whatsapp facebooktwitter

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹಿಸಿ ನಾಳೆ ಕಾಲ್ನಡಿಗೆ ಜಾಥಾ

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹಿಸಿ ನಾಳೆ ಕಾಲ್ನಡಿಗೆ ಜಾಥಾ

15-09-2020 01:09 PM

ಕಲಬುರಗಿ : ವೀರಶೈವ ಲಿಂಗಾಯತ ಜನಾಂಗದ ಅಭಿವೃದ್ಧಿಗೆ ಅರಸು ಅಭಿವೃದ್ಧಿ ನಿಗಮದ ಮಾದರಿಯಲ್ಲಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂದು ವೀರಶೈವ ಲಿಂಗಾಯತ ಯುವ ವೇದಿಕೆ ಜಿಲ್ಲಾಧ್ಯಕ್ಷ ದಯಾನಂದ ಎಂ.ಪಾಟೀಲ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ ಅದಕ್ಕೆ 2000 ಕೋಟಿ ರೂಪಾಯಿ ಅನುದಾನ ಮೀಸಲಿಡುವಂತೆ ಒತ್ತಾಯಿಸಿ ಸರ್ಕಾರದ ಮೇಲೆ ಒತ್ತಡ ಹೇರಲು ಸೆ.16 ರಂದು ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಕಾಲ್ನಡಿಗೆ ಜಾಥಾ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಲಾಗುವುದು ಎಂದರು.
ಎಲ್ಲಾ ವೀರಶೈವ ಲಿಂಗಾಯತ ಉಪ ಪಂಗಡಗಳನ್ನು ಓಬಿಸಿ ಪಟ್ಟಿಗೆ ಸೇರಿಸಬೇಕು, ನಡೆದಾಡುವ ದೇವರೆಂದೇ ಖ್ಯಾತಿ ಪಡೆದ ಲಿಂ.ಶಿವಕುಮಾರ ಮಹಾಸ್ವಾಮೀಜಿಯವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ

ನೀಡಬೇಕು, ಬೇಡ ಜಂಗಮ ಜಾತಿ ಪ್ರಮಾಣಪತ್ರ ನೀಡಬೇಕು, ಶರಣಬಸವೇಶ್ವರ ಮಹಾಸಂಸ್ಥಾನದ ಮಹಾ ದಾಸೋಹ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕು, ಕಲಬುರಗಿ ವಿಮಾನ ನಿಲ್ದಾಣಕ್ಕೆ ಕಲ್ಯಾಣ ಕರ್ನಾಟಕದ ಆರಾಧ್ಯ ದೈವ ಶರಣಬಸವೇಶ್ವರ ವಿಮಾನ ನಿಲ್ದಾಣ ಎಂದು ನಾಕರಣ ಮಾಡಬೇಕು, ರಾಜ್ಯದ ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿ ವೀರಶೈವ ಲಿಂಗಾಯತ ಸಮುದಾಯದ ವಿದ್ಯಾರ್ಥಿಗಳಿಗಾಗಿ ಶ್ರೀ ಸಿದ್ದಗಂಗಾ ವಿದ್ಯಾರ್ಥಿ/ವಿದ್ಯಾರ್ಥನಿಯರ ನಿಲಯ ಸ್ಥಾಪಿಸಬೇಕು, ರಾಜ್ಯ ಸರ್ಕಾರದಿಂದ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ರಜಾರಹಿತವಾಗಿ ಅಧಿಕೃತವಾಗಿ ಆಚರಿಸಬೇಕು ಎಂದು ಪಾಟೀಲ ಆಗ್ರಹಿಸಿದರು.
ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಶ್ರೀಧರ್, ಉಪಾಧ್ಯಕ್ಷ ಕಲ್ಯಾಣರಾವ ಪಾಟೀಲ ಕಣ್ಣಿ, ಜಿಲ್ಲಾ ಸಂಚಾಲಕರಾದ ಮಹೇಶಚಂದ್ರ ಪಾಟೀಲ ಕಣ್ಣಿ, ಗುರುರಾಜ ಅಂಬಾಡಿ, ಸತೀಶಕುಮಾರ ಮಾಹೂರ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.


ನಿಮ್ಮ ಅನಿಸಿಕೆ ತಿಳಿಸಿ

Read More News

ಚಿಕ್ಕಜಂತಕಲ್ ಗ್ರಾಮದಲ್ಲಿ ಪೋಷಣ ಮಾಸಾಚರಣೆ ಹಾಗೂ ಉಡಿತುಂಬ ಕಾರ್ಯಕ್ರಮ

ಗಂಗಾವತಿ ; .ಚಿಕ್ಕ ಜಂಥಕಲ್ ಗ್ರಾಮದಲ್ಲಿ ಶಿಶು ಅಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಶಿಕ್ಷಣ ಇಲಾಖೆ ಕೃಷಿ ಇಲಾಖೆ ಇವರ ಸಂಯುಕ್ತ...

Read More

23-09-2020 07:55 AM

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

Read More
×E-Paperಸಾಹಿತ್ಯGeneralVideos