whatsapp facebooktwitter

ನವೆಂಬರೊಳಗಾಗಿ ಎಲ್ಲಾ ಎಸ್‍ಸಿಪಿ, ಟಿಎಸ್‍ಪಿ ಕಾಮಗಾರಿ ಪ್ರಾರಂಭಿಸಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ

ನವೆಂಬರೊಳಗಾಗಿ ಎಲ್ಲಾ ಎಸ್‍ಸಿಪಿ, ಟಿಎಸ್‍ಪಿ ಕಾಮಗಾರಿ ಪ್ರಾರಂಭಿಸಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ

15-09-2020 03:48 PM

ಧಾರವಾಡ ಸೆ.15: ಕೊರೊನಾ ಕಾರಣದಿಂದ ವಿಳಂಬವಾಗಿರುವ ವಿಶೇಷ ಘಟಕ ಯೋಜನೆ (ಎಸ್‍ಸಿಪಿ) ಹಾಗೂ ಗಿರಿಜನ ಉಪಯೋಜನೆ (ಟಿಎಸ್‍ಪಿ)ಯ ಎಲ್ಲಾ ಕಾರ್ಯಕ್ರಮಗಳು ಹಾಗೂ ಕಾಮಗಾರಿಗಳನ್ನು ಬರುವ ನವೆಂಬರ್ ಒಳಗಾಗಿ ಪ್ರಾರಂಭಿಸಿ 2021 ರ ಫೆಬ್ರವರಿಯೊಳಗೆ ಪೂರ್ಣಗೊಳಿಸಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕು ಎಂದು ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ 2020-21 ನೇ ಸಾಲಿನ ಆಗಸ್ಟ್ ಅಂತ್ಯದವರೆಗಿನ ಜಿಲ್ಲೆಯ ವಿವಿಧ ಇಲಾಖೆಗಳ ಎಸ್‍ಸಿಪಿ ಹಾಗೂ ಟಿಎಸ್‍ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಸರ್ವಾಂಗೀಣ ವಿಕಾಸಕ್ಕಾಗಿ ಜಿಲ್ಲೆಯ ವಿವಿಧ ಇಲಾಖೆಗಳಿಗೆ ವಿಶೇಷ ಘಟಕ ಯೋಜನೆಯಡಿ (ಎಸ್‍ಸಿಪಿ) 105.74 ಕೋಟಿ ರೂ.ಗಳ ಆರ್ಥಿಕ ಗುರಿ ನಿಗದಿಪಡಿಸಲಾಗಿದೆ. ಆಗಸ್ಟ್ ಅಂತ್ಯದವರೆಗೆ 44.31 ಕೋಟಿ ರೂ. ಬಿಡುಗಡೆಯಾಗಿದೆ. 12.28 ಕೋಟಿ ರೂ. ಖರ್ಚು ಮಾಡಲಾಗಿದೆ. 40047 ಜನ ಫಲಾನುಭವಿಗಳಿಗೆ ವಿವಿಧ ಸೌಲಭ್ಯ ಕಲ್ಪಿಸಿ ಶೇ.27.73 ರಷ್ಟು ಪ್ರಗತಿ ಸಾಧಿಸಲಾಗಿದೆ.

ಪರಿಶಿಷ್ಟ ಪಂಗಡಗಳ ಜನರ ಕಲ್ಯಾಣಕ್ಕಾಗಿ ಗಿರಿಜನ ಉಪಯೋಜನೆ (ಟಿಎಸ್‍ಪಿ) ಯಡಿ ಪ್ರಸಕ್ತ ಸಾಲಿನಲ್ಲಿ 47.35 ಕೋಟಿ ರೂ. ಆರ್ಥಿಕ ಗುರಿ ಹಾಗೂ 46358 ಜನ ಫಲಾನುಭವಿಗಳ ಭೌತಿಕ ಗುರಿ ನಿಗದಿಪಡಿಸಲಾಗಿದೆ. ಆಗಸ್ಟ್ ಅಂತ್ಯದವರೆಗೆ 16.32 ಕೋಟಿ ರೂ. ಬಿಡುಗಡೆಯಾಗಿದ್ದು, 5.95 ಕೋಟಿ ರೂ.ಗಳನ್ನು ಈವರೆಗೆ ಖರ್ಚು ಮಾಡಲಾಗಿದೆ. 23876 ಜನರಿಗೆ ಸೌಕರ್ಯಗಳನ್ನು ಒದಗಿಸಿ ಶೇ.36.47 ರಷ್ಟು ಪ್ರಗತಿ ಸಾಧಿಸಲಾಗಿದೆ.

ಕೊರೊನಾ ಸೋಂಕಿನ ಕಾರಣದಿಂದ ವಿವಿಧ ಅಭಿವೃದ್ಧಿ ಚಟುವಟಿಕೆಗಳ ಅನುಷ್ಠಾನ ವಿಳಂಬವಾಗಿದೆ. ಆದರೆ ಬರುವ ನವೆಂಬರ್ ಒಳಗಾಗಿ ಎಲ್ಲಾ ಇಲಾಖೆಗಳು ತಮಗೆ ನಿಗದಿಪಡಿಸಿ ಎಸ್‍ಸಿಪಿ ಹಾಗೂ ಟಿಎಸ್‍ಪಿ

ಕಾಮಗಾರಿಗಳನ್ನು ಪ್ರಾರಂಭಿಸಬೇಕು. 2021 ಫೆಬ್ರವರಿ ಒಳಗಾಗಿ ಪೂರ್ಣಗೊಳಿಸಬೇಕು. ಎಸ್‍ಸಿಪಿ/ ಟಿಎಸ್‍ಪಿ ಯೋಜನೆಗಳಡಿ ಕೆಲವು ಕಾಮಗಾರಿಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರು ವಾಸವಿಲ್ಲದ ಕಡೆಗಳಲ್ಲಿ ಕೈಗೊಳ್ಳುತ್ತಿರುವುದಾಗಿ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಅವುಗಳ ಕುರಿತು ಸಮಾಜ ಕಲ್ಯಾಣ ಜಂಟಿ ನಿರ್ದೇಶಕರು ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಖುದ್ದು ಭೇಟಿ ನೀಡಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಂಟಿಕೃಷಿ ನಿರ್ದೇಶಕ ರಾಜಶೇಖರ್ ವಿಜಾಪುರ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ಎಸ್‍ಸಿಪಿ ಹಾಗೂ ಟಿಎಸ್‍ಪಿ ಯಡಿ ರೈತರಿಗೆ ಸಮರ್ಪಕವಾಗಿ ಬೀಜ ವಿತರಣೆ ಮಾಡಲಾಗಿದೆ. ಸೂಕ್ಷ್ಮ ನೀರಾವರಿ ಹಾಗೂ ಕೃಷಿ ಯಂತ್ರೀಕರಣದ ಚಟುವಟಿಕೆಗಳು ಹಿಂಗಾರು ಹಂಗಾಮಿನಲ್ಲಿ ಜರುಗಲಿವೆ ಎಂದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರ್ ರಾಜಶೇಖರ್ ಮುನವಳ್ಳಿ ಮಾತನಾಡಿ, ಎಸ್‍ಸಿಪಿ ಯೋಜನೆಯಡಿ 4.33 ಕೋಟಿ ರೂ. ವೆಚ್ಚದಲ್ಲಿ 38 ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯ ಗುರಿ ಹೊಂದಲಾಗಿದೆ. ಇದುವರೆಗೆ 1.15 ಕೋಟಿ ರೂ. ಬಿಡುಗಡೆಯಾಗಿದ್ದು, 1.02 ಕೋಟಿ ರೂ. ವೆಚ್ಚದಲ್ಲಿ 19 ಕಾಮಗಾರಿಗಳನ್ನು 69 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಕಾಮಗಾರಿಗಳನ್ನು ತ್ವರಿತವಾಗಿ ಪ್ರಾರಂಭಿಸಲಾಗುವುದು ಎಂದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್.ಆರ್. ಪುರುಷೋತ್ತಮ ಸಭೆಯನ್ನು ನಿರ್ವಹಿಸಿದರು. ಪಂಚಾಯತ್‍ರಾಜ್, ಸ್ವಚ್ಛಭಾರತ ಮಿಷನ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ತೋಟಗಾರಿಕೆ, ಕರ್ನಾಟಕ ವಿಶ್ವವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯ, ಜಿಲ್ಲಾ ಕೈಗಾರಿಕಾ ಕೇಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪ್ರಗತಿ ವರದಿ ಮಂಡಿಸಿದರು.


ನಿಮ್ಮ ಅನಿಸಿಕೆ ತಿಳಿಸಿ

Read More News

ಚಿಕ್ಕಜಂತಕಲ್ ಗ್ರಾಮದಲ್ಲಿ ಪೋಷಣ ಮಾಸಾಚರಣೆ ಹಾಗೂ ಉಡಿತುಂಬ ಕಾರ್ಯಕ್ರಮ

ಗಂಗಾವತಿ ; .ಚಿಕ್ಕ ಜಂಥಕಲ್ ಗ್ರಾಮದಲ್ಲಿ ಶಿಶು ಅಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಶಿಕ್ಷಣ ಇಲಾಖೆ ಕೃಷಿ ಇಲಾಖೆ ಇವರ ಸಂಯುಕ್ತ...

Read More

23-09-2020 07:55 AM

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

Read More
×E-Paperಸಾಹಿತ್ಯGeneralVideos