ಯೆ: 08192-230164 ಸಂಪರ್ಕವನ್ನು ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಕಡಿತಗೊಳಿಸಿ ಹೊಸ ದೂರವಾಣಿ...

Read More

22-09-2020 08:17 PM

Read More
×E-Paperಸಾಹಿತ್ಯGeneralVideos