whatsapp facebooktwitter

ಗ್ರಾಮೀಣ ಮಟ್ಟದಲ್ಲಿ ರಸಪ್ರಶ್ನೆ ಕಾರ್ಯಕ್ರಮ ಸೆ.18 ರಂದು

ಗ್ರಾಮೀಣ ಮಟ್ಟದಲ್ಲಿ ರಸಪ್ರಶ್ನೆ ಕಾರ್ಯಕ್ರಮ ಸೆ.18 ರಂದು

14-09-2020 09:41 PM

  ಬಳ್ಳಾರಿ, ಸೆ : ಐ.ಟಿ, ಬಿ.ಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ 2020-21ನೇ ಸಾಲಿನ ಗ್ರಾಮಾಂತರ ಪ್ರದೇಶದಲ್ಲಿ ವ್ಯಾಸಂಗ ಮಾಡುತ್ತಿರುವ 8 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ 2020ರ ಗ್ರಾಮೀಣ ರಸಪ್ರಶ್ನೆ ಕಾರ್ಯಕ್ರಮವನ್ನು ಸೆ.18 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಿ.ರಾಮಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐ.ಟಿ ಮೇಳ ಬೆಂಗಳೂರು ಎಂಬ ಹೆಸರಿನ ಕಾರ್ಯಕ್ರಮವನ್ನು ಶಾಲಾ ಹಂತ, ಜಿಲ್ಲಾ ಹಂತ, ವಿಭಾಗ ಹಂತ ಹಾಗೂ ರಾಜ್ಯ ಮಟ್ಟದಲ್ಲಿ 4 ಹಂತಗಳಲ್ಲಿ ನಡೆಸಲಾಗುತ್ತದೆ. ಶಾಲಾ ಹಂತದಲ್ಲಿ ಮುಖ್ಯ ಗುರುಗಳು ಇಬ್ಬರು ವಿದ್ಯಾರ್ಥಿಗಳಿಗೆ ಒಂದು ತಂಡದAತೆ ತಂಡಗಳನ್ನು ರಚಿಸಿಕೊಂಡು ತಮ್ಮ ಹಂತದಲ್ಲಿ ಈ ಕಾರ್ಯಕ್ರಮವನ್ನು ಇಲಾಖೆ ಸರಬರಾಜು ಮಾಡುವ ಪ್ರಶ್ನೆ ಪತ್ರಿಕೆಗಳೊಂದಿಗೆ ಇದೇ ಸೆ.18ರ ಬೆಳಗ್ಗೆ 10 ರಿಂದ 11 ಗಂಟೆಯವರೆಗೆ ಲಿಖಿತ ಪರೀಕ್ಷೆ ರೂಪದಲ್ಲಿ ಕಾರ್ಯಕ್ರಮವನ್ನು ಜರುಗಿಸಿ ಮೌಲ್ಯ ಮಾಪನ ಮಾಡಿ ಅತ್ಯಂತ ಹೆಚ್ಚು ಅಂಕಗಳಿಸಿದ 3 ವಿದ್ಯಾರ್ಥಿಗಳನ್ನು ಪೂರ್ಣ

ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಅಂದೇ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.
ಈ ಲಿಖಿತ ಪರೀಕ್ಷೆಯು ರಾಜ್ಯಾಂದ್ಯAತ ಏಕ ಕಾಲದಲ್ಲಿ ಜರುಗುವುದರಿಂದ ದಿನಾಂಕ ಮತ್ತು ಸಮಯಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕು. ಗ್ರಾಮಾಂತರ ಪ್ರದೇಶಗಳಲ್ಲಿ ಮುಖ್ಯ ಗುರುಗಳು ಈ ಪ್ರಕಟಣೆಯನ್ನು ಸುತ್ತೋಲೆಯೆಂದು ಪರಿಗಣಿಸಿ ಕಡ್ಡಾಯವಾಗಿ ಕಾರ್ಯಕ್ರಮವನ್ನು ಆಯೋಜಿಸಿ ನಿರ್ವಹಿಸುವ ಮುಖಾಂತರ ಗ್ರಾಮೀಣ ರಸಪ್ರಶ್ನೆ 2020 ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಸೂಚಿಸಿದ್ದಾರೆ.
  ವಿದ್ಯಾರ್ಥಿಗಳು 2020-21ನೇ ಸಾಲಿನ ಗ್ರಾಮೀಣ ರಸಪ್ರಶ್ನೆ ಲಿಖಿತ ಪರೀಕ್ಷೆಗೆ ತಮ್ಮ ಶಾಲಾ ಗ್ರಂಥದಲ್ಲಿ ಲಭ್ಯವಿರುವ ಮಾಹಿತಿ ತಂತ್ರಜ್ಞಾನದ ಪುಸ್ತಕಗಳ ಸಹಾಯ ಮತ್ತು ಶಿಕ್ಷಕರ ಮಾರ್ಗದರ್ಶನದಲ್ಲಿ ಹಾಗೂ ಪೋಷಕರ ಸಹಕಾರದೊಂದಿಗೆ ಮತ್ತು ಹೆಚ್ಚಿನ ಮಾಹಿತಿಯೊಂದಿಗೆ ತಯಾರಿ ನಡೆಸಿ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಹಂತದಿAದ ರಾಜ್ಯಾಮಟ್ಟದಲ್ಲಿ ಪ್ರತಿನಿಧಿಸಬೇಕು ಎಂದು ಅವರು ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಚಿಕ್ಕಜಂತಕಲ್ ಗ್ರಾಮದಲ್ಲಿ ಪೋಷಣ ಮಾಸಾಚರಣೆ ಹಾಗೂ ಉಡಿತುಂಬ ಕಾರ್ಯಕ್ರಮ

ಗಂಗಾವತಿ ; .ಚಿಕ್ಕ ಜಂಥಕಲ್ ಗ್ರಾಮದಲ್ಲಿ ಶಿಶು ಅಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಶಿಕ್ಷಣ ಇಲಾಖೆ ಕೃಷಿ ಇಲಾಖೆ ಇವರ ಸಂಯುಕ್ತ...

Read More

23-09-2020 07:55 AM

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

Read More
×E-Paperಸಾಹಿತ್ಯGeneralVideos